spot_img
spot_img

ಬೆಳಗಾವಿಯಲ್ಲಿ ತಾಯಿ ಮಗುವಿನ ನೂತನ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಚಿವ ದಿನೇಶ ಗುಂಡೂರಾವ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಳಗಾವಿ : ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡಲು ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಬೆಳಗಾವಿ ಜಿಲ್ಲೆಯ ಕಿತ್ತೂರು, ಖಾನಾಪೂರ, ಅಥಣಿ, ಸವದತ್ತಿ ಈ ತಾಲೂಕು ಕೇಂದ್ರಗಳಲ್ಲಿ ನೂತನ ತಾಯಿ ಮಗುವಿನ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದಲ್ಲಿ ಇಂದು ನೂರು ಹಾಸಿಗೆಯುಳ್ಳ ತಾಯಿ ಮಗುವಿನ ನೂತನ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಈಗಾಗಲೇ ಕಿತ್ತೂರು ಮತ್ತು ಅಥಣಿ ತಾಲೂಕುಗಳಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಜಾಗೆಯನ್ನು ಗುರುತಿಸಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ಬೈಲಹೊಂಗಲದ ನೂತನ ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿ, ಅಗತ್ಯ ಸಲಕರಣೆ ಮತ್ತು ಇನ್ನಿತರ ಎಲ್ಲ ಸೌಕರ್ಯಗಳನ್ನು ಶೀಘ್ರದಲ್ಲಿ ಒದಗಿಸಲಾಗುವುದು. ಬೈಲಹೊಂಗಲ ತಾಲೂಕಾ ಆಸ್ಪತ್ರೆ ತೀರ ಹಳೆಯದಾಗಿದ್ದು, ಇದರ ಸೂಕ್ತ ರಿಪೇರಿಗಾಗಿ 4 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ವೈದ್ಯರು ಮತ್ತು ಇತರ ಸಿಬ್ಬಂದಿಯ ಸೇವೆಯನ್ನು ಒಂದು ವರ್ಷದ ಬದಲಾಗಿ ಎರಡು ವರ್ಷಗಳವರೆಗೆ ಮುಂದುವರೆಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...