ಚೆನೈ : ಗ್ರಾಹಕರೊಬ್ಬರಿಗೆ 50 ಪೈಸೆ ಬಾಕಿ ನೀಡದ ಕ್ರಮವು ಅಂಚೆ ಇಲಾಖೆಗೆ ದುಬಾರಿಯಾಗಿ ಪರಿಣಮಿಸಿದೆ. ಈ ಕುರಿತ ದೂರಿನ ವಿಚಾರಣೆ ನಡೆಸಿ ಗ್ರಾಹಕರಿಗೆ ಒಟ್ಟು ₹15 ಸಾವಿರ ಪಾವತಿಸುವಂತೆ ಆದೇಶಿಸಿದೆ.
ಕಾಂಚೀಪುರ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಪರಿಹಾರ ಸೇರಿ ಗ್ರಾಹಕರಿಗೆ ಒಟ್ಟು ₹15 ಸಾವಿರ ಪಾವತಿಸುವಂತೆ 50 ಪೈಸೆ ಚಿಲ್ಲರೆ ಮರಳಿಸದೇ ಗ್ರಾಹಕರಿಗೆ ಉಂಟು ಮಾಡಿದ್ದ ಮಾನಸಿಕ ನೋವು ಹಾಗೂ ನ್ಯಾಯಸಮ್ಮತವಲ್ಲದ ವಹಿವಾಟು ಕ್ರಮ, ಸೇವಾ ನ್ಯೂನತೆಗಾಗಿ ₹10 ಸಾವಿರ ಪರಿಹಾರ ನೀಡಬೇಕು ಹಾಗೂ ಮೊಕದ್ದಮೆ ವೆಚ್ಚವಾಗಿ ₹ 5 ಸಾವಿರ ಪಾವತಿಸಬೇಕು ಎಂದು ಆಯೋಗವು ಆದೇಶಿಸಿದೆ.
ಅರ್ಜಿದಾರರಾದ ಎ.ಮಾನಶಾ ಅವರು 2023ರ ಡಿಸೆಂಬರ್‌ನಲ್ಲಿ ರಿಜಿಸ್ಟ್ರರ್ ಅಂಚೆ ವೆಚ್ಚವಾಗಿ ₹ 30 ಪಾವತಿಸಿದ್ದರು. ₹29.50 ಪೈಸೆಗೆ ರಸೀದಿ ನೀಡಿದ್ದು, 50 ಪೈಸೆ ಚಿಲ್ಲರೆ ನೀಡಿರಲಿಲ್ಲ ಎಂದು ದೂರಿದ್ದಾರೆ.
ಯುಪಿಐ ಮೂಲಕ ನಿಖರ ಮೊತ್ತ ಪಾವತಿಸುತ್ತೇನೆ ಎಂದು ಅರ್ಜಿದಾರ ಹೇಳಿದ್ದರೂ, ತಾಂತ್ರಿಕ ಕಾರಣ ನೀಡಿದ್ದ ಪೋಜಿಚಾಲುರ್ ಅಂಚೆ ಕಚೇರಿಯ ಸಿಬ್ಬಂದಿ ಅದಕ್ಕೆ ಅವಕಾಶವನ್ನು ನಿರಾಕರಿಸಿದ್ದರು.
ಅಂಚೆ ಇಲಾಖೆಯು ಇದಕ್ಕೆ ಪ್ರತಿಕ್ರಿಯಿಸಿ, ತಾಂತ್ರಿಕ ಕಾರಣದಿಂದ ಯುಪಿಐ ಪಾವತಿಗೆ ಅವಕಾಶ ದೊರೆತಿಲ್ಲ. ಆದರೆ, ಇಲಾಖೆಯಲ್ಲಿ ಅಳವಡಿಸಿಕೊಂಡಿರುವ ಸಾಫ್ಟ್‌ವೇರ್‌ನಲ್ಲಿ ಚಿಲ್ಲರೆಯು ಮುಂದಿನ ಮೊತ್ತಕ್ಕೆ ಸ್ವಯಂಚಾಲಿತವಾಗಿ ಸೇರ್ಪಡೆಯಾಗುತ್ತದೆ.
ಅಂಚೆ ಇಲಾಖೆಯಲ್ಲಿ ನಿತ್ಯ ಲಕ್ಷಾಂತರ ರೂಪಾಯಿ ವಹಿವಾಟು ನಡೆಯಲಿದ್ದು, ಪೂರಕವಾಗಿ ದಾಖಲೆಗಳ ನಿರ್ವಹಣೆ ಆಗುತ್ತಿಲ್ಲ, ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಇದರಿಂದಾಗಿ ನನಗೆ ಮಾನಸಿಕವಾಗಿ ತೀವ್ರ ನೋವಾಗಿದೆ ಎಂದು ಅರ್ಜಿದಾರರು ದೂರಿದ್ದರು.
ಅಂಚೆ ಇಲಾಖೆಯಲ್ಲಿ ನಿತ್ಯ ಲಕ್ಷಾಂತರ ರೂಪಾಯಿ ವಹಿವಾಟು ನಡೆಯಲಿದೆ.
ಉಭಯ ವಾದಗಳನ್ನು ಆಲಿಸಿದ ಆಯೋಗವು, ಸಾಫ್ಟ್‌ವೇರ್ ಕಾರಣ ನೀಡಿ ಅಂಚೆ ಇಲಾಖೆಯು ಹೆಚ್ಚುವರಿಯಾಗಿ 50 ಪೈಸೆ ವಸೂಲಿ ಮಾಡಿರುವುದು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಪ್ರಕಾರ ನ್ಯಾಯಯುತ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿತು.
50 ಪೈಸೆ ವಾಪಸು ಕೊಡಿಸಬೇಕು ಮತ್ತು ಆಗಿರುವ ಮಾನಸಿಕ ನೋವಿಗೆ ₹ 2.5 ಲಕ್ಷ ಪರಿಹಾರ, ಮೊಕದ್ದಮೆ ವೆಚ್ಚವಾಗಿ ₹ 10 ಸಾವಿರ ಕೊಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now