spot_img
spot_img

NEW YEAR CELEBRATION : ಹೊಸ ವರ್ಷಾಚರಣೆ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡುವವರ ವಿರುದ್ಧ ಕಠಿಣ ಕ್ರಮ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಹೊಸ ವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯತೆ ಕಾಪಾಡಬೇಕು. ವಾಣಿಜ್ಯ ಚಟುವಟಿಕೆಗಳಿಗೂ ಸಹ ನಾಳೆಯೊಳಗೆ ಮಾರ್ಗಸೂಚಿಗಳು ಬಿಡುಗಡೆಯಾಗಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚರಣೆ ಘೋಷಣೆ ಮಾಡಿದ್ದು, ಸರ್ಕಾರಿ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಮಾತ್ರ ಆಚರಿಸುತ್ತಿಲ್ಲ. ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು” ಎಂದರು.

”ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ಮನವಿ ಎಂದಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್​ ಸಂದೇಶ ರವಾನಿಸಿದರು.

ಕೆಲವೊಂದಷ್ಟು ಸಡಿಲಿಕೆಗಳ ಬಗ್ಗೆಯೂ ಯೋಚಿಸಲಾಗುತ್ತಿದೆ. ಆದರೆ ಯಾವುದೇ ರೀತಿಯಲ್ಲಿಯೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಕೆಲಸಗಳು ಆಗಬಾರದು. ಪ್ರತಿಯೊಬ್ಬರೂ ಸಹ ಕಾನೂನು ಪಾಲಿಸುವುದರ ಮೂಲಕ ಬೆಂಗಳೂರಿನ ಗೌರವ ಕಾಪಾಡಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲಾ ಚಟುವಟಿಕೆಗಳ ಮೇಲೆ ಕಣ್ಣಿಡಲಾಗಿದೆ. ಹೊಸ ವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯತೆಯನ್ನು ಕಾಪಾಡಬೇಕು. ವಾಣಿಜ್ಯ ಚಟುವಟಿಕೆಗಳಿಗೂ ಸಹ ನಾಳೆಯೊಳಗೆ ಮಾರ್ಗಸೂಚಿಗಳು ಬಿಡುಗಡೆಯಾಗಲಿವೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GALWAN VALLEY IN LEH LADAKH:ಭರದ ಕಾರ್ಯಾಚರಣೆ.

Leh (Ladakh) News: ಭಾರತೀಯ ಸೇನೆ ಮತ್ತು ಸ್ಥಳೀಯ ಮಧ್ಯಸ್ಥಗಾರರ ಸಹಯೋಗದಲ್ಲಿ ಅಧಿಕಾರಿಗಳು ಕಣಿವೆಯಲ್ಲಿ ಈ ಯೋಜನೆಗೆ ಮುಂದಾಗಿದ್ದು, ಸ್ಥಳೀಯ ಪ್ರವಾಸಿಗ ಆಕರ್ಷಿಣೀಯ ತಾಣವಾಗಿ ರೂಪಿಸುವ...

PINK SALT BENEFITS FOR HEALTH : ಪಿಂಕ್ ಉಪ್ಪಿನಿಂದ ಆರೋಗ್ಯಕ್ಕೆ ಹಲವು ಪ್ರಯೋಜನ

Pink Salt Benefits for Health News: ಹಿಮಾಲಯನ್ ಪಿಂಕ್ ರಾಕ್ SALT ಅಥವಾ ಪಿಂಕ್ ಉಪ್ಪು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ಹಲವು ಪ್ರಯೋಜನಗಳು ದೊರೆಯುತ್ತವೆ...

MACHINERY CAPITAL : ಕರ್ನಾಟಕವು ದೇಶದ ಯಂತ್ರೋಪಕರಣಗಳ ರಾಜಧಾನಿ

Bangalore News: ಭಾರತದ MACHINERY ಉದ್ಯಮದಲ್ಲಿ ಕರ್ನಾಟಕ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ ಎಂದು ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ತಿಳಿಸಿದರು.MACHINERY ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ...

SHAH JAHAN URUS: ಪ್ರವಾಸಿಗರಿಗೆ ಉಚಿತ ಪ್ರವೇಶ, ಬಿಗಿ ಭದ್ರತೆ.

Agra (Uttar Pradesh) News : ಉಚಿತ ಅಷ್ಟೇ ಅಲ್ಲ, ಪ್ರವಾಸಿಗರು ಚಕ್ರವರ್ತಿ ಷಹಜಹಾನ್ ಮತ್ತು ಬೇಗಂ ಮುಮ್ತಾಜ್ ಅವರ ನಿಜವಾದ ಸಮಾಧಿಗಳನ್ನು ವೀಕ್ಷಿಸಬಹುದಾಗಿದೆ.ಜನವರಿ 26,...