Bangalore News:
METRO FARE HIKE ಬಗ್ಗೆಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅಸಹಜವಾಗಿ ಹೆಚ್ಚಳವಾಗಿರುವ ಕಡೆ ದರ ಕಡಿತಗೊಳಿಸುವಂತೆ ಮೆಟ್ರೋ ಎಂಡಿಗೆ ಸಿಎಂ ಸೂಚನೆ ನೀಡಿದ್ದಾರೆ. ಫೆ.9ರಂದು ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಿಸಿತ್ತು.
METRO FARE HIKE ರಿಯಾಯಿತಿ ಮುನ್ನ ಟಿಕೆಟ್ ದರದಲ್ಲಿ ಸರಾಸರಿ ಶೇ.51.55 ರಷ್ಟು ಹೆಚ್ಚಳ ಮಾಡಿದ್ದರೆ, ರಿಯಾಯಿತಿ ನಂತರದ ಟಿಕೆಟ್ ದರದಲ್ಲಿ ಶೇ.45 – 46 ರಷ್ಟು ಹೆಚ್ಚಳ ಮಾಡಲಾಗಿತ್ತು. ಆದರೆ, ಹಲವು ಪ್ರಯಾಣಿಕರು ಅನೇಕ ಮಾರ್ಗಗಳ ಟಿಕೆಟ್ ದರದಲ್ಲಿ ಶೇ.100ರವರೆಗೂ ಹೆಚ್ಚಳವಾಗಿರುವುದಾಗಿ ದೂರಿದ್ದರು.
ದರ ಏರಿಕೆಯಿಂದ ನಿತ್ಯ ಪ್ರಯಾಣಿಸುವವರು, ವಿದ್ಯಾರ್ಥಿಗಳು ಬೆಲೆ ತೆರಬೇಕಾಗುತ್ತಿದೆ ಎಂದು ಪ್ರಯಣಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ದಿನದ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ ಕಂಡಿದೆ. ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಅಸಹಜ ಹೆಚ್ಚಳವಾಗಿರುವ ಕಡೆ ದರ ಕಡಿತ ಮಾಡುವಂತೆ ಬಿಎಂಆರ್‌ಸಿಎಲ್ ಎಂಡಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
METRO FARE HIKE ಬಿಎಂಆರ್‌ಸಿಎಲ್ ಜಾರಿಗೊಳಿಸಿರುವ ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವೈಪರೀತ್ಯದಿಂದ ಕೂಡಿದೆ. ಕೆಲವು ಮಾರ್ಗಗಳಲ್ಲಿ ದುಪ್ಪಟ್ಟು ದರ ನಿಗದಿ ಪಡಿಸಲಾಗಿದೆ. ಈ ನಿಟ್ಟಿನಲ್ಲಿ ಕೂಡಲೇ ಅಸಹಜವಾಗಿ ದುಪ್ಪಟ್ಟು METRO FARE HIKE ನಿಗದಿಯಾಗಿರುವ ಕಡೆ ದರ ಕಡಿತ ಮಾಡುವಂತೆ ಬಿಎಂಆರ್‌ಸಿಎಲ್ ಎಂಡಿಗೆ ಸಿಎಂ ಸೂಚನೆ ನೀಡಿ, ಪ್ರಯಾಣಿಕರ ಹಿತರಕ್ಷಣೆ ಕಾಪಾಡಬೇಕು ಎಂದು ತಿಳಿಸಿದ್ದಾರೆ.
METRO FARE HIKE ಕೆಲ ತಾಂತ್ರಿಕ ದೋಷದಿಂದ ಈ ರೀತಿ ಕೆಲ ಮಾರ್ಗಗಳಲ್ಲಿ ಅಸಹಜ ಟಿಕೆಟ್ ದರ ಏರಿಕೆಯಾಗಿರುವುದಾಗಿ ಹೇಳಲಾಗಿದೆ. ಈಗಾಗಲೇ ಮೆಟ್ರೋ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಪರಸ್ಪರ ಬೊಟ್ಟು ಮಾಡುತ್ತಿವೆ.
ಇದು ರಾಜ್ಯ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ಮೆಟ್ರೋ ಪ್ರಯಾಣಿಕರ ಜೇಬಿಗೆ ಬರೆ ಎಳೆದಂತಾಗಿದೆ. ಪರಿಸ್ಥಿತಿಯ ಗಂಭೀರತೆ ಅರಿತ ಸಿಎಂ, ಇದೀಗ ಅಸಹಜ ದರ ಏರಿಕೆಯಾಗಿರುವ ರೂಟ್ಗಳಲ್ಲಿ ಕೂಡಲೇ ದರ ಕಡಿತಗೊಳಿಸಲು ಸೂಚಿಸಿದ್ದಾರೆ.
CM’s clarification on metro fare hike:
2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಬಳಿಕ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು.
ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳು ಸದಸ್ಯರಾಗಿದ್ದರು. ಈ ಸಮಿತಿ ಮೂರು ತಿಂಗಳ ಕಾಲ ಸಮಾಲೋಚನೆ ನಡೆಸಿದ ಬಳಿಕ ಮೆಟ್ರೋ ಟಿಕೆಟ್ ದರ ನಿಗದಿ ಪಡಿಸಿದೆ.
ಮೆಟ್ರೋ ರೈಲಿನ ಪ್ರಯಾಣ ದರ ಹೆಚ್ಚಳವನ್ನು ಕೇಂದ್ರ ಸರ್ಕಾರ ನೇಮಿಸಿದ ಸಮಿತಿ ನಿಗದಿಪಡಿಸಿದೆ ಹೊರತು ರಾಜ್ಯ ಸರ್ಕಾರವಲ್ಲ ಎಂದು ಸಿಎಂ ಸಿದ್ದರಾಮಯ್ಯ ಎರಡು ದಿನಗಳ ಹಿಂದೆಯಷ್ಟೇ ಸ್ಪಷ್ಟಪಡಿಸಿದ್ದರು.
ಇದನ್ನು ಓದಿರಿ : Adani To Develop India’s Largest ‘Skill And Employ’ Program, Partners With Singapore’s ITEES