ಬೆಂಗಳೂರು: ನಗರದ ಮೆಟ್ರೋ ಹಳಿ ಮೇಲೆ ಮರ ಬಿದ್ದ ಹಿನ್ನೆಲೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿ ಬೆಳಿಗ್ಗೆ 6.15 ರ ಸುಮಾರಿಗೆ ನೇರಳೆ ಮಾರ್ಗದ ಎಸ್ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಒಂದು ಮರ ಬಿದ್ದು ಪರಿಣಾಮವಾಗಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕವಾಗಿ ಅಡ್ಡಿಯಾಗಿದೆ ಎಂದು ಜನರ ಹೇಳಿಕೆ .
ಸದ್ಯ ನೇರಳೆ ಮಾರ್ಗದ ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ ಮತ್ತು ಎಂ ಜಿ ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಸಂಚಾರ ಮಾಡುತ್ತಿವೆ. ಮರ ತೆರವು ಕಾರ್ಯಾಚರಣೆ ಮುಂದುವರಿದಿದೆ ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಆಧಿಕಾರಿ ತಿಳಿಸಿದ್ದಾರೆ.
ಬೆಳಿಗ್ಗೆ 6.15 ಗಂಟೆ ಸುಮಾರಿಗೆ ನೇರಳೆ ಮಾರ್ಗದಲ್ಲಿನ ಎಸ್ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಒಂದು ಮರ ಬಿದ್ದ ಕಾರಣ ಕಾರ್ಯಾಚರಣೆ ತಾತ್ಕಾಲಿಕವಾಗಿ ಅಡ್ಡಿಯಾಗಿದೆ ಎಂದು ತಿಳಿಸಿದ್ದಾರೆ.