CM Siddaramaiah ಮಾಡಿದ್ದೇನು?
Muda scam ಏನು ಎಂದು ನಿಮ್ಮಮನಸ್ಸಿನಲ್ಲಿ ಬಂದಿರಲೇ ಬೇಕು! ಅಥವಾ ನಿಮಗೆ ಗೊತ್ತೇ ಇದೆ ಆದರೆ ಈಗ CM Siddaramaiah ವಕೀಲರು ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿದ್ದು ಸೋಮವಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ.
Muda scam & CM Siddaramaiah:
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆ ಸಿಎಂ ರಾಜ್ಯಪಾಲರ ಅನುಮತಿ ಪ್ರಶ್ನಿಸಲು ಮುಂದಾಗಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಅನುಮತಿ ನೀಡಿದ್ದಾರೆ. ಸದ್ಯ ಕಾವೇರಿ ನಿವಾಸದಲ್ಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ವಿರುದ್ಧ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಸಿಎಂ ನಿವಾಸದಲ್ಲಿ ಕಾನೂನು ಹೋರಾಟದ ಬಗ್ಗೆ ಬಿಸಿ ಬಿಸಿ ಚರ್ಚೆಗಳು ಶುರುವಾಗಿವೆ. ಅಂದರೆ Muda scam ವಿಚಾರದಲ್ಲಿ CM Siddaramaiah ವಿಚಾರಗಳೇನು?
CM Siddaramaiahಗೆ ದಾರಿ ಏನು?
ದೂರುದಾರರಾದ ವಕೀಲ ಟಿ.ಜೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ನೀಡಿರುವ ಈ ಖಾಸಗಿ ದೂರಿಗೆ ರಾಜ್ಯಪಾಲರ ಪೂರ್ವಾನುಮತಿಯ ಬಲ ಸಿಗಲಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ನೀಡಿರುವ ಹಿನ್ನೆಲೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ಆರಂಭವಾಗಲಿದೆ. ಸಿಎಂ ತನಿಖೆ ಅಥವಾ ಕೋರ್ಟ್ ವಿಚಾರಣೆ ಎದುರಿಸಬೇಕಾಗುವುದು.
ಆರೋಪ ಕಂಡುಬಂದರೆ ತನಿಖೆ!
ಮೊದಲನೆಯದು ಮೇಲ್ನೋಟಕ್ಕೆ ಆರೋಪ ಕಂಡುಬಂದರೆ ತನಿಖೆಗೆ ಆದೇಶಿಸಬಹುದು. ಎರಡನೆಯದು ತಾವೇ ಪರಿಜ್ಞಾನಕ್ಕೆ ಪಡೆದು ಸಿಎಂಗೆ ಸಮನ್ಸ್ ಜಾರಿಗೊಳಿಸಬಹುದು. ಹಾಗೂ ಮೂರನೆಯದು ಮೇಲ್ನೋಟಕ್ಕೆ ದೂರಿನಲ್ಲಿ ಸತ್ಯಾಂಶವಿಲ್ಲ ಎನ್ನಿಸಿದರೆ ಖಾಸಗಿ ದೂರು ವಜಾಗೊಳಿಸಬಹುದು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಅನುಮತಿಯ ವಿಚಾರವೂ ಪ್ರಸ್ತಾಪವಾಗಿತ್ತು. ಅನುಮತಿ ನೀಡಿರುವುದರಿಂದ ಕೋರ್ಟ್ ಆದೇಶ ಮಹತ್ವ ಪಡೆಯಲಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ 3 ಸಾಧ್ಯತೆಗಳಿವೆ.
ಇನ್ನಷ್ಟು ಓದಿರಿ:
Karnataka Congress News: ಬಿಕೆ ಹರಿಪ್ರಸಾದ್ CM ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು ಏಕೆ?
ಜಮ್ಮು ಕಾಶ್ಮೀರ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್.. 10 ವರ್ಷಗಳ ಬಳಿಕ 3 ಮಹತ್ವದ ಹೆಜ್ಜೆ; ಏನದು?