spot_img
spot_img

ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವ : ಪ್ರಧಾನಿ ಮೋದಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನೈಜೀರಿಯಾ : ಪ್ರಧಾನಿ ನರೇಂದ್ರ ಮೋದಿ ಅವರು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ (GCON) ಪುರಸ್ಕಾರವನ್ನು ಪಡೆದಿದ್ದಾರೆ.
ಈ ಗೌರವಕ್ಕೆ ಪಾತ್ರರಾದ ಎರಡನೇ ವಿದೇಶಿ ನಾಯಕ ಎಂಬ ಅಭಿದಾನಕ್ಕೆ ಪ್ರಧಾನಿ ಮೋದಿ ಅವರು ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಇಂಗ್ಲೆಂಡ್​ನ ರಾಣಿ ಎಲಿಜಬೆತ್ ಅವರು 1969 ರಲ್ಲಿ ಜಿಸಿಒಎನ್​ ಗೌರವ ಪಡೆದುಕೊಂಡಿದ್ದರು. ನೈಜೀರಿಯಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ (GCON) ಪುರಸ್ಕಾರವನ್ನು ನೀಡಿದೆ. ಪ್ರಧಾನಿ ಮೋದಿ ಅವರಿಗೆ ದೇಶವೊಂದು ನೀಡುತ್ತಿರುವ 17ನೇ ನಾಗರಿಕ ಪ್ರಶಸ್ತಿ ಇದಾಗಿದೆ.
ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಅವರು ಭಾನುವಾರ ನೈಜೀರಿಯಾಕ್ಕೆ ಭೇಟಿ ನೀಡಿದರು. ಅದ್ಧೂರಿ ಸ್ವಾಗತ ಕೋರಿದ ಅಲ್ಲಿನ ಸರ್ಕಾರ ರಾಜಧಾನಿ ಅಬುಜಾ ‘ನಗರದ ಕೀ’ ಯನ್ನು ನೀಡಿತು. ಈ ಕೀಲಿಯು ನೈಜೀರಿಯಾದ ಜನರು ಪ್ರಧಾನಿಯ ಮೇಲೆ ಇಟ್ಟಿರುವ ನಂಬಿಕೆ ಮತ್ತು ಗೌರವವನ್ನು ಸಂಕೇತಿಸುತ್ತದೆ. ಎರಡೂ ದೇಶಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ಉಭಯ ರಾಷ್ಟ್ರಗಳ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಅವರು ಭಾನುವಾರ ನೈಜೀರಿಯಾಕ್ಕೆ ಭೇಟಿ ನೀಡಿದರು. ಅದ್ಧೂರಿ ಸ್ವಾಗತ ಕೋರಿದ ಅಲ್ಲಿನ ಸರ್ಕಾರ ರಾಜಧಾನಿ ಅಬುಜಾ ‘ನಗರದ ಕೀ’ ಯನ್ನು ನೀಡಿತು. ಈ ಕೀಲಿಯು ನೈಜೀರಿಯಾದ ಜನರು ಪ್ರಧಾನಿಯ ಮೇಲೆ ಇಟ್ಟಿರುವ ನಂಬಿಕೆ ಮತ್ತು ಗೌರವವನ್ನು ಸಂಕೇತಿಸುತ್ತದೆ. ಎರಡೂ ದೇಶಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ಉಭಯ ರಾಷ್ಟ್ರಗಳ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು ಅವರ ಆಹ್ವಾನದ ಮೇರೆಗೆ ಅಲ್ಲಿಗೆ ತೆರಳಿದ್ದಾರೆ. ದ್ವಿಪಕ್ಷೀಯ ಮಾತುಕತೆಯ ಬಳಿಕ ಸೋಮವಾರ ಬ್ರೆಜಿಲ್​​ಗೆ ತೆರಳಲಿದ್ದಾರೆ. ರಿಯೊ ಡಿ ಜನೈರೊದಲ್ಲಿ ನವೆಂಬರ್​ 18-19 ರಂದು ನಡೆಯುವ ಜಿ20 ಶೃಂಗದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್​ ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ. ಬಳಿಕ ನವೆಂಬರ್​ 19 ರಿಂದ 21ರ ವರೆಗೆ ಗಯಾನ ಪ್ರವಾಸ ಮಾಡಲಿದ್ದಾರೆ.
ಮೂರು ದಿನಗಳ ಹಿಂದಷ್ಟೇ ಡೊಮಿನಿಕಾ ದೇಶವು ತನ್ನ ಅತ್ಯುನ್ನತ ನಾಗರಿಕ ಗೌರವ ‘ಡಾಮಿನಿಕಾ ಅವಾರ್ಡ್​ ಆಫ್​ ಹಾನರ್​’ ಅನ್ನು ಪ್ರಧಾನಿ ಮೋದಿ ಅವರಿಗೆ ಘೋಷಿಸಿದೆ. ಕೋವಿಡ್​ ಸಾಂಕ್ರಾಮಿಕದ ವೇಳೆ ನೀಡಿದ ನೆರವು, ಉಭಯ ದೇಶಗಳ ಬಾಂಧವ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ತೋರಿದ ಬದ್ಧತೆಯನ್ನು ಗುರುತಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಧ್ಯಕ್ಷೆ ಸಿಲ್ವೆನಿ ಬರ್ಟನ್​ ಅವರು ಮೋದಿ ಅವರಿಗೆ ಗಯಾನಾದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅಲ್ಲಿನ ಪ್ರಧಾನ ಕಚೇರಿ ತಿಳಿಸಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಸ್ಟೀಲ್ ನಟ್​ಗಳಲ್ಲಿ ಅರಳಿದ ಆದಿಯೋಗಿಯ ವಿಗ್ರಹ : ಉಡುಪಿ ಕಲಾವಿದನ ಕೈಚಳಕ

ಉಡುಪಿ: ಉಡುಪಿಯ ಮಟ್ಟು ಗ್ರಾಮದ ಡಿಪ್ಲೋಮಾ ಪದವೀಧರರೊಬ್ಬರು ಮೈಲ್ಡ್ ಸ್ಟೀಲ್ ನಟ್ಸ್​ಗಳಿಂದ 58 ಕೆ.ಜಿ. ತೂಕದ ಆದಿಯೋಗಿಯ ವಿಗ್ರಹ ತಯಾರಿಸಿ ಇಂಡಿಯನ್ ಬುಕ್ ಆಫ್...

ಭರತನಾಟ್ಯದ 52 ಮುದ್ರೆ 3 ವರ್ಷದ ಮಗು ಪ್ರದರ್ಶನ : ಗಿನ್ನಿಸ್ ದಾಖಲೆ ನಿರ್ಮಾಣ

ಕೇರಳ: ಭರತನಾಟ್ಯದ ಎಲ್ಲ 52 ಮುದ್ರೆಗಳನ್ನು ಪ್ರದರ್ಶಿಸುವ ಮೂಲಕ ಕೇರಳದ 3 ವರ್ಷದ ಪುಟ್ಟ ಮಗುವೊಂದು ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ನಲ್ಲಿ ದಾಖಲೆ ನಿರ್ಮಿಸಿದೆ. "ನನ್ನ...

ಅಂಚೆ ಚೀಟಿ ಸಂಗ್ರಹ : ಗಿನ್ನೆಸ್​ ಬುಕ್​ ಆಫ್​ ರೆಕಾರ್ಡ್ ನಿಮಿಸಿದ ನಿವೃತ್ತ ನೌಕರ

ಉಡುಪಿ: ಕೆಲವೊಮ್ಮೆ ವ್ಯಕ್ತಿಗಳ ಹವ್ಯಾಸವೇ ಅವರನ್ನು ದೊಡ್ಡ ಸಾಧನೆಯತ್ತ ಕೊಂಡೊಯ್ಯುತ್ತದೆ. ಅದರಂತೆ ಕಾಲೇಜೊಂದರ ನಿವೃತ್ತ ಕಚೇರಿ ಸಹಾಯಕ ಡೇನಿಯಲ್​ ಮೊಂತೇರೊ ಅವರು ಅಂಚೆ ಚೀಟಿ...

ಎಸ್ ಸಿ ಎಸ್ ಟಿ ಗಳ ದೌರ್ಜನ್ಯ : ಸರ್ಕಾರದ ಬ್ರಹ್ಮಾಸ್ತ್ರ

ಬೆಂಗಳೂರು: SC/ ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ಸರ್ಕಾರ ಬ್ರಹ್ಮಾಸ್ತ್ರ ರೆಡಿ ಮಾಡಿದೆ. SC/ST ಸಮುದಾಯದ ಜನರ ಮೇಲೆ...