CM Siddaramaiah News:
ಸಿಎಂ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ MUDA CASE ಸೈಟ್ ಹಂಚಿಕೆ ಆರೋಪದಲ್ಲಿ ಇ.ಡಿ (ಜಾರಿ ನಿರ್ದೇಶನಾಲಯ) ಸಚಿವ ಬೈರತಿ ಸುರೇಶ್ ಸೇರಿ ಇಬ್ಬರಿಗೂ ಸಮನ್ಸ್ ಜಾರಿ ಮಾಡಿದೆ. ಇ.ಡಿ ವಿಚಾರಣೆಯ ಹಾಜರಾತಿಗೆ ವಿನಾಯಿತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಫೆಬ್ರವರಿ 20ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ನೀಡಿದೆ.
ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಬಿಟ್ಟು ಬಿಡದೇ ಕಾಡುತ್ತಿರುವ MUDA CASE ಹಗರಣಕ್ಕೆ ಮತ್ತೊಂದು ಮೆಗಾ ತಿರುವು ಸಿಕ್ಕಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಮತ್ತೆ 10 ದಿನಗಳ ಕಾಲ ಸಿಎಂ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಇಬ್ಬರಿಗೂ ತಾತ್ಕಾಲಿಕ ರಿಲೀಫ್ ನೀಡಿದೆ.
ಹೈಕೋರ್ಟ್ ಈ ಆದೇಶದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಅವರು ಫೆಬ್ರವರಿ 20ರವರೆಗೂ ಇ.ಡಿ ವಿಚಾರಣೆಗೆ ಹಾಜರಾಗುವ ಅಗತ್ಯ ಇಲ್ಲ. ಆದರೆ ಇ.ಡಿಗೆ ಆಕ್ಷೇಪಣೆ ಸಲ್ಲಿಸಲು ಒಂದು ವಾರಗಳ ಕಾಲಾವಕಾಶವನ್ನು ಹೈಕೋರ್ಟ್ ನೀಡಿದೆ. MUDA CASE ಹೈಕೋರ್ಟ್‌ನಲ್ಲಿ ಇ.ಡಿ ಪರ ವಕೀಲ ಅರವಿಂದ್ ಕಾಮತ್ ಹಾಗೂ ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದರು.
ಇ.ಡಿ ವಿಚಾರಣೆಯ ಹಾಜರಾತಿಗೆ ವಿನಾಯಿತಿ ಕೋರಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಇದೇ ವೇಳೆ ಇಬ್ಬರಿಗೂ ನೀಡಿದ್ದ ಸಮನ್ಸ್‌ಗೆ ಕೂಡ ಫೆಬ್ರವರಿ 20ರವರೆಗೆ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ.
ಇದನ್ನು ಓದಿರಿ : Caste And Gender Equations In Focus As BJP Weighs In For Delhi CM Face