spot_img

PAK VS NZ : ಕಿವೀಸ್ ವಿರುದ್ಧ ಪಾಕ್ ಗೆಲ್ಲುವುದು ಡೌಟ್

spot_img
spot_img

Share post:

PAK vs NZ :

ಐಸಿಸಿ ಚಾಂಪಿಯನ್ಸ್​ ಟ್ರೋಫಿಯ ಮೊದಲ ಪಂದ್ಯದಲ್ಲಿಂದು PAK VS NZ​ ತಂಡಗಳು ಮುಖಾಮುಖಿ ಆಗುತ್ತಿವೆ. ಉಭಯ ತಂಡಗಳ ನಡುವಿನ ಈ ಪಂದ್ಯ ಕರಾಚಿಯ ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಪಂದ್ಯ ಆರಂಭಕ್ಕೂ ಮೊದಲೇ ಪಾಕಿಸ್ತಾನಕ್ಕೆ ಆತಂಕ ಹೆಚ್ಚಾಗಿದೆ. ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಇಂದಿನಿಂದ ಪ್ರಾರಂಭವಾಗಲಿದೆ.

ಮೊದಲ ಪಂದ್ಯದಲ್ಲಿ PAK VS NZ ತಂಡಗಳು ಮುಖಾಮುಖಿಯಾಗುತ್ತಿವೆ. ಹೌದು, ನ್ಯೂಜಿಲೆಂಡ್​​ ವಿರುದ್ಧ ಪಾಕಿಸ್ತಾನ ಏಕದಿನ ಪಂದ್ಯದಲ್ಲಿ ಅತ್ಯಂತ ಕೆಟ್ಟದಾಖಲೆ ಹೊಂದಿದೆ. ಅಲ್ಲದೆ ಇತ್ತೀಚೆಗೆ ಪಾಕ್​ನಲ್ಲೇ ನಡೆದಿದ್ದ ತ್ರಿಕೋನ ಸರಣಿಯ ಪಂದ್ಯದಲ್ಲಿ ಪಾಕ್​ ಮತ್ತು ಕಿವೀಸ್​ ಎರಡು ಬಾರಿ ಮುಖಾಮುಖಿಯಾಗಿದ್ದವು. ಆದರೆ ಆ ಎರಡೂ ಪಂದ್ಯಗಳಲ್ಲಿ ಪಾಕ್​​ ಹೀನಾಯ ಸೋಲನುಭವಿಸಿತ್ತು. ಇದೀಗ ತಂಡದ ಆತಂಕಕ್ಕೂ ಕಾರಣವಾಗಿದೆ.

ಇಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಮೊದಲ ಪಂದ್ಯವನ್ನು ಸೋತರೆ, ಉಳಿದ ಎರಡು ಪಂದ್ಯಗಳು ತಂಡಕ್ಕೆ ಮಾಡು ಇಲ್ಲವೇ ಮಡಿ ಅನ್ನೋ ಪರಿಸ್ಥಿತಿ ಎದುರಿಸಬೇಕಾಗುತ್ತದೆ.

ವಾಸ್ತವವಾಗಿ, ಯಾವುದೇ ತಂಡವು ಸೆಮಿಫೈನಲ್‌ಗೆ ನೇರವಾಗಿ ಅರ್ಹತೆ ಪಡೆಯಲು 3 ಪಂದ್ಯಗಳಲ್ಲಿ ಕನಿಷ್ಠ 2 ಪಂದ್ಯಗಳನ್ನು ಗೆಲ್ಲಬೇಕಾಗಿದೆ.ಒಂದು ವೇಳೆ ಈ ಪಂದ್ಯದಲ್ಲಿ ಪಾಕ್​ ಸೋತರೆ, ಟೂರ್ನಿಯಿಂದ ಹೊರಬೀಳುವ ಅಪಾಯ ಹೆಚ್ಚಿರಲಿದೆ. ವಾಸ್ತವವಾಗಿ, ಈ ಪಂದ್ಯಾವಳಿಯಲ್ಲಿ ಕೇವಲ 8 ತಂಡಗಳಿವೆ. ಪ್ರತಿ ತಂಡಗಳು ಕೇವಲ ಮೂರು ಪಂದ್ಯಗಳನ್ನು ಆಡಲಿವೆ.

 Head to Head Record:

ಉಳಿದಂತೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಏಕದಿನ ಪಂದ್ಯಗಳಲ್ಲಿ 118 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಪಾಕಿಸ್ತಾನ ಮೇಲುಗೈ ಸಾಧಿಸಿದೆ. ಒಟ್ಟು 61 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ನ್ಯೂಜಿಲೆಂಡ್ 53 ಪಂದ್ಯಗಳನ್ನು ಗೆದ್ದುಕೊಂಡಿದೆ.

3 ಪಂದ್ಯಗಳು ರದ್ದಾಗಿದ್ದು ಒಂದು ಪಂದ್ಯ ಟೈನಲ್ಲಿ ಕೊನೆಗೊಂಡಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಾಲ್ಕನೇ ಬಾರಿಗೆ ಮುಖಾಮುಖಿ ಆಗುತ್ತಿವೆ. ಇದಕ್ಕೂ ಮುನ್ನ ಉಭಯ ತಂಡಗಳು 2000, 2006 ಮತ್ತು 2009ರ ಚಾಂಪಿಯನ್ಸ್ ಟ್ರೋಫಿಗಳಲ್ಲಿ ಮುಖಾಮುಖಿ ಆಗಿದ್ದವು. ಆದರೆ, ಮೂರು ಬಾರಿ ಕಿವೀಸ್​ ವಿರುದ್ಧ ಸೋಲನ್ನು ಕಂಡಿದೆ. ಈ ಹಿನ್ನೆಲೆ ಈ ಪಂದ್ಯವೂ ಪಾಕ್​ ಸುಲಭವಾಗಿಲ್ಲ.

Match Start :  2:30ಕ್ಕೆ ಪ್ರಾರಂಭ

Possible Teams – Pakistan :

ಫಖರ್ ಜಮಾನ್, ಬಾಬರ್ ಆಜಮ್, ಕಮ್ರಾನ್ ಗುಲಾಮ್/ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್

New Zealand:

ವಿಲ್ ಯಂಗ್/ರಚಿನ್ ರವೀಂದ್ರ, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ನಾಥನ್ ಸ್ಮಿತ್/ಜಾಕೋಬ್ ಡಫಿ, ವಿಲ್ ಒ’ರೂರ್ಕ್

ಇದನ್ನು ಓದಿರಿ : Chhatrapati Shivaji Maharaj Jayanti 2025: The Maratha King Who Outsmarted Empires With His Guerrilla Tactics

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...