spot_img
spot_img

NARA LOKESH MEETS HDK : ಪುನಶ್ಚೇತನ ಪ್ಯಾಕೇಜ್ ಬಗ್ಗೆ ಚರ್ಚೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore/New Delhi News:

NARA LOKESH MEETS HDK ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಅವರು ಪುನಶ್ಚೇತನ ಪ್ಯಾಕೇಜ್ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್ ಅವರು ವೈಜಾಗ್ ಸ್ಟೀಲ್ ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದರು.

NARA LOKESH MEETS HDK ಕೇಂದ್ರ ಸರ್ಕಾರ ವಿಶಾಖಪಟ್ಟಣಕ್ಕೆ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ (RINl) ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಅವರು, ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.ಪ್ರಧಾನಿ ನರೇಂದ್ರ ಮೋದಿ ಅವರು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿ ನಿಗದಿ ಮಾಡಿದ್ದು, ಅದರಂತೆ ನಾವು ಉಕ್ಕು ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸಬೇಕಿದೆ. ಅದರಲ್ಲಿಯೂ ಪರಿಸರ ಪೂರಕವಾದ ಗ್ರೀನ್ ಸ್ಟೀಲ್, ಸ್ಪೆಶಾಲಿಟಿ ಸ್ಟೀಲ್ ತಯಾರಿಕೆಯಲ್ಲಿ ಭಾರತ ಮುಂಚೂಣಿಗೆ ಬರಬೇಕಿದೆ.

NARA LOKESH MEETS HDK  ಈ ನಿಟ್ಟಿನಲ್ಲಿ ವೈಜಾಗ್ ಸ್ಟೀಲ್​ಗೆ ಶಕ್ತಿ ತುಂಬಲು ಕೇಂದ್ರ ಸರ್ಕಾರ ನಿರ್ಧರಿಸಿತು ಎಂದು ಲೋಕೇಶ್ ಅವರಿಗೆ ಸಚಿವರು ಹೇಳಿದರು. ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಖಾತೆ ಸಚಿವರನ್ನು ಭೇಟಿಯಾದ ಲೋಕೇಶ್ ಅವರು, ಬಹುಮುಖ್ಯವಾಗಿ ವೈಜಾಗ್ ಸ್ಟೀಲ್ ಪುನಶ್ಚೇತನ ಯೋಜನೆ ಹಾಗೂ ಭವಿಷ್ಯದಲ್ಲಿ ಕಾರ್ಖಾನೆಯನ್ನು ಯಾವ ರೀತಿಯಲ್ಲಿ ಅಭಿವೃದ್ಧಿ ಪಥದಲ್ಲಿ ನಡೆಸಬೇಕು ಎಂಬ ಬಗ್ಗೆ ಸವಿಸ್ತಾರವಾಗಿ ಸಮಾಲೋಚನೆ ನಡೆಸಿದರು.

ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಲೋಕೇಶ್ ಅವರು ಕೇಂದ್ರ ಸಚಿವರಿಗೆ ಭರವಸೆ ನೀಡಿದರು. ಪ್ಯಾಕೇಜ್ ಪರಿಣಾಮಕಾರಿ ಬಳಕೆ ಹಾಗೂ ನಿಗದಿತ ಗುರಿಯಂತೆ ಕಾರ್ಖಾನೆಯ ಮೂರು ಬ್ಲಾಸ್ಟ್ ಫರ್ ನೆಸ್ (ಊದು ಕುಲುಮೆ)ಗಳ ಮೂಲಕ ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ತಯಾರು ಮಾಡುವುದು ಕೇಂದ್ರದ ಗುರಿಯಾಗಿದೆ.

ಈ ಗುರಿ ಸಾಧನೆಗೆ ಆಂಧ್ರ ಪ್ರದೇಶದ ಸರ್ಕಾರ ಹಾಗೂ ಕಾರ್ಮಿಕರ ಸಹಕಾರ ಅತ್ಯಗತ್ಯವಾಗಿ ಬೇಕಿದೆ ಎಂದರು.ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಚಿವರು ಹಾಗೂ ಲೋಕೇಶ್ ಅವರು ಸಮಾಲೋಚನೆ ನಡೆಸಿದರು. ಲೋಕೇಶ್, ರಾಮ್ ಮೋಹನ್ ನಾಯ್ಡು ಸೇರಿದಂತೆ ಎಲ್ಲ ಸಂಸದರನ್ನು ಮಾಜಿ ಪ್ರಧಾನಿಗಳು ಹಾಗೂ ಸಚಿವರು ಆತ್ಮೀಯವಾಗಿ ಸತ್ಕರಿಸಿದರು.

ಕಾರ್ಖಾನೆಯ ಪುನಶ್ಚೇತನ ವಿಷಯದಲ್ಲಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತೋರಿದ ಬದ್ಧತೆಯ ಶ್ಲಾಘಿಸಿದ ಕೇಂದ್ರ ಸಚಿವರು, ತಮ್ಮ ಸಚಿವಾಲಯಗಳ ವತಿಯಿಂದ ಆಂಧ್ರ ಪ್ರದೇಶದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲ ಸಹಕಾರ ನೀಡುವುದಾಗಿ ಲೋಕೇಶ್ ಅವರಿಗೆ ಹೇಳಿದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್, ಕೋಲಾರ ಸಂಸದ ಮಲ್ಲೇಶ್ ಬಾಬು ಮುಂತಾದವರು ಉಪಸ್ಥಿತರಿದ್ದರು.

ಇದನ್ನು ಓದಿರಿ : Sanam Teri Kasam Star Mawra Hocane Ties The Knot With Ameer Gilani – Wedding Photos Inside

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAVADATTI YALLAM FAIR: ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಗೆ ಹುಬ್ಬಳ್ಳಿ, ನವಲಗುಂದದಿಂದ ವಿಶೇಷ ಬಸ್

Hubli News: ಭಾರತ ಹುಣ್ಣಿಮೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸವದತ್ತಿ YALLAM ನ ಗುಡ್ಡದಲ್ಲಿರುವ ರೇಣುಕಾ ದೇವಿ ಜಾತ್ರೆಯು ವೈಭವದಿಂದ ಜರುಗಲಿದೆ. ಫೆ. 12ರಂದು (ಬುಧವಾರ)...

SPECIAL GUEST BULL : ಕಾಲೇಜು ವಾರ್ಷಿಕೋತ್ಸವಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ ಹೋರಿ

Haveri News: ನಗರದ ಭಗತಸಿಂಗ್​ ಪಿಯು ಕಾಲೇಜು ತನ್ನ ವಾರ್ಷಿಕೋತ್ಸವ ಆಚರಿಸಿದ್ದು, ಕಾರ್ಯಕ್ರಮಕ್ಕೆ ಆಡಳಿತ ಮಂಡಳಿ ವಿಶೇಷ ಅತಿಥಿಯೊಬ್ಬರನ್ನು ಆಹ್ವಾನಿಸಿತ್ತು. ಆ SPECIAL GUEST BULL...

TENANT FARMERS PROBLEMS : ಸಣ್ಣ ಮತ್ತು ಗೇಣಿದಾರ ರೈತರಿಗೆ ಸಿಗ್ತಿಲ್ಲ ಕಿಸಾನ್ ಕ್ರೆಡಿಟ್ ಕಾರ್ಡ್, ಬೆಳೆವಿಮೆ ಲಾಭ

New Delhi News: TENANT FARMERS PROBLEMS  ಹಾಗೂ ಸಣ್ಣ ರೈತರು ಸರ್ಕಾರದ ಪ್ರಯೋಜನಗಳನ್ನು ಪಡೆಯಲು ವಿಫಲರಾಗುತ್ತಿದ್ದಾರೆ. ಇಂತಹವರಿಗಾಗಿ ಸರ್ಕಾರ ಸ್ಪಷ್ಟವಾದ ನೀತಿಯೊಂದನ್ನು ರೂಪಿಸಬೇಕಾಗಿದೆ ಎಂಬುದು...

DEEPSEEK AI BANNED : ಡೀಪ್ಸೀಕ್ ಎಐ ಬಗ್ಗೆ ನಾನಾ ದೇಶಗಳ ಕಳವಳ

DeepSeek AI Banned: ಬ್ಲೂಮ್‌ಬರ್ಗ್‌ ವರದಿಯ ಪ್ರಕಾರ, ಅನೇಕ ರಾಷ್ಟ್ರಗಳ ಸರ್ಕಾರಿ ಡಿವೈಸ್​ಗಳಲ್ಲಿ ಎಐ ಡೀಪ್​ಸೀಕ್​ ಅನ್ನು ನಿಷೇಧಿಸಲಾಗಿದೆ. ಭದ್ರತಾ ಅಪಾಯಗಳನ್ನು ಉಲ್ಲೇಖಿಸಿ ಕಠಿಣ ಕ್ರ...