spot_img
spot_img

ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ವೀಕ್ಷಣೆಗೆ ಹುಬ್ಬಳ್ಳಿಯಿಂದ NWKRTC ವಿಶೇಷ ಬಸ್​

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹುಬ್ಬಳ್ಳಿ: ಕರ್ನಾಟಕದ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಲಿಂಗನಮಕ್ಕೆ ಜಲಾಶಯ (Linganmakki Dam) ತಂಬಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಶರಾವತಿ ನದಿಗೆ (Sharavati River) ಬಿಡಲಾಗುತ್ತಿದೆ. ಶರಾವತಿ ನದಿ ಮೈದುಂಬಿ ಹರಿಯುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್​ ಬಳಿ ಇರುವ ಜೋಗ ಜಲಾಪತ (Jog Falls) ಭೋರ್ಗರೆಯುತ್ತ ಧುಮ್ಮುಕ್ಕುತ್ತಿದೆ. ಹಾಲಿನಂತೆ ಧುಮ್ಮುಕ್ಕುವ ರಾಜಾ, ರಾಣಿ, ರೋರಲ್​​ ಹಾಗೂ ರಾಜೇಟ್​ ಜಲಾಪಾತಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿಗರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿಶೇಷ್​ ಬಸ್​ಗಳನ್ನು ಬಿಟ್ಟಿದೆ.

PSI ಪರಶುರಾಮ್‌ ಸಾವು ಪ್ರಕರಣ: ಸರ್ಕಾರ ತನಿಖೆಗೆ ವಹಿಸಿದ ಮರುದಿನವೇ ಯಾದಗಿರಿಗೆ ಸಿಐಡಿ ತಂಡ ಎಂಟ್ರಿ

ಹಾವೇರಿ ವಿಭಾಗದ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಬೆಳಗ್ಗೆ 8 ಗಂಟೆಗೆ ಹಾವೇರಿ ಬಸ್​ ನಿಲ್ದಾಣದಿಂದ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 340 ರೂ. ದರ ನಿಗದಿ ಮಾಡಲಾಗಿದೆ. ಇದೇ ವಿಭಾಗದ ರಾಣೇಬೆನ್ನೂರು ಬಸ್​ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಡುವ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 320 ರೂ. ದರ ನಿಗದಿ ಮಾಡಲಾಗಿದೆ. ರಾಣೇಬೆನ್ನೂರಿನಿಂದ ಹೋಗುವ ರಾಜಹಂಸ ಬಸ್ ಬೆಳಗ್ಗೆ​ 8:30ಕ್ಕೆ ಹೊರಡಲಿದೆ. ​​ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 425 ರೂ. ದರ ನಿಗದಿ ಮಾಡಲಾಗಿದೆ.

ಗದಗ ವಿಭಾಗದ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಬೆಳಗ್ಗೆ 7 ಗಂಟೆಗೆ ಗದಗ ಬಸ್​ ನಿಲ್ದಾಣದಿಂದ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 500 ರೂ. ದರ ನಿಗದಿ ಮಾಡಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...