spot_img
spot_img

ಕರ್ನಾಟಕಕ್ಕೆ ಹೆಚ್ಚಿನ ಸಾಲ ಕೇಳಿದ್ದ CM ಸಿದ್ದರಾಮಯ್ಯ.. ಕೊಡಲು ಆಗಲ್ಲ ಎಂದ ನಿರ್ಮಲಾ ಸೀತಾರಾಮನ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಕರ್ನಾಟಕಕ್ಕೆ ನೀಡುವ ಸಾಲದ ಮಿತಿಯನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಹಣಕಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ನಬಾರ್ಡ್​​ ಬ್ಯಾಂಕ್​​ನಿಂದ ನೀಡುವ ಸಾಲದ ಮಿತಿಯನ್ನು ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದರು.

ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಮುಂದೆಯೇ ಎಲ್ಲ ರಾಜ್ಯಗಳ ಸಾಲದ ಮೊತ್ತವನ್ನು ಕಡಿತ ಮಾಡಲಾಗಿದೆ. ಅದರಂತೆ ಕರ್ನಾಟಕದ್ದು ಕಡಿತ ಮಾಡಲಾಗಿದೆ. ಹೀಗಾಗಿ ನಿಮಗಾಗಿ ಪ್ರತ್ಯೇಕ ನೀತಿ ರೂಪಿಸಲು ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನಬಾರ್ಡ್ ಮೂಲಕ ಕರ್ನಾಟಕ ರಾಜ್ಯದ ಸಹಕಾರಿ ಸಂಸ್ಥೆಗಳಿಗೆ ಸಾಲ ನೀಡಲಾಗುತ್ತಿತ್ತು. ಆದರೆ ಈ ವರ್ಷ ಶೇಕಡಾ 58 ರಷ್ಟು ಸಾಲದ ಪ್ರಮಾಣ ಕಡಿತ ಮಾಡಲಾಗಿದೆ.

ಇದರಿಂದ ರಾಜ್ಯದ ಡಿಸಿಸಿ ಬ್ಯಾಂಕ್, ಪಿಎಸಿಎಸ್ ಮೂಲಕ ರೈತರಿಗೆ ಅಲ್ಪಾವಧಿ ಸಾಲ ನೀಡಿಕೆ ಕಡಿತವಾಗಿದೆ.

2024-25ರಲ್ಲಿ ರಾಜ್ಯದಲ್ಲಿ 35 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡುವ ಗುರಿ ಇತ್ತು. ಆದರೆ ನಬಾರ್ಡ್ ಬ್ಯಾಂಕ್​​ನಿಂದ ಈ ವರ್ಷ 2,340 ಕೋಟಿ ರೂಪಾಯಿ ಮಾತ್ರ ನೀಡಿದ್ದರಿಂದ ಸಮಸ್ಯೆ ಆಗಿದೆ.

ಕಳೆದ ವರ್ಷ ನಬಾರ್ಡ್​ನಿಂದ ₹5,600 ಕೋಟಿ ಕೊಟ್ಟಿದ್ದರು, ಈ ವರ್ಷ ಕೇವಲ ₹2,340 ಕೋಟಿಗೆ ಇಳಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯಕ್ಕೆ ಕೊಡುವ ಆರ್ಥಿಕ ನೆರವು ಶೇ.58 ರಷ್ಟು ಕಡಿಮೆ ಆಗಿದೆ.

ಹೀಗಾಗಿಯೇ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಿ ನಬಾರ್ಡ್​​ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದ್ದರು.

ಇದೇ ವೇಳೆ ಸಿಎಂ ಜೊತೆ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಜರಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...