spot_img
spot_img

ರೋಗಿಗಳಿಗೆ ಸರ್ಕಾರದಿಂದಲೇ ತಜ್ಞ ವೈದ್ಯರಿಂದ ‘ಉಚಿತ ಸೆಕೆಂಡ್ ಒಪಿನಿಯನ್’

spot_img
spot_img

Share post:

ಬೆಂಗಳೂರು: ರಾಜ್ಯದಲ್ಲಿ ಸರ್ಜರಿಗಳ ಕುರಿತು ಆತಂಕದಲ್ಲಿರುವವರಿಗೆ ನೆರವಾಗಲು ‘ಸೆಕೆಂಡ್ ಒಪಿನಿಯನ್’ ಯೋಜನೆ ಜಾರಿಗೆ ತರಲಾಗಿದೆ. ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ನೂತನ ಕಾರ್ಯಕ್ರಮ ಇದಾಗಿದೆ.

ಶಸ್ತ್ರಚಿಕಿತ್ಸೆ ಮಾಡುವ ಬಗ್ಗೆ ಗೊಂದಲದಲ್ಲಿ ಸಿಲುಕಿರುವ ಮತ್ತು ಮಾಡಲೇಬೇಕಾದ ಒತ್ತಡಕ್ಕೆ ಸಿಲುಕಿರುವ ರೋಗಿಗಳಿಗೆ ಅದರ ಅಗತ್ಯತೆಯ ಬಗ್ಗೆ ತಜ್ಞ ವೈದ್ಯರಿಂದ ‘ಸೆಕೆಂಡ್ ಒಪಿನಿಯನ್’ ನೀಡಿ ರೋಗಿಗಳ ಆತಂಕ ದೂರಮಾಡುವ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಇಲಾಖೆ ಜಾರಿಗೆ ತಂದಿದೆ.

ಕೀಲು ಮೂಳೆ, ಮೊಣಕಾಲು ನೋವು, ಮೊಣಕಾಲು ಚಿಪ್ಪು ಬದಲಾವಣೆ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಲೇಬೇಕೆನ್ನುವ ವೇಳೆ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ತಜ್ಞ ವೈದ್ಯರನ್ನು ಸಂಪರ್ಕಿಸಿದರೆ ಯಾವುದೇ ಶುಲ್ಕವಿಲ್ಲದೇ ಉಚಿತವಾಗಿ ಎರಡನೇ ಅಭಿಪ್ರಾಯದೊಂದಿಗೆ ಸಮಯೋಚಿತ ಸಲಹೆ ನೀಡಲಿದ್ದಾರೆ.

ಶಸ್ತ್ರಚಿಕಿತ್ಸೆ ಬಗ್ಗೆ ಬಹಳಷ್ಟು ರೋಗಿಗಳಲ್ಲಿ ಆತಂಕವಿರುತ್ತದೆ. ಖರ್ಚು ವೆಚ್ಚ, ಚಿಕಿತ್ಸೆಯ ನಂತರ ಅನುಭವಿಸುವ ಯಾತನೆ, ಶಸ್ತ್ರಚಿಕಿತ್ಸೆ ಹೊರತುಪಡಿಸಿ ಪರ್ಯಾಯ ಚಿಕಿತ್ಸೆ ಸಾಧ್ಯತೆಗಳ ಬಗ್ಗೆ ಸರಿಯಾದ ಮಾರ್ಗದರ್ಶನ ಕೊರತೆಯಿಂದ ಗೊಂದಲಕ್ಕೆ ಸಿಲುಕುತ್ತಾರೆ.

ಬೆಂಗಳೂರಿನ ಆರೋಗ್ಯಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ದೇಶದಲ್ಲಿಯೇ ವಿನೂತನ ಮತ್ತು ಮಾದರಿ ಯೋಜನೆ ಇದಾಗಲಿದೆ ಎಂದು ತಿಳಿಸಿದ ಸಚಿವರು, ಆರಂಭದಲ್ಲಿ ಬೆಂಗಳೂರಿನ ಸಂಜಯ ಗಾಂಧಿ ಆಸ್ಪತ್ರೆ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈ ಸೇವೆ ಲಭ್ಯವಿರಲಿದೆ ಎಂದು ಹೇಳಿದ್ದಾರೆ.

ಇಂತಹ ಸಂದರ್ಭಗಳಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಅನುಷ್ಠಾನಗೊಳಿಸಿರುವ ‘ಉಚಿತ ಸೆಕೆಂಡ್ ಒಪಿನಿಯನ್’ ರೋಗಿಗಳ ನೆರವಿಗೆ ಬರಲಿದೆ.

ರಾಜ್ಯದ ಎಲ್ಲಾ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಸೇವೆ ಒದಗಿಸುವ ಯೋಜನೆಯನ್ನು ಆರೋಗ್ಯ ಇಲಾಖೆ ಹೊಂದಿದೆ. ತಜ್ಞ ವೈದ್ಯರುಗಳ ತಂಡವು ‘ಸೆಕೆಂಡ್ ಒಪಿನಿಯನ್’ ಕೋರುವ ರೋಗಿಗಳ ಶಸ್ತ್ರಚಿಕಿತ್ಸೆ ಬಗ್ಗೆ ಮಾಹಿತಿ ಹಾಗೂ ದಾಖಲೆಗಳನ್ನು ಸರ್ಜರಿ ಬಗ್ಗೆ ವೈದ್ಯರ, ಆಸ್ಪತ್ರೆಗಳ ಮುಖ್ಯಸ್ಥರ ಶಿಫಾರಸುಗಳ ಪರಿಶೀಲನೆ ನಡೆಸಿ ಸರ್ಜರಿ ಅವಶ್ಯಕತೆ ಬಗ್ಗೆ ತಿಳಿಸಲಿದೆ.

ಸರ್ಜರಿ ಬೇಡವಾಗಿದ್ದರೆ ಅಗತ್ಯವಿಲ್ಲದಿರುವುದು ಹಾಗೂ ಪರ್ಯಾಯ ಚಿಕಿತ್ಸೆ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ. ರೋಗಿಯ ಸ್ಥಿತಿಗತಿ ಗಮನಿಸಿ ಸದ್ಯಕ್ಕೆ ಸರ್ಜರಿ ಅನಗತ್ಯವೆನಿಸಿದರೆ ನಂತರದ ವರ್ಷಗಳಲ್ಲಿ ಶಸ್ತ್ರಚಿಕಿತ್ಸೆ ಪಡೆಯುವ ಬಗ್ಗೆ ತಿಳಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ಹಂತದಲ್ಲಿ, TKR/THR ಚಿಕಿತ್ಸಾ ವಿಧಾನಗಳಿಗೆ ಎರಡನೇ ವೈದ್ಯಕೀಯ ಅಭಿಪ್ರಾಯ ಲಭ್ಯವಿರಲಿದೆ.

ಮೊಣಕಾಲು ಕೀಲು ಬದಲಿ, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಹಾಗೂ ಇನ್ನಿತರೆ ಕ್ಲಿಷ್ಟಕರ ಸಮಸ್ಯೆಗಳ ಕುರಿತು ನುರಿತ ವೈದ್ಯರಿಂದ ಎರಡನೇ ಅಭಿಪ್ರಾಯ ಪಡೆಯಬಹುದಾಗಿದೆ. ಈ ಯೋಜನೆಯಲ್ಲಿ ಸಾರ್ವಜನಿಕರು ಅಥವಾ ರೋಗಿಗಳು ಪರಿಣಿತ ಶಸ್ತ್ರಚಿಕಿತ್ಸಕರೊಂದಿಗೆ ಸಂಪರ್ಕ ಸಾಧಿಸಬಹುದು, ಪ್ರಶ್ನೆಗಳನ್ನು ಕೇಳಬಹುದು. ಚಿಕಿತ್ಸಾ ಯೋಜನೆಗಳ ಕುರಿತು ಎರಡನೇ ಅಭಿಪ್ರಾಯ ಪಡೆಯಬಹುದು.

ರೋಗಿಗಳು ಟೋಲ್ ಫ್ರೀ ದೂರವಾಣಿ 18004258330 ಸಹಾಯವಾಣಿಗೆ ಕರೆ ಮಾಡಿ ತಜ್ಞ ವೈದ್ಯರ ಸಲಹೆ ಪಡೆಯಬಹುದಾಗಿದೆ.

ಸಹಾಯವಾಣಿ ಜೊತೆಗೆ ವಾಟ್ಸ್​ಆ್ಯಪ್ ಮೂಲಕವೂ ತಜ್ಞ ವೈದ್ಯರಿಗೆ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ರೋಗ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯ ಬಗೆಗಿನ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ಶಸ್ತ್ರಚಿಕಿತ್ಸೆಗೆ ಒಳಪಡುವ ಅವಶ್ಯಕತೆ ಅಥವಾ ಇತರೆ ಯಾವುದೇ ಗೊಂದಲ, ಸಂದೇಹಗಳನ್ನು ನಿವಾರಿಸಿಕೊಳ್ಳಬಹುದು.

ರೋಗ ಮತ್ತು ಚಿಕಿತ್ಸೆ, ಶಸ್ತ್ರಚಿಕಿತ್ಸಾ ಆಯ್ಕೆಗಳ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದು. ಯೋಜನೆಯಲ್ಲಿ ಮೊಣಕಾಲು ಮತ್ತು ಸೊಂಟದ (Hip) ಸಮಸ್ಯೆಗಳನ್ನು ಹೊಂದಿರುವ ರೋಗಿಗಳಿಗೆ ಸಾಕ್ಷ್ಯ ಆಧರಿತ ಮಾರ್ಗದರ್ಶನ ಒದಗಿಸುವ ಗುರಿ ಹೊಂದಲಾಗಿದೆ.

ಲಭ್ಯವಿರುವ ಅತ್ಯುತ್ತಮ ಚಿಕಿತ್ಸಾ ಆಯ್ಕೆಯ ಬಗ್ಗೆ ಪ್ರಬುದ್ಧ ನಿರ್ಧಾರವನ್ನು ತೆಗೆದುಕೊಳ್ಳಲು ರೋಗಿಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಮಾರ್ಗದರ್ಶನ ದೊರೆಯಲಿದೆ.

‘ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ ಎರಡನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ರೋಗಿಗಳು ಟೋಲ್ ಫ್ರೀ ದೂರವಾಣಿ 18004258330 ಸಹಾಯವಾಣಿಗೆ ಕರೆ ಮಾಡಿ ತಜ್ಞ ವೈದ್ಯರ ಸಲಹೆ ಪಡೆಯಬಹುದಾಗಿದೆ. ಸರ್ಜರಿ ಅವಶ್ಯಕತೆ ಇದೆಯೋ, ಇಲ್ಲವೋ ಹಾಗೂ ಪರ್ಯಾಯ ಚಿಕಿತ್ಸಾ ವಿಧಾನಗಳು ಏನು? ಎಂಬುದರ ಬಗ್ಗೆ ತಜ್ಞ ವೈದ್ಯರ ಸಲಹೆ ಇಲ್ಲಿ ಲಭ್ಯಇರಲಿದೆ.

ಆರೋಗ್ಯ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ವತಿಯಿಂದ ದಿನದ 24/7 ಗಂಟೆ ಅವಧಿಯಲ್ಲಿ ಸಹಾಯವಾಣಿಯು ಕಾರ್ಯ ನಿರ್ವಹಣೆ ಮಾಡಲಿದೆ” ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ಇಂದು, ಸಂಕೀರ್ಣ ಶಸ್ತ್ರಚಿಕಿತ್ಸೆಗಳ ಬಗ್ಗೆ ಆತಂಕ ಅಥವಾ ಅನಿಶ್ಚಿತತೆ ಹೊಂದಿರುವ ರೋಗಿಗಳಿಗೆ “ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯಗಳನ್ನು” ಒದಗಿಸಲು ಆರೋಗ್ಯ ಸೌಧದಲ್ಲಿ ಒಂದು ಅದ್ಭುತ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.

ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೊದಲು ರೋಗಿಗಳು ಎರಡನೇ ಅಭಿಪ್ರಾಯವನ್ನು ಪಡೆಯುವುದು ಅಗತ್ಯವಾಗಿರುತ್ತದೆ.

ಕೆಲವು ಸಂದರ್ಭಗಳಲ್ಲಿ, ಶಸ್ತ್ರಚಿಕಿತ್ಸೆ ಅಗತ್ಯವಿಲ್ಲದಿರಬಹುದು. ಆದ್ದರಿಂದ, ತಜ್ಞ ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ, ಶಸ್ತ್ರಚಿಕಿತ್ಸೆಗೆ ಪರ್ಯಾಯಗಳು ಮತ್ತು ಇತರ ಸಂಬಂಧಿತ ವಿಷಯಗಳ ಬಗ್ಗೆ ಸಲಹೆ ನೀಡುತ್ತಾರೆ.

ಆರಂಭದಲ್ಲಿ, ಮೊಣಕಾಲು ಬದಲಿ ಮತ್ತು ಸೊಂಟದ ಬದಲಾವಣೆಯಂತಹ ಕಾರ್ಯವಿಧಾನಗಳಿಗೆ ಸಲಹೆ ಲಭ್ಯವಿರುತ್ತದೆ.

ತಜ್ಞ ವೈದ್ಯರೊಂದಿಗೆ ಸಮಾಲೋಚಿಸಲು ನೀವು ಸಹಾಯವಾಣಿ 1800 4258 330 ಗೆ ಕರೆ ಮಾಡಬಹುದು. ಈ ಸಹಾಯವಾಣಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ 24/7 ನಿರ್ವಹಿಸುತ್ತದೆ. ಸಮಾಲೋಚನೆಗಾಗಿ ನೀವು WhatsApp ಮೂಲಕ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಬಹುದು.

ಇಂತಹ ಕಾರ್ಯಕ್ರಮವನ್ನು ದೇಶದಲ್ಲೇ ಪ್ರಥಮವಾಗಿ ಜಾರಿಗೊಳಿಸುತ್ತಿರುವುದು ನಮ್ಮ ಸರಕಾರವಾಗಿದ್ದು, ರಾಜ್ಯದ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು.

ಶಸ್ತ್ರಚಿಕಿತ್ಸೆಯ ಬಗ್ಗೆ ನಿಮಗೆ ಯಾವುದೇ ಸಂದೇಹಗಳಿದ್ದರೆ, ಕರೆ ಮಾಡಿ ಮತ್ತು ಉಚಿತ ತಜ್ಞರ ಸಲಹೆ ಪಡೆಯಿರಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...