ಮೈಸೂರು: ಹಿಂದೂಗಳ ಆಸ್ತಿಯನ್ನು ಮುಸ್ಲಿಮರು ‘ವಕ್ಫ್ ಆಸ್ತಿ’ಅಂತಾರಲ್ಲ ಅದು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್ , ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿನಾ ಇದು? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸಾವಿರಾರು ರೈತರ ಭೂಮಿಯ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನೋಂದಣಿಯಾಗಿದ್ದು, ಈ ವಿಚಾರ ರಾಜಕೀಯ ಸ್ವರೂಪವನ್ನೂ ಪಡೆಯುತ್ತಿದೆ.
ಮೈಸೂರಿನ ಹುಣಸೂರಿನಲ್ಲೂ ಗಣೇಶ ದೇವಾಲಯದ 17 ಏಕರೆ ನಮ್ಮದ್ದು ಅಂತಾ ವಕ್ಫ್ ಬೋರ್ಡ್ ಕೂತಿದೆ. ಚಿಕ್ಕಮಗಳೂರು ಇದೇ ಕಥೆ ಆಗಿದೆ. ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡ್ತಾರೆ, ಇದು ನಮ್ಮದು ಅಂತಿದ್ದಾರೆ.
ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಂರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದಿರಾ? ನಮ್ಮ ದೇವಾಲಯ, ಮಠಗಳಲ್ಲಿ ಹಾಕುವಂತೆ ಯಾವತ್ತಾದರೂ ಮಸೀದಿ ಚರ್ಚ್ ಗಳಲ್ಲಿ ಹಿಡಿ ಅನ್ನ ಯಾರಿಗಾದ್ರೂ ಹಾಕಿದ್ದಿರಾ? ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಜನಪ್ರಿಯ ನೇತಾರ ಯತ್ನಾಳ್ ಅವರೇ, ಈ ವಕ್ಫ್ ಆಕ್ರಮದ ಬಗ್ಗೆ ಮೊದಲು ಧ್ವನಿ ಎತ್ತಿದ್ದಾರೆ. ವಕ್ಫ್ ವಿಚಾರದಲ್ಲಿ ಸತ್ಯ ಶೋಧನೆಗೆ ಕಣ್ತಪಿನಿಂದ ಯತ್ನಾಳ್ ಕೈ ಬಿಟ್ಟು ಹೋಗಿತ್ತು ಅಷ್ಟೆ. ನಾನು ಕೂಡ ಯತ್ನಳ್ ಜೊತೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಮೂಡಾ ಕಷ್ಟ ಎದುರಾದಾಗ ಚಾಮುಂಡಿ ತಾಯಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿಎಂ ಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೆ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಸಿಎಂ ಈಗ ಹಿಂದೂಗಳ ವಿರುದ್ದ ನಿಲುವು ತೆಗೆದುಕೊಳ್ಳವುದಿಲ್ಲ ಎಂದುಕೊಂಡಿದ್ದೇನೆ ಎಂದು ಹೇಳಿದರು.
ಪ್ರಧಾನ ಮಂತ್ರಿಗಳು ವಕ್ಫ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನರೇಂದ್ರ ಮೋದಿ ಅವರು ವಕ್ಫ ಕಾಯ್ದೆ ಹಾಗೂ ಈ ವಕ್ಫ್ ಬೋರ್ಡ್ ಅನ್ನೇ ರದ್ದು ಮಾಡಬೇಕು ಎಂದು ಪ್ರತಾಪ ಸಿಂಹ ಆಗ್ರಹಿಸಿದರು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now