spot_img
spot_img

ಹೊಸರೀತಿಯಲ್ಲಿ QR ಕೋಡ್‌ ಜೊತೆ ಬರಲಿದೆ ಪ್ಯಾನ್ ಕಾರ್ಡ್‌

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

QR Code PAN Card: ಸೋಮವಾರ ಕೇಂದ್ರ ಸರ್ಕಾರ ಪ್ಯಾನ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಇದಕ್ಕಾಗಿ, ಸರ್ಕಾರ 1,435 ಕೋಟಿ ರೂ. ವೆಚ್ಚ ಮಾಡಲಿದೆ.

ಹಣಕಾಸು ವಹಿವಾಟಿಗೆ ಪ್ಯಾನ್​ ಕಾರ್ಡ್(PAN Card)​ ಎಷ್ಟು ಮುಖ್ಯ ಎಂದು ಎಲ್ಲರಿಗೂ ಗೊತ್ತಿರುವಂಥದ್ದೇ. ತೆರಿಗೆದಾರರ ಗುರುತಿಗಾಗಿ ಮುಂಚೂಣಿಗೆ ಬಂದ ಪ್ಯಾನ್ ಇನ್ನು ಮುಂದೆ ಕ್ಯೂಆರ್​ ಕೋಡ್‌ನೊಂದಿಗೆ ಬರಲಿದೆ. ಇದರಿಂದ ತೆರಿಗೆದಾರರ ಡಿಜಿಟಲ್ ಅನುಭವ ಹೆಚ್ಚಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ಪ್ಯಾನ್ 2.0 ಯೋಜನೆ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.

ಸರ್ಕಾರಿ ಇಲಾಖೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಲ್ಲಿ ಪ್ಯಾನ್ ಅನ್ನು ಮುಖ್ಯ ಗುರುತಿಸುವಿಕೆಯಾಗಿ ಬಳಸುವುದು ಇದರ ಹಿಂದಿನ ಉದ್ದೇಶ. ಈ ಯೋಜನೆಗೆ ಕೇಂದ್ರ ಸರ್ಕಾರ 1,435 ಕೋಟಿ ರೂಪಾಯಿ ವ್ಯಯಿಸಲಿದೆ. ಪ್ಯಾನ್ 2.0 ಯೋಜನೆಯು ತಂತ್ರಜ್ಞಾನದ ಮೂಲಕ ತೆರಿಗೆದಾರರ ನೋಂದಣಿ ಸೇವೆಗಳಲ್ಲಿ ದೊಡ್ಡ ಬದಲಾವಣೆ ತರಲು ಸಹಾಯ ಮಾಡಲಿದೆ.

ತೆರಿಗೆದಾರರು ಅನೇಕ ರೀತಿಯ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಸುಲಭವಾಗಿ ಸೇವೆಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ. ಸೇವೆಗಳ ವಿತರಣೆಯನ್ನೂ ತ್ವರಿತಗೊಳಿಸಬಹುದು ಮತ್ತು ಗುಣಮಟ್ಟವೂ ಸುಧಾರಿಸಲಿದೆ. ಎಲ್ಲಾ ಮಾಹಿತಿ ಒಂದೇ ಸ್ಥಳದಲ್ಲಿ ಲಭ್ಯವಿರುತ್ತದೆ. ಡೇಟಾ ಸುರಕ್ಷಿತವಾಗಿ ಉಳಿಯುತ್ತದೆ. ಪರಿಸರಸ್ನೇಹಿ ಪ್ರಕ್ರಿಯೆ ವೆಚ್ಚ ತಗ್ಗಿಸುತ್ತದೆ.

ಪ್ಯಾನ್ 2.0 ಯೋಜನೆಯಡಿ ಕ್ಯೂಆರ್ ಕೋಡ್ ಹೊಂದಿರುವ ಹೊಸ ಪ್ಯಾನ್ ಕಾರ್ಡ್ ಅನ್ನು ತೆರಿಗೆದಾರರಿಗೆ ಉಚಿತವಾಗಿ ನೀಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಪ್ಯಾನ್​ 2.0 ಪ್ರಾಜೆಕ್ಟ್ ಅಸ್ತಿತ್ವದಲ್ಲಿರುವ PAN/TAN 1.0 ಫ್ರೇಮ್‌ವರ್ಕ್‌ನ ಅಪ್‌ಗ್ರೇಡ್ ಆವೃತ್ತಿಯಾಗಿದ್ದು, ಕೋರ್ ಮತ್ತು ಕೋರ್ ಅಲ್ಲದ PAN/TAN ಚಟುವಟಿಕೆಗಳೊಂದಿಗೆ ಪ್ಯಾನ್​ ಪರಿಶೀಲನೆ ಸೇವೆಯನ್ನು ಸಂಯೋಜಿಸುತ್ತದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇಲ್ಲಿಯವರೆಗೆ, ದೇಶದಲ್ಲಿ ಸುಮಾರು 78 ಕೋಟಿ ಪ್ಯಾನ್‌ಗಳನ್ನು ನೀಡಲಾಗಿದ್ದು, ಈ ಪೈಕಿ ಶೇ 98ರಷ್ಟು ಪ್ಯಾನ್‌ಗಳನ್ನು ವೈಯಕ್ತಿಕವಾಗಿ ನೀಡಲಾಗಿದೆ.

ದಾಯ ತೆರಿಗೆ ಇಲಾಖೆಯಿಂದ(IT) ನೀಡಲಾಗುವ 10 ಅಂಕಿಯ ಆಲ್ಫಾನ್ಯೂಮರಿಕ್ ಗುರುತಿನ ಚೀಟಿಯೇ ಪ್ಯಾನ್  ಇದಕ್ಕಾಗಿ ಅರ್ಜಿ ಸಲ್ಲಿಸುವ ಯಾವುದೇ ವ್ಯಕ್ತಿಗೆ ಈ ಕಾರ್ಡ್ ನೀಡಲಾಗುತ್ತದೆ. PAN ಸಂಖ್ಯೆಯ ಮೂಲಕ ಯಾವುದೇ ವ್ಯಕ್ತಿಯ ಆನ್‌ಲೈನ್ ಅಥವಾ ಹಣಕಾಸಿನ ವಹಿವಾಟುಗಳನ್ನು ಆದಾಯ ತೆರಿಗೆ ಇಲಾಖೆ ಮೇಲ್ವಿಚಾರಣೆ ಮಾಡುತ್ತದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...