ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತುಗಳನ್ನಾಡುವುದು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್ಗಳ ಬಾಕಿ ಬಿಲ್ಗಳನ್ನು ಚುಕ್ತಾ ಮಾಡಲಿ ಎಂದು ಒತ್ತಾಯಿಸಿದರು.
ಬಾಕಿ BILLS ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.ಅವರೇನೂ ಭಿಕ್ಷುಕರಲ್ಲ, ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣುಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ.
ಮಾಡಿರುವ ಸಾಲಗಳನ್ನು ತೀರಿಸಲಾಗದೆ ಬೀದಿಗೆ ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸರ್ಕಾರ ಗುತ್ತಿಗೆದಾರರು ಹಾಗೂ ವೆಂಡರ್ಸ್ಗಳ BILLS ಪಾವತಿಸಲು ಮೀನಮೇಷ ಎಣಿಸುತ್ತಿದೆ. ಸರ್ಕಾರದ ಆಂತರ್ಯ ಏನೆಂಬುದು ಎಲ್ಲರೂ ಬಲ್ಲ ವಿಷಯ. ತಮಗೆ ಬಿಡುಗಡೆ ಆಗಬೇಕಿರುವ BILLSಗಳನ್ನು ಪಾವತಿಸಿ ಎಂದು ಗುತ್ತಿಗೆದಾರರು ಧೈರ್ಯದಿಂದ ಕೇಳಬೇಕು.
Excuses should be stopped:ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಯಾವತ್ತೂ ಯಾರಿಗೂ ತೊಂದರೆ ಕೊಡುವ ಕೆಲಸ ಮಾಡಿಲ್ಲ. ಗುತ್ತಿಗೆದಾರರಿಗೆ ಒಂದು ಮನವಿ ಮಾಡುತ್ತೇನೆ.
ಸಚಿವರು ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸುವ ಬದಲು ಗುತ್ತಿಗೆದಾರರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡಿದರು.ಎಲ್ಲರ ಮೇಲೆ ಬೇಕಾಬಿಟ್ಟಿ ಮಾತನಾಡುವ ಖರ್ಗೆ ಅವರು ಸಬೂಬು ಹೇಳುವುದು ಬಿಡಬೇಕು.
ಈವರೆಗೆ ಗುತ್ತಿಗೆದಾರರ ಎಲ್ಒಸಿಗಳನ್ನು ಬಿಡುಗಡೆ ಮಾಡುವುದಕ್ಕೆ ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಯಾವತ್ತೂ ಯಾರಿಗೂ ತೊಂದರೆ ಕೊಡುವ ಕೆಲಸ ಮಾಡಿಲ್ಲ. ಗುತ್ತಿಗೆದಾರರಿಗೆ ಒಂದು ಮನವಿ ಮಾಡುತ್ತೇನೆ. ಮೊದಲು ಒಗ್ಗಟ್ಟಾಗಿ, ನಿಮ್ಮ ನಿಮ್ಮಲ್ಲಿಯೇ ಗುಂಪುಗಳನ್ನು ಮಾಡಿಕೊಂಡರೆ ಅದನ್ನು ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತದೆ.
ಅಕ್ಕಪಕ್ಕದ ರಾಜ್ಯಗಳವರನ್ನು ಕರೆದುಕೊಂಡು ಬಂದು ಕೆಲಸ ಮಾಡಿಸಲಿ. ಯಾರು ಬಂದು ಕೆಲಸ ಮಾಡುತ್ತಾರೋ ನೋಡೋಣ. ಹೇಗೂ ಇವರು ಕೆಲಸವನ್ನು ಕೊಡುತ್ತಿಲ್ಲ. ನೀವು ಹಿಂದಿನ ದುಡ್ಡು ಕೇಳುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.
Request not to surrender to suicide: ಸರ್ಕಾರದ ವಿರುದ್ಧ ಹೋರಾಟ ಮಾಡುವ ಧೈರ್ಯ ಮಾಡಿ. ನೀವು ಭಿಕ್ಷುಕರಲ್ಲ ಎಂದು ಗುತ್ತಿಗೆದಾರರಿಗೆ ಧೈರ್ಯ ಹೇಳಿದರು.ಯಾರೇ ಆಗಲಿ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಹಣ ನಿಮಗೆ ಕೊಡಲೇಬೇಕು.
ಆತ್ಮಹತ್ಯೆಗೆ ಶರಣಾಗಬೇಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕಿಕೊಳ್ಳುತ್ತೀರಾ? ನೀವು ತಪ್ಪು ಮಾಡಿಲ್ಲ, ತಪ್ಪು ಮಾಡಿರುವುದು ಸರ್ಕಾರ.ಕೆಲಸವನ್ನೇ ಮಾಡದೆ ಬಿಲ್ ತೆಗೆದುಕೊಂಡು ಹಣ ಹೊಡೆದ ಎಷ್ಟೋ ಅಧಿಕಾರಿಗಳು, ದೊಡ್ಡ ದೊಡ್ಡ ಗುತ್ತಿಗೆದಾರರು ಇದ್ದಾರೆ.
ಸರಿಯಾದ ಕೆಲಸ ಮಾಡಿದ್ದರೆ ನೀವು ಯಾಕೆ ಹೆದರಬೇಕು ಎಂದರು.ನಿಮಗೆ ಸಿಕ್ಕಿರುವ ಕಾಮಗಾರಿಯನ್ನು ಪ್ರಾಮಾಣಿಕವಾಗಿ ಮಾಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕುತ್ತೀರಿ. ಅಂತಹ ಮನಸ್ಥಿತಿಯಿಂದ ಹೊರಬನ್ನಿ.
Need more evidence? Tong to CM:ಗುತ್ತಿಗೆದಾರರ ಸಂಘದ ಹಂಗಾಮಿ ಅಧ್ಯಕ್ಷರು ಎಷ್ಟೆಷ್ಟು ಪರ್ಸೆಂಟೇಜ್ ಎಂದು ಅವರೇ ಪಟ್ಟಿ ಮಾಡಿ ಹೇಳಿದ್ದಾರೆ. ಇದಕ್ಕಿಂತ ದಾಖಲೆ ಬೇಕಾ ಮುಖ್ಯಮಂತ್ರಿಗಳಿಗೆ? ಎಂದು ಕುಮಾರಸ್ವಾಮಿ ಅವರು ಸಿಎಂಗೆ ಟಾಂಗ್ ಕೊಟ್ಟರು.
ಶೇ60ರಷ್ಟು ಕಮಿಷನ್ ಬಗ್ಗೆ ಮುಖ್ಯಮಂತ್ರಿಗಳು ದಾಖಲೆ ಕೊಡಿ ಎಂದು ನನ್ನನ್ನು ಹೇಳಿದ್ದರು.
Here’s what Kharge and the Keonix president have to say: ಜನಪ್ರತಿನಿಧಿಗಳು ಸುಳ್ಳು ವ್ಯವಹಾರ ಮಾಡಿದ್ದರೆ ಅವರ ಮೇಲೂ ಕ್ರಮ ತೆಗೆದುಕೊಳ್ಳಿ. ತನಿಖೆ ನಡೆಸಿ ವಾಸ್ತವಾಂಶ ಹೊರಕ್ಕೆ ತರಲು ಎಷ್ಟು ತಿಂಗಳು ಬೇಕು ನಿಮಗೆ? ಈ ರಾಜ್ಯವನ್ನು ಹಾಳು ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಿ. ತಪ್ಪು ಮಾಡದವರಿಗೆ ಶಿಕ್ಷೆ ಯಾಕೆ? ಅವರ ಹಣ ಪಾವತಿ ಮಾಡಿ.
Government lags behind in tax collection: ಪೆಟ್ರೋಲ್, ಡೀಸೆಲ್, ಮುದ್ರಾಂಕ, ಮಾರ್ಗದರ್ಶಿ ಶುಲ್ಕ, ವಿದ್ಯುತ್ ದರ, ಬಸ್ ಪ್ರಯಾಣ ದರ, ಮದ್ಯದ ದರ ಸೇರಿದಂತೆ ಎಲ್ಲವನ್ನೂ ಏರಿಕೆ ಮಾಡಿದ್ದೀರಿ. ಇಷ್ಟೆಲ್ಲ ಮಾಡಿದರೂ ನಿಮ್ಮ ತೆರಿಗೆ ಸಂಗ್ರಹದಲ್ಲಿ ಕೊರತೆ ಆಗಿದೆ.
ನಿಮ್ಮ ಆಡಳಿತ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಕುಮಾರಸ್ವಾಮಿ ಅವರು, ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು.ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತೀರಿ. ಗ್ಯಾರಂಟಿ ಕೊಟ್ಟಿದ್ದೇವೆ ಎನ್ನುತ್ತೀರಿ. ನಮ್ಮನ್ನು ಬಿಟ್ಟರೆ ಬೇರೆ ಯಾರೂ ಇಲ್ಲ ಎನ್ನುತ್ತೀರಿ.
ನಿಮ್ಮ ಯಾವ ಕೆಲಸದಲ್ಲಿಯೂ ದಕ್ಷತೆ ಕಾಣುತ್ತಿಲ್ಲ. ನಿರೀಕ್ಷೆಗೆ ತಕ್ಕಂತೆ ತೆರಿಗೆ ಸಂಗ್ರಹ ಆಗುತ್ತಿಲ್ಲ. ಬಜೆಟ್ ಮಂಡನೆಗೆ ತಯಾರಿ ಮಾಡುತ್ತಿದ್ದೀರಿ. ಆದರೆ, ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದಿದ್ದೀರಿ. ಎಲ್ಲ ಬಾಬ್ತುಗಳಿಂದ ಸುಮಾರು ₹62,424 ಕೋಟಿಯಷ್ಟು ತೆರಿಗೆ ಸಂಗ್ರಹ ಕಡಿಮೆ ಆಗಿದೆ. ಮೇಲಿಂದ ಮೇಲೆ ಸಾಲ ಮಾಡುತ್ತಿದ್ದೀರಿ.
CM Okkaliga is de-grading Lingayats:ಜಾತಿ ಜನಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚೆ ಮಾಡುತ್ತಾರಂತೆ. ಇದು ಕೇವಲ ಎರಡು ಸಮುದಾಯಗಳ ಪ್ರಶ್ನೆ ಅಲ್ಲ. ಇಷ್ಟು ದಿನ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳಿಗೆ ಏನು ಮಾಡಿದ್ದಾರೆ ಏನುವುದನ್ನು ಹೇಳಬೇಕು ಎಂದು ಆಗ್ರಹಿಸಿದರು.
ಜಾತಿ ಗಣತಿ ವರದಿ ಇಟ್ಟುಕೊಂಡು ಒಕ್ಕಲಿಗ, ಲಿಂಗಾಯತರನ್ನು ಡಿ-ಗ್ರೇಡ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಅವರು ಇದೇ ವೇಳೆ ಆರೋಪಿಸಿದರು.
ಇಷ್ಟು ದಿನ ಸರ್ಕಾರದ ಸೌಲಭ್ಯಗಳು ಯಾರಿಗೆ ಸಿಕ್ಕಿವೆ, ಯಾರಿಗೆ ಸಿಕ್ಕಿಲ್ಲ ಎಂಬುದರ ಮೇಲೆ ಸರ್ಕಾರ ಬೆಳಕು ಚೆಲ್ಲಬೇಕು ಎಂದು ಒತ್ತಾಯಿಸಿದರು.ಯಾವ ಯಾವ ಜಾತಿಯಲ್ಲಿ ಎಷ್ಟು ಜನ ಇದ್ದಾರೆ ಎನುವುದಕ್ಕಿಂತ ಎಷ್ಟು ಜನ ಬಡವರು ಇದ್ದಾರೆ ಎಂಬುದನ್ನು ಗಮನಿಸಬೇಕು
Related