ಬೆಂಗಳೂರು: 2024 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಅಧಿಕೃತ ಜಾಲತಾಣದಲ್ಲಿ ಪಡೆಯಬಹುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪಿಜಿ ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಗೊಂಡಿದೆ.
ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- 2024 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಅಧಿಕೃತ ಜಾಲತಾಣದಲ್ಲಿ ಅಭ್ಯರ್ಥಿಗಳು ಪಡೆಯಬಹುದಾಗಿದೆ.
ಪಿಜಿ ವೈದ್ಯಕೀಯ ಕೋರ್ಸ್ ನ ಒಟ್ಟು 3,506 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಸೀಟು ಹಂಚಿಕೆಯಾಗಿರುವವರು ನವೆಂಬರ್ 29 ರೊಳಗೆ ತಮ್ಮ ಆಯ್ಕೆಯನ್ನು ದಾಖಲಿಸಬೇಕು. ಹಂಚಿಕೆಯಾಗಿರುವ ಸೀಟು ಇಷ್ಟವಾಗಿದ್ದಲ್ಲಿ ಆಯ್ಕೆ 1 ದಾಖಲಿಸಿ ಕಾಲೇಜಿಗೆ ಪ್ರವೇಶ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಚಾಯ್ಸ್ 1 ಮತ್ತು 2 ದಾಖಲಿಸಿದವರು ಡಿಸೆಂಬರ್ 2ರೊಳಗೆ ಶುಲ್ಕ ಕಟ್ಟಬೇಕು. ಚಾಯ್ಸ್ 1 ದಾಖಲಿಸಿದವರು ಮಾತ್ರ ನವೆಂಬರ್ 28, 29, 30 ಮತ್ತು 2 ರಂದು ಕೆಇಎ ಕಚೇರಿಗೆ ಬಂದು ಮೂಲ ದಾಖಲೆಗಳನ್ನು ಸಲ್ಲಿಸಬೇಕು. ಅದರ ನಂತರ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಡಿಸೆಂಬರ್ 4ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಸೀಟು ಹಂಚಿಕೆ ಪಟ್ಟಿ ಸೇರಿದಂತೆ ಆಯ್ಕೆ ಕುರಿತಾದ ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು cetonline.karnataka.gov.in/kea ವೆಬ್ ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.