WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ.
ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗುವಂತೆ ಸಂಭಲ್ ನಲ್ಲಿರುವ ಶಾಹಿ ಈದ್ಗಾ ಮಸೀದಿಯ ಆಡಳಿತ ಸಮಿತಿಗೆ ಸುಪ್ರೀಂ ಕೋರ್ಟ್ ಇದೇ ವೇಳೆ ಸೂಚಿಸಿದೆ.
ಸಂಭಲ್ ಜಾಮಾ ಮಸೀದಿಯ ಶಾಹಿ ಈದ್ಗಾ ಸಮಿತಿಯು ಹೈಕೋರ್ಟ್ ಗೆ ತೆರಳುವವರೆಗೆ ಮಸೀದಿ ಸರ್ವೆ ಪ್ರಕರಣವನ್ನು ಮುಂದುವರಿಸದಂತೆ ಉತ್ತರಪ್ರದೇಶದ ಸಂಭಲ್ ನಲ್ಲಿರುವ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆಯನ್ನು ನೀಡಿದೆ.
ಮಸೀದಿ ಇರುವ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂಬ ಹಿಂದೂ ಅರ್ಜಿದಾರರ ಅರ್ಜಿಯನ್ನು ಪರಿಗಣಿಸಿ ಮಸೀದಿಯ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.