spot_img
spot_img

PINAKA ROCKET : ದೇಶೀ ನಿರ್ಮಿತ ಪಿನಾಕಾ ರಾಕೆಟ್ ಅಧ್ಯಯನಕ್ಕಾಗಿ ಭಾರತಕ್ಕೆ ಬರುವಂತೆ ಫ್ರೆಂಚ್ ಸೈನ್ಯಕ್ಕೆ ಮೋದಿ ಆಹ್ವಾನ

spot_img
spot_img

Share post:

Marseille (France) News:

ಮೂರು ದಿನಗಳ ಫ್ರಾನ್ಸ್‌ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ – ಫ್ರಾನ್ಸ್‌ ನಡುವಿನ ದ್ವಿಪಕ್ಷೀಯ ಮಾತುಕತೆ ಸಂದರ್ಭ ಉಭಯ ದೇಶಗಳ ವ್ಯಾಪಾರ, ಹೂಡಿಕೆ ಸಂಬಂಧಗಳನ್ನು ವೃದ್ಧಿಸುವ ಬಗ್ಗೆ ಚರ್ಚಿಸುವುದರೊಂದಿಗೆ ಎಲ್ಲ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ನೀಡುವ ಕುರಿತು ಒಪ್ಪಂದಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO – Defense Research and Development Organization) ವಿನ್ಯಾಸಗೊಳಿಸಿದ ‘ಪಿನಾಕಾ ಮಲ್ಟಿ ಬ್ಯಾರೆಲ್ PINAKA ROCKET ಲಾಂಚರ್’ ಅನ್ನು ಫ್ರಾನ್ಸ್‌ ಖರೀದಿಸಲು ಮುಂದಾಗಿದ್ದು, ತಮ್ಮ ಕಣ್ಣಾರೆ ಕಂಡು ಇದರ ಬಗ್ಗೆ ಮತ್ತಷ್ಟು ಅಧ್ಯಯನ ಮಾಡಲು ಭಾರತಕ್ಕೆ ಆಗಮಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫ್ರೆಂಚ್ ಸೈನ್ಯಕ್ಕೆ ಆಹ್ವಾನ ನೀಡಿದ್ದಾರೆ.

ಅದರಲ್ಲಿ ‘ಪಿನಾಕಾ ಮಲ್ಟಿ ಬ್ಯಾರೆಲ್ PINAKA ROCKET  ಲಾಂಚರ್’ ಖರೀದಿ ಕೂಡ ಒಂದಾಗಿದೆ. ದೇಶೀ ನಿರ್ಮಿತ PINAKA ROCKET ಖರೀದಿಸಲು ಫ್ರಾನ್ಸ್‌ ಮುಂದಾಗಿದ್ದು, ಆ ದೇಶದ ಅಧ್ಯಕ್ಷ ಇಮಾನ್ಯುವೆಲ್‌ ಮ್ಯಾಕ್ರನ್‌ ಜತೆಗಿನ ಮಾತುಕತೆ ವೇಳೆ ಪ್ರಧಾನಿ ಮೋದಿ ಈ ವಿಚಾರ ಪ್ರಸ್ತಾಪಿಸಿದ್ದಾರೆ.

ಭಾರತದ ಪಿನಾಕಾ ರಾಕೆಟ್ ಲಾಂಚರ್ ಅನ್ನು ಫ್ರಾನ್ಸ್ ಖರೀದಿಸುವುದರಿಂದ ಎರಡೂ ದೇಶಗಳ ನಡುವಿನ ರಕ್ಷಣಾ ಸಂಬಂಧಗಳು ಬಲಗೊಳ್ಳುತ್ತವೆ. ಹಾಗಾಗಿ ಫ್ರಾನ್ಸ್‌ ಸೇನೆಯ ಹಿರಿಯ ಅಧಿಕಾರಿಗಳು ಭಾರತಕ್ಕೆ ಭೇಟಿ ನೀಡಿ ರಾಕೆಟ್‌ ವ್ಯವಸ್ಥೆ ಬಗ್ಗೆ ಪರಿಶೀಲಿಸುವಂತೆಯೂ ಪ್ರಧಾನಿ ಮೋದಿ ಫ್ರೆಂಚ್ ಸೈನ್ಯಕ್ಕೆ ಆಹ್ವಾನ ನೀಡಿದ್ದಾರೆ ಎಂದು ವರದಿಯಾಗಿದೆ.

PINAKA ROCKET  ಮೂರು ದಿನಗಳ ಫ್ರಾನ್ಸ್‌ ಪ್ರವಾಸ ಅಂತ್ಯಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಭೇಟಿಯಾಗಲು ಬುಧವಾರ ಅಮೆರಿಕಕ್ಕೆ ತೆರಳಿದ್ದಾರೆ. ಫ್ರಾನ್ಸ್‌ ಪ್ರವಾಸದ ವೇಳೆ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಭದ್ರತೆ, ಬಾಹ್ಯಾಕಾಶ, ಭಯೋತ್ಪಾದನೆ ನಿಗ್ರಹ ಸಹಕಾರವನ್ನು ಬಲಪಡಿಸುವುದರ ಜೊತೆಗೆ ಅಣುಶಕ್ತಿಯು ಸೇರಿ ಹಲವು ಕ್ಷೇತ್ರಗಳ ಬಗ್ಗೆ ಪ್ರಧಾನಿ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಇದರಲ್ಲಿ ಕಿಲ್ಲರ್‌ ಜಲಾಂತರ್ಗಾಮಿ ಉತ್ಪಾದನೆಯೂ ಸೇರಿದೆ.PINAKA ROCKET ಫ್ರಾನ್ಸ್ ದೇಶ ಪಿನಾಕಾ ಖರೀದಿಗೆ ಮುಂದಾಗಿರುವುದು ಇಂಡೋ-ಫ್ರೆಂಚ್ ರಕ್ಷಣಾ ಸಂಬಂಧಗಳನ್ನು ಮತ್ತಷ್ಟು ಗಟ್ಟಿ ಮಾಡಿದೆ. ಉಭಯ ದೇಶಗಳ ರಕ್ಷಣಾ ಕ್ಷೇತ್ರಗಳಲ್ಲಿ ಇದೊಂದು ಹೊಸ ಮೈಲಿಗಲ್ಲು. ಪಿನಾಕಾ ರಾಕೆಟ್‌ಗಳನ್ನು ಫ್ರಾನ್ಸ್​ಗೆ ಪೂರೈಸಲು ಭಾರತ ಹೆಮ್ಮೆ ಪಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನು ಓದಿರಿ : Maha Kumbh Impact in India

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...