Bangalore News:
ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅವಘಡ ಸಂಭವಿಸದಂತೆ ತಡೆಯಲು ಯೋಜನೆ ರೂಪಿಸುತ್ತಿದೆ. ಈಗಾಗಲೇ ಜಂಟಿ ಸಭೆ ನಡೆಸಿರುವ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು, ಹೊಸ ವರ್ಷಾಚರಣೆಗೆ ನಿಯಮಗಳನ್ನು ಸಿದ್ದಪಡಿಸಿದ್ದಾರೆ.ಮಹಾನಗರಿ ಬೆಂಗಳೂರಿನಲ್ಲಿ ಹೊಸವರ್ಷ ಬರಮಾಡಿಕೊಳ್ಳಲು ಸಿದ್ಧತೆಗಳು ನಡೆಯುತ್ತಿವೆ.ಬೆಂಗಳೂರಿನ ಹೊಸ ವರ್ಷಾಚರಣೆ ಸಂಭ್ರಮ ನಡೆಯುವುದು ಸಾಮಾನ್ಯವಾಗಿ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಕೋರಮಂಗಲ, ಕಮರ್ಷಿಯಲ್ ಸ್ಟ್ರೀಟ್, ಇಂದಿರಾನಗರಗಳಲ್ಲಿ ಸಿಸಿಟಿವಿ ಕ್ಯಾಮರೆಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಈ ಹಿಂದೆ ಕೇವಲ 200 ರಿಂದ 300 ಸಿಸಿಟಿವಿ ಕ್ಯಾಮೆರಾಗಳನ್ನು ಮಾತ್ರ ಅಳವಡಿಸಲಾಗಿತ್ತು. ಆದರೆ, ಈ ಬಾರೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇರುವುದರಿಂದ ಸುಮಾರು 800 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ.ಬೆಂಗಳೂರಿನ ಹೊಸ ವರ್ಷಾಚರಣೆ ಸಂಭ್ರಮ ನಡೆಯುವುದು ಸಾಮಾನ್ಯವಾಗಿ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಕೋರಮಂಗಲ, ಕಮರ್ಷಿಯಲ್ ಸ್ಟ್ರೀಟ್, ಇಂದಿರಾನಗರಗಳಲ್ಲಿ ಸಿಸಿಟಿವಿ ಕ್ಯಾಮರೆಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ.
Rules for New Year celebrations :
- ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು
2. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ
3. ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ಗಳು ಬಂದ್
4. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 800ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ
5. ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್
6. ಆಚರಣೆಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ
7. ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ
8. ಬಾರ್, ಪಬ್ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ಗೆ ಸೂಚನೆ
9. ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ
10. ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ