spot_img
spot_img

ಶಾಸಕ ಮುನಿರತ್ನ ಬಂಧನ ದ್ವೇಷದ ರಾಜಕಾರಣ: ಪ್ರತಿಪಕ್ಷ ನಾಯಕ .!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು.ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವನಿ ಮುದ್ರಣ ಶಾಸಕರದ್ದೇ ಎಂದು ಸಾಬೀತಾದ ಬಳಿಕ ಬಂಧಿಸಬೇಕಿತ್ತು. ಕಾನೂನಿಗೆ ಯಾರೂ ಅಥೀತಿರಲ್ಲ

ಟಿ.ಜೆ.ಅಬ್ರಹಾಂ ದೂರಿನ ಆಧಾರದ ಮೇಲೆ ರಾಜ್ಯಪಾಲರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದರು.‌ ಆದರೂ ಅದು ಈಗ ನ್ಯಾಯಾಲಯದಲ್ಲಿದ್ದು, ಅದಕ್ಕೆ ನಾವ್ಯಾರೂ ಆಕ್ಷೇಪ ಮಾಡಿಲ್ಲ. ಆದರೆ ಇಲ್ಲಿ ದೂರು ನೀಡಿದ ಕೂಡಲೇ ವಿಚಾರಣೆ ಮಾಡದೆ‌ ನೋಟಿಸ್‌ ನೀಡದೆ ಬಂಧಿಸಲಾಗಿದೆ. ಇಲ್ಲಿ ಆತುರದ‌ ಕ್ರಮವಾಗಿದ್ದು, ಏಕಾಏಕಿ ಬಂಧನವಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಲೀಡ್ ಬಂದಿರುವುದು ಕೂಡ ಇದಕ್ಕೆ ಕಾರಣ. ಧ್ವನಿ ಮುದ್ರಣವನ್ನು ಎಫ್ಎಸ್ಎಲ್  (FSL) ಗೆ ಕಳುಹಿಸಿ,‌ ತನಿಖೆ ಮಾಡಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ. ಯಾವುದೇ ಪ್ರಕರಣದಲ್ಲಿ ಸತ್ಯವನ್ನು ಪರಿಶೀಲಿಸಬೇಕು.

ಇದನ್ನೂ ಓದಿ: ಹವಾಮಾನ ವೈಪರೀತ್ಯ ಹೆಲಿಕಾಪ್ಟರ್ ರದ್ದು; ಪ್ರಧಾನಿ ಮೋದಿ!

ಇದು ಪೂರ್ವ ಯೋಜಿತ ಎಂಬುದು ಎಲ್ಲರಿಗೂ ಗೊತ್ತಿದೆ. ನಾನು ಜಾತಿ ನಿಂದನೆ ಮಾಡಿಲ್ಲ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ. ಇದು ಸಾಬೀತು ಕೂಡ ಆಗಿಲ್ಲ. ಈ ರೀತಿ ಪ್ರಕರಣ ದಾಖಲಾದಾಗ ಪರಿಶೀಲಿಸಿಯೇ ಕ್ರಮ ಕೈಗೊಳ್ಳಬೇಕು. ರಾಯಚೂರಿನಲ್ಲಿ ಪೊಲೀಸ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಶಾಸಕನನ್ನು ಸಿಎಂ ಮನೆಗೆ ಕರೆಸಿಕೊಂಡು ಕಾಫಿ ಕೊಟ್ಟಿದ್ದರು‌. ಕೃಷಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದರು ಸಚಿವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ.

ಸರ್ಕಾರ ಎಷ್ಟೇ ಪ್ರಕರಣ‌ ದಾಖಲಿಸಿದರೂ ಬಿಜೆಪಿ (BJP) ಹೆದರುವುದಿಲ್ಲ. ಸರ್ಕಾರಕ್ಕೆ ಈಗ ಭಯ ಬಂದಿದೆ. ಪ್ರತಿ ದಿನ ವಸೂಲಿ, ಭ್ರಷ್ಟಾಚಾರ ‌ನಡೆಯುತ್ತಿರುವುದು ಮಾಧ್ಯಮಗಳಲ್ಲಿ ಬರುತ್ತಿದೆ. ಆದ್ದರಿಂದ ಹೀಗೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Vande Bharat Train: ಹುಬ್ಬಳ್ಳಿ ಮತ್ತು ಪುಣೆ ನಡುವೆ ಒಂದೇ ಭಾರತ್ ರೈಲು!

ಮಂಡ್ಯದ ನಾಗಮಂಗಲದಲ್ಲಿ ಗಣೇಶಗೂ ನಿರ್ಬಂಧ ವಿಧಿಸಲಾಗಿದೆ. ಮತಾಂಧರು ಬಾಂಬ್, ಮಚ್ಚು ಬಳಸಿ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ರಾಜಕಾಣದಿಂದಲೇ ಹೀಗಾಗಿದೆ. ಹಿಂದೂಗಳು ಮುಂದೊಂದು ದಿನ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತಾರೆ.

ಭ್ರಷ್ಟಾಚಾರ ಮತ್ತು ಕೋಮುಗಲಭೆ ಪ್ರಕರಣವನ್ನು ಬೇರೆಡೆ ತಿರುಗಿಸಲು ಈ ರೀತಿ ಮಾಡಿದ್ದಾರೆ. ಡಾ.ಜಿ.ಪರಮೇಶ್ವರ್ ಅವರಂತಹ ಹಿರಿಯ ನಾಯಕರು ಗೃಹ ಸಚಿವರಾಗಿ ಇಂತಹ ಕೆಲಸ ಮಾಡುವುದು ಶೋಭೆ ತರುವುದಿಲ್ಲ. ಇದು ಬಹಳ ಹಳೆಯ ಪ್ರಕರಣ ಎನ್ನಲಾದರೂ, ದಿಢೀರಣೆ ಈಗ ಬಂಧಿಸಿದ್ದಾರೆ. ಒಬ್ಬ ಸಾಮಾನ್ಯ ವ್ಯಕ್ತಿ ನೇರವಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.

 

 

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...