spot_img
spot_img

Palace Flower Show : ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಚಿವ ಡಾ. ಹೆಚ್‌ ಸಿ ಮಹದೇವಪ್ಪ ಚಾಲನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore News:

ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ “ಅರಮನೆ ಫಲಪುಷ್ಪ ಪ್ರದರ್ಶನ-2024” ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ, ಬೊಂಬೆ ಮನೆ ಹಾಗೂ ಕುಸ್ತಿ ಪಂದ್ಯಾವಳಿಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಚಾಲನೆ ನೀಡಿದರು. ಸಚಿವ ಡಾ. ಹೆಚ್​ ಸಿ ಮಹದೇವಪ್ಪ ಅವರು ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. ಡಿ.21ರಿಂದ ಡಿ.31ರ ವರೆಗೆ ಈ ಫಲಪುಷ್ಪ ಪ್ರದರ್ಶನ ಇರಲಿದೆ.

Construction of various types of artworks from thousands of flowers:

ಅರಮನೆ, ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಕಲಾಕೃತಿ, ಚಾಮುಂಡಿಬೆಟ್ಟದ ನಂದಿ ವಿಗ್ರಹ, ಪಕ್ಷಿಗಳು, ದೆಹಲಿಯ ಅಕ್ಷರಧಾಮ, ಕಾರ್ಗಿಲ್ ವಿಜಯಸ್ತಂಭ, ದಕ್ಷಿಣ ಕಾಶಿಯ ನಂಜುಂಡೇಶ್ವರ, ಗಂಡಭೇರುಂಡ, ಮುಮ್ಮಡಿ ಕೃಷ್ಣರಾಜ ಒಡೆಯರ್ ಪ್ರತಿಕೃತಿ ಸೇರಿದಂತೆ ಹಲವು ವಿಭಿನ್ನ ಚಿತ್ತಾರಗಳನ್ನು ಹೂವುಗಳಲ್ಲಿ ಅರಳಿಸಲಾಗಿದೆ. ಫಲಪುಷ್ಪ ಪ್ರದರ್ಶನಕ್ಕೆ 25 ಸಾವಿರ ಹೂವಿನ ಕುಂಡಗಳನ್ನು ಇಡಲಾಗಿದ್ದು, ಗುಲಾಬಿ, ಸೇವಂತಿಗೆ, ಜಲಿಯ ಸಾಲ್ವಿಯ, ಚೆಂಡು ಹೂ, ಸೂರ್ಯಕಾಂತಿ ಹೂವುಗಳು ಸೇರಿದಂತೆ ಹಲವು ಬಗೆಯ ಹೂವುಗಳನ್ನು ಇಲ್ಲಿ ಕಾಣಬಹುದಾಗಿದೆ.

Organization of Puppet House, Photo Exhibition and Wrestling Tournament:

ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯ ಆವರಣದಲ್ಲಿ ಮೈಸೂರು ಅರಮನೆ ಮತ್ತು ರಾಜ ಮನೆತನಗಳ ಇತಿಹಾಸ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಬೊಂಬೆಗಳ ಪ್ರದರ್ಶನ, ಅರಮನೆಯ ವರಾಹ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿ ವೀಕ್ಷಕರ ಗಮನ ಸೆಳೆದವು.

Disappointed viewers of the quiz show:

ಫಲಪುಷ್ಪ ಪ್ರದರ್ಶನ ಹಾಗೂ ಅರಮನೆ ದೀಪಾಲಂಕಾರವು ಡಿಸೆಂಬರ್ 21 ರಿಂದ 31ರ ವರೆಗೆ ನಡೆಯಲಿದೆ. ಆಗಮಿಸುವ ವೀಕ್ಷಕರಿಗೆ ಪ್ರವೇಶ ದರವನ್ನು ನಿಗದಿ ಪಡಿಸಿದ್ದು, ವಯಸ್ಕರಿಗೆ ಮತ್ತು ವಿದೇಶಿ ಪ್ರವಾಸಿಗರಿಗೆ 30 ರೂ. 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ 20 ರೂ. ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಫಲಪುಷ್ಪ ಪ್ರದರ್ಶನವು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, ಅರಮನೆ ವಿದ್ಯುತ್ ದೀಪಾಲಂಕಾರವು ಸಂಜೆ 7 ರಿಂದ 9ರ ವರೆಗೆ ಇರಲಿದೆ. ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಮಧುಬಾಲಕೃಷ್ಣನ್ ಮತ್ತು ತಂಡದವರಿಂದ ಆಯೋಜಿಸಲಾಗಿದ್ದ “ಸಂಗೀತ ರಸಸಂಜೆ” ಕಾರ್ಯಕ್ರಮವು ನೆರೆದಿದ್ದಂತಹ ಸಾವಿರಾರು ವೀಕ್ಷಕರನ್ನು ತನ್ನತ್ತ ಸೆಳೆದು ಮಧುರ ಸಂಗೀತಕ್ಕೆ ಮನಸೋಲುವಂತೆ ಮಾಡಿತು.ಈ ಸಂದರ್ಭದಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಟಿ. ಎಸ್. ಶ್ರೀವತ್ಸ, ಜಿ. ಟಿ ದೇವೇಗೌಡ, ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಸಿ. ಎನ್. ಮಂಜೇಗೌಡ, ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಎಂ ಗಾಯತ್ರಿ, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಹಾಗೂ ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಟಿ. ಎಸ್ ಸುಬ್ರಮಣ್ಯ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತ ದೇವರಾಜು ಇದ್ದರು.

Rasa Manjari Programme:

ಡಿ. 21 ರಿಂದ ಡಿ. 31ರ ವರೆಗೆ ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಅರಮನೆ ದೀಪಾಲಂಕಾರ ಜತೆಗೆ ಸಂಜೆ ರಸ ಮಂಜರಿ ಕಾರ್ಯಕ್ರಮಗಳು ಸಹ ಜರುಗಲಿವೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

BAGALKOTE HORTICULTURE FAIR – ಬಾಗಲಕೋಟೆಯಲ್ಲಿ 13ನೇ ತೋಟಗಾರಿಕಾ ಮೇಳ

Bagalkote News: ಬಾಗಲಕೋಟೆಯಲ್ಲಿ ಮೂರು ದಿನಗಳ ತೋಟಗಾರಿಕಾ ಮೇಳ ಆರಂಭವಾಗಿದೆ. ಮೇಳದಲ್ಲಿ ಫಲಪುಷ್ಪ ಪ್ರದರ್ಶನ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇಲ್ಲಿನ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ 13ನೇ ತೋಟಗಾರಿಕಾ ಮೇಳಕ್ಕೆ...

MEDICAL WASTE CASE – ತಮಿಳುನಾಡಿನಲ್ಲಿ ಎಸೆದ ವೈದ್ಯಕೀಯ ತ್ಯಾಜ್ಯ ತೆರವುಗೊಳಿಸಿದ ಕೇರಳ ಸರ್ಕಾರ

Chennai News: ತಮಿಳುನಾಡಿನಲ್ಲಿ ವೈದ್ಯಕೀಯ ತ್ಯಾಜ್ಯ ಎಸೆದಿದ್ದಕ್ಕಾಗಿ ಎನ್​ಜಿಟಿ ಕೇರಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ ಜಿಟಿ) ದಕ್ಷಿಣ ಪೀಠದ ಕಟ್ಟುನಿಟ್ಟಿನ...

BOMB THREAT TO SCHOOLS – ದೆಹಲಿ ಶಾಲೆಗಳಿಗೆ ವಿದ್ಯಾರ್ಥಿಗಳಿಂದಲೇ ಬಾಂಬ್ ಬೆದರಿಕೆ

New Delhi News: ದೆಹಲಿಯ ಶಾಲೆಗಳಿಗೆ ಬಂದ್​ ನಕಲಿ ಬಾಂಬ್ ಬೆದರಿಕೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪತ್ತೆಯಾದ ಆರೋಪಿಗಳ ಕಂಡು ಪೊಲೀಸರೇ ಶಾಕ್​ ಆಗಿದ್ದಾರೆ. ಇಲ್ಲಿನ...

CHALLENGING PRIYANKAS ELECTION – ಕೇರಳ ಹೈಕೋರ್ಟ್ ಮೊರೆ ಹೋದ ವಯನಾಡು ಬಿಜೆಪಿ ಅಭ್ಯರ್ಥಿ

Kochi, Kerala News: ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್​ ಕೇರಳ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ...