spot_img
spot_img

MINI CINEMA THEATER : ಪ್ರತಿ ಜಿಲ್ಲೆಯಲ್ಲಿ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಪರಭಾಷಾ CINEMAಗಳ ಟಿಕೆಟ್ ದರ ನಿಯಂತ್ರಣ ಮತ್ತು ಪ್ರತಿ ಜಿಲ್ಲೆಗೆ 200 ಆಸನಗಳ ಮಿನಿ CINEMAಮಂದಿರ ಸ್ಥಾಪನೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.ರಾಜ್ಯದಲ್ಲಿ ಪರಭಾಷಾ CINEMAಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ CINEMAಗಳ ಪ್ರೋತ್ಸಾಹಕ್ಕೆ ಪ್ರತಿ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಜೊತೆಗೆ ಕನ್ನಡ ಸಿನಿಮಾಗಳಿಗೆ ಎದುರಾಗಿರುವ ಥಿಯೇಟರ್​ಗಳ ಸಮಸ್ಯೆ ನಿವಾರಿಸಲು ಪ್ರತಿ ಜಿಲ್ಲೆಯಲ್ಲೂ ಮಿನಿ CINEMAಮಂದಿರ ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದರು.ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ. ಗೋವಿಂದು ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಕದ ರಾಜ್ಯಗಳಲ್ಲಿ ಪರಭಾಷಾ CINEMAಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ.

ಕನ್ನಡ ಕೆಲಸಕ್ಕೆ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುವುದು ಎಂದರು.ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಕುಮಾರ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೆ ಮಾದರಿ. ಡಾ. ರಾಜ್ ಕುಮಾರ್ ಅವರಿಗೆ ಅವರೇ ಸಾಟಿ. ಇವರಿಗೆ ಸಾಟಿ ಆಗುವವರು ಯಾರೂ ಇನ್ನೂ ಬಂದಿಲ್ಲ ಎಂದು ಸಿಎಂ ಶ್ಲಾಘಿಸಿದರುಇವರ ಕನ್ನಡ ಪರ ಹೋರಾಟದ ಬಗ್ಗೆ ಆಗಲೇ ನನಗೆ ಅಭಿಮಾನ ಇತ್ತು.

ನನಗೆ ಕನ್ನಡ ನಾಡು, ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ಇದನ್ನು ಗ್ರಹಿಸಿಯೇ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ನನ್ನನ್ನೇ ಕನ್ನಡ ಕಾವಲು ಸಮಿತಿಗೆ ಅಧ್ಯಕ್ಷನನ್ನಾಗಿಸಿದರು ಎಂದು ಸ್ಮರಿಸಿ, ಗೋವಿಂದು ಅವರ ಬದುಕು ಅವರ ಹೋರಾಟಗಳ ಕಾರಣದಿಂದಾಗಿ ಸಾರ್ಥಕವಾಗಿದೆ ಎಂದು ತಿಳಿಸಿದರು.

ಡಾ.ರಾಜ್ ಕುಮಾರ್ ಅವರ ಭಾಷಣ ಕೇಳಲು ನಾನೂ ಗೋಕಾಕ್ ಚಳವಳಿಗೆ ಹೋಗಿದ್ದೆ. ರಾಜ್ ಅವರಿಂದಾಗಿ ಕನ್ನಡ ಹೆಚ್ಚು ಶಕ್ತಿಯುತವಾಗಿ ಬೆಳೆಯಿತು. ನಾನು ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದಾಗ ಸಾ.ರಾ. ಗೋವಿಂದು ಮತ್ತು ಹಿರಿಯ ಪತ್ರಕರ್ತ ವೆಂಕಟೇಶ್ ಅವರ ಪರಿಚಯ ಮೊದಲ ಬಾರಿ ಆಯಿತು.

I sign in Kannada: ಬೇರೆ ಧರ್ಮ ಮತ್ತು ಇತರೆ ಭಾಷೆಗಳ ಬಗ್ಗೆ ಸಹಿಷ್ಣುತೆ ಇರಬೇಕು. ನಮ್ಮ ಭಾಷೆ ಬಗ್ಗೆ ಅಭಿಮಾನ ಹೆಚ್ಚಾಗಿರಬೇಕು. ತಾಯಿ ಭಾಷೆ, ತಾಯಿ ನೆಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಸಿಎಂ ಕರೆ ನೀಡಿದರು.ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲದಕ್ಕೂ ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ ಎಂದು ಇದೇ ವೇಳೆ ತಿಳಿಸಿದರು.

ಇದನ್ನು ಓದಿರಿ : THALAPATHY 69 : ದಳಪತಿ ವಿಜಯ್ ಕೊನೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಡೇಟ್ ಅನೌನ್ಸ್

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

AAMIR KHAN : ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಆ ದಿನವನ್ನು ಎಂದಿಗೂ ಮರೆಯಲಾಗದು

Hyderabad News: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ ಇಂಗ್ಲೆಂಡ್​ ವಿರುದ್ಧದ ರೋಚಕ 5ನೇ ಟಿ20 ಪಂದ್ಯಕ್ಕೆ ನಟ AAMIR KHAN ​ ಕೂಡಾ ಸಾಕ್ಷಿಯಾಗಿದ್ದರು....

VIRAT KOHLI RANJI TROPHY : ವಿರಾಟ್ ಕೊಹ್ಲಿ ಔಟ್ ಮಾಡುವುದರ ಹಿಂದೆ ಬಸ್ ಚಾಲಕನ ಮಾಸ್ಟರ್ ಪ್ಲಾನ್

New Delhi News: VIRAT KOHLI RANJI TROPHY​ ಪಡೆಯುತ್ತಿದ್ದಂತೆ ಹಿಮಾಂಶು ಸಾಂಗ್ವಾನ್​ ಕುರಿತು ಭಾರೀ ಚರ್ಚೆಯಾಗಿದ್ದವು. ವಿಶ್ವದ ಶ್ರೇಷ್ಠ ಬ್ಯಾಟರ್​ನನ್ನೇ ಔಟ್​ ಮಾಡಿದ ಹಿಮಾಂಶು...

DEEP RESEARCH : ಮತ್ತೊಂದು ಏಜೆಂಟ್ ಪರಿಚಯಿಸಿದ ಓಪನ್ಎಐ

Deep Research: ಹಣಕಾಸು, ನೀತಿ, ವಿಜ್ಞಾನ ಮತ್ತು ಎಂಜಿನಿಯರಿಂಗ್ ಇತ್ಯಾದಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ಆಳ ಮತ್ತು ವಿಶ್ವಾಸಾರ್ಹ ಸಂಶೋಧನೆಯ ಅಗತ್ಯವಿರುವವರಿಗಾಗಿ ಇದನ್ನು ರಚಿಸಲಾಗಿದೆ...

ELECTORAL BOND CASE : ಕಟೀಲ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

New Delhi News: ELECTORAL BOND CASE ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್​ನ...