spot_img
spot_img

ಸಲ್ಮಾನ್ ಖಾನ್ ತಂದೆಗೆ ಮಹಿಳೆ ಒಬ್ಬಳ ಬೆದರಿಕೆ, ಇಬ್ಬರ ಬಂಧನ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ತಂದೆ ಹಾಗೂ ಹೆಸರಾಂತ ಚಿತ್ರಕಥೆಗಾರ ಸಲೀಂ ಖಾನ್ ಅವರಿಗೆ ಬೆದರಿಕೆ ಹಾಕಲಾಗಿದೆ. ಮುಂಜಾನೆ ವಾಯು ವಿಹಾರದ ವೇಳೆಯಲ್ಲಿ ಸ್ಕೂಟರ್ ನಲ್ಲಿ ವ್ಯಕ್ತಿಯೊಬ್ಬರೊಂದಿಗೆ ಬಂದ ಬುರ್ಕಾಧಾರಿ ಮಹಿಳೆಯೊಬ್ಬರು ‘ನಿಮ್ಮನ್ನು ಲಾರೆನ್ಸ್ ಬಿಷ್ಣೋಯಿ ಹತ್ತಿರ ಕಳುಹಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದರು.

ಇದನ್ನೂ ಓದಿ :ಕೇವಲ 9 ತರಗತಿ ಓದಿರೋ ಯುವಕ 2 ಕೋಟಿ ಹಣ ಕೊಳ್ಳೆ ಹೊಡೆದಿದ್ದನ್ನು ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ…!

ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸಕ್ಕೆ ಬಿಷ್ಣೋಯಿ ಗ್ಯಾಂಗ್ ಗುಂಡು ಹಾರಿಸಿದ ಕೆಲ ತಿಂಗಳ ನಂತರ ಈ ಘಟನೆ ನಡೆದಿದೆ. ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರು ಹೇಳಿ, ಬುರ್ಕಾಧಾರಿ ಮಹಿಳೆ ಸಲೀಂ ಖಾನ್ ಅವರಿಗೆ ಬೆದರಿಕೆ ಹಾಕಿದ್ದರು.ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆದರಿಕೆ ಹಾಕಿದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಬಳಿಕ ಸಲೀಂ ಖಾನ್ ಅವರ ಅಂಗರಕ್ಷಕ ಬುಧವಾರ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಲೀಂ ಖಾನ್ ಅವರೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿರುವುದಾಗಿ ಅಧಿಕಾರಿ ಹೇಳಿದರು.

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...