ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಹೊರಡಿಸುವ ಅಧಿಸೂಚನೆಗೆ ತಡೆ ನೀಡಲಾಗಿದೆ.
ಅಕ್ಟೋಬರ್ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ.
ಈ ದಿನಾಂಕದ ಪೂರ್ವದಲ್ಲಿ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದಲ್ಲಿ ಅಥವಾ ಆಯ್ಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೆ ಅಂತಹ ನೇಮಕಾತಿಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯ ಅನ್ವಯವೇ ಪೂರ್ಣಗೊಳಿಸಬಹುದಾಗಿದೆ.
ಈ ಮೇಲ್ಕಂಡ ಸೂಚನೆಗಳನ್ನು ಎಲ್ಲಾ ಆಯ್ಕೆ ಪ್ರಾಧಿಕಾರಗಳು/ನೇಮಕಾತಿ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸರ್ಕಾರ ಸುತ್ತೋಲೆಯಲ್ಲಿ ಆದೇಶಿಸಿದೆ.