spot_img
spot_img

ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಸೋಲು..

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ವಿರುದ್ಧ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಈ ಸೋಲು ಸಾಕಷ್ಟು ಚರ್ಚೆಗೆ ಗುರಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ. ನಿಖಿಲ್ ಸೋಲಿನ ಬಗ್ಗೆ ಅನಿತಾ ಕುಮಾರಸ್ವಾಮಿ ಅವರು ಮೌನ ಮುರಿದಿದ್ದು, ಟೀಕಿಸುವವರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ, ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು-ಸೋಲು ಹೊಸದಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ ಎಂದಿದ್ದಾರೆ.

ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ, ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ.

ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ.

ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ.

ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ. ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.

ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚೆನ್ನಾಗಿ ಗೊತ್ತು.

ನಾನು ಸದಾ ಆ ಭಗವಂತನಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ ಹಾಗೂ ಚನ್ನಪಟ್ಟಣ ಜನತೆಯ ಪ್ರೀತಿ ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ, ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನನ್ನದು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ...

ತಿರುಪತಿ: ಲಡ್ಡು ಖರೀದಿಸಲು ಇದ್ದ ಮಿತಿ ತೆಗೆದು ಹಾಕಿದ ಟಿಟಿಡಿ

ಆಂಧ್ರ ಪ್ರದೇಶ: ಇನ್ನು ಮುಂದೆ ತಿರುಪತಿಗೆ ಭೇಟಿ ನೀಡುವ ಭಕ್ತರು ಕೇಳಿದಷ್ಟೂ ಲಡ್ಡು ನೀಡಲು ಹಾಗೂ ಲಡ್ಡು ತಯಾರಿಸಲು ಬೇಕಾಗಿರುವ ಸಿಬ್ಬಂದಿ ನೇಮಕಕ್ಕೂ ಟಿಟಿಡಿ...

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ...

ಪ್ರೊಬಾ-3 ಮಿಷನ್ ಉಡಾವಣೆ ನಾಳೆಗೆ ಮುಂದೂಡಿಕೆ: ಇಸ್ರೋ

ಬೆಂಗಳೂರು: ಇಂದು ನಿಗದಿಯಾಗಿದ್ದ ಯುರೋಪಿಯನ್ ಸ್ಪೇಸ್ ಏಜೆನ್ಸಿಯ (ಇಎಸ್ಎ) ಪ್ರೊಬಾ -3 ಮಿಷನ್ ಉಡಾವಣೆಯನ್ನು ನಾಳೆಗೆ (ಡಿಸೆಂಬರ್ 5ಕ್ಕೆ) ಮುಂದೂಡಲಾಗಿದೆ. ನಾಳೆ ಭಾರತೀಯ ಕಾಲಮಾನ...