spot_img

ಫೋಟೋ, ವಿಡಿಯೋ ಡೌನ್‌ಲೋಡ್‌ ಮಾಡುವುದು, ನೋಡುವುದು ಅಪರಾದ ; ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು.!

spot_img
spot_img

Share post:

ಮಕ್ಕಳ ಅಶ್ಲೀಲತೆಗೆ ಸಂಬಂಧಿಸಿದ ಫೋಟೋ, ವಿಡಿಯೋ ಡೌನ್‌ಲೋಡ್ ಮಾಡುವುದು, ನೋಡುವುದು ಹಾಗೂ ಹೊಂದಿರುವುದು ಅಪರಾಧ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ಮಿಸ್​​​ ಯೂನಿವರ್ಸ್​​ ಇಂಡಿಯಾ : 19 ವರ್ಷದ ಯುವತಿ ಈ ಚೆಂದುಳ್ಳಿ ಚೆಲುವೆ ಯಾರು?

ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇಂತಹ ಫೋಟೋ, ವಿಡಿಯೋವನ್ನು ಹೊಂದಿರುವುದು ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಂಡಿದ್ದಾನೆ ಎಂದು ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿತ್ತು. ಡೌನ್​ಲೋಡ್ ಮಾಡಿಕೊಂಡಿದ್ದ ವ್ಯಕ್ತಿ ಬೇರೆಯವರಿಗೆ ಕಳುಹಿಸಿರಲಿಲ್ಲ ಎಂದು ಪೋಕ್ಸ್​ ಪ್ರಕರಣವೆಂದು ಪರಿಗಣಿಸಿರಲಿಲ್ಲ.

ಇದನ್ನೂ ಓದಿ : ತಿರುಪತಿ ತಿರುಮಲ ದೇವಸ್ಥಾನ ಶುದ್ದೀಕರಣ, ಶಾಂತಿ ಹೋಮ!

ಮದ್ರಾಸ್ ಹೈಕೋರ್ಟ್​ನ ತೀರ್ಪು ಪ್ರಶ್ನಿಸಿ ಜಸ್ಟ್ ರೈಟ್ ಫಾರ್ ಚಿಲ್ಡ್ರನ್ ಅಲೈಯನ್ಸ್ ಎಂಬ ಎನ್‌ಜಿಒ ಸುಪ್ರೀಂಗೆ ಅರ್ಜಿ ಹಾಕಿತ್ತು. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ನೋಡುವುದು ಅಪರಾಧ ಎಂದು ಮದ್ರಾಸ್ ಹೈಕೋರ್ಟ್ ಪರಿಗಣಿಸಿಲ್ಲ. ವ್ಯಕ್ತಿಯೊಬ್ಬರು ತಮ್ಮ ಎಲೆಕ್ಟ್ರಾನಿಕ್ ಸಾಧನದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ವೀಕ್ಷಿಸುವುದು ಅಪರಾಧವಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿತ್ತು. ಮದ್ರಾಸ್ ಹೈಕೋರ್ಟ್ ಇದನ್ನು ಪೋಕ್ಸೊ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಅಪರಾಧ ಎಂದು ಪರಿಗಣಿಸಿರಲಿಲ್ಲ.

ಇದನ್ನೂ ಓದಿ : ತುಂಗಭದ್ರಾ ಜಲಾಶಯದ ಬಗ್ಗೆ ಡಿಕೆ.ಶಿವಕುಮಾರ್ ಹೇಳಿದ್ದೆನು.!

ಇದೀಗ ಸುಪ್ರೀಂ ಕೋರ್ಟ್ ಅದು ದೊಡ್ಡ ಅಪರಾಧ ಎಂದಿದೆ. ಮಕ್ಕಳ ಪೋರ್ನೋಗ್ರಫಿ ಪದವನ್ನು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯ ವಸ್ತು (CSAEM : child sexually abusive and exploitative material) ನೊಂದಿಗೆ ಬದಲಾಯಿಸುವ ಮೂಲಕ POCSO (Protection of Children from Sexual Offences. ) ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

 

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...