spot_img
spot_img

ಅಂಬೇಡ್ಕರ್ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ ನಮನ

spot_img
spot_img

Share post:

ನವದೆಹಲಿ: ಇಂದು ನಾವು ಡಾ.ಬಿ.ಆರ್‌.ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸಬೇಕು. ಹಾಗೆಯೇ ಅವರ ದೃಷ್ಟಿಕೋನಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್​ ಅಂಬೇಡ್ಕರ್ ಅವರು ಪರಿನಿರ್ವಾಣ ಹೊಂದಿದ ದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು.

ಸಮಾನತೆ ಮತ್ತು ಮಾನವ ಘನತೆಗಾಗಿ ನಿರಂತರ ಹೋರಾಟ ನಡೆಸಿದ್ದ ಅಂಬೇಡ್ಕರ್‌ ಎಲ್ಲರಿಗೂ ಸ್ಪೂರ್ತಿ ಎಂದು ಈ ಸಂದರ್ಭದಲ್ಲಿ ಮೋದಿ ಬಣ್ಣಿಸಿದ್ದಾರೆ.

ಈ ಪೋಸ್ಟ್​ನಲ್ಲಿ ಅವರು ಮುಂಬೈನಲ್ಲಿ ಅಂಬೇಡ್ಕರ್​ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ನಡೆದ ಚೈತನ್ಯ ಭೂಮಿಗೆ ಭೇಟಿ ನೀಡಿದ ಸಂದರ್ಭದ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಮಹಾ ಪರಿನಿರ್ವಾಣ ದಿನದಂದು ನಾವು ಸಂವಿಧಾನ ಶಿಲ್ಪಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಡಾ.ಬಾಬಾ ಸಾಹೇಬ್​ ಅಂಬೇಡ್ಕರ್​ ಅವರಿಗೆ ತಲೆಬಾಗಬೇಕು. ಅವರ ಕೊಡುಗೆಗಳನ್ನು ಸ್ಮರಿಸಬೇಕು. ಹಾಗೆಯೇ ಅವರ ದೃಷ್ಟಿಕೋನಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬದ್ಧರಾಗಬೇಕು” ಎಂದು ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಡಾ.ಅಂಬೇಡ್ಕರ್​ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ. 1956ರ ಡಿಸೆಂಬರ್​ 6ರಂದು ಅವರು ದೆಹಲಿಯಲ್ಲಿ ಕೊನೆಯುಸಿರೆಳೆದಿದ್ದರು. ಅಂಬೇಡ್ಕರ್‌ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದರಿಂದ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನ ಎಂದು ಗುರುತಿಸಲಾಗುತ್ತದೆ. ಬೌದ್ಧ ಧರ್ಮದಲ್ಲಿ ಪರಿನಿರ್ವಾಣ ಎಂದರೆ ತೀರಿಹೋದ ನಂತರ ನಿರ್ವಾಣವಾಗುವುದು ಎಂಬರ್ಥವಿದೆ.

ಸಂಸತ್​ ಭವನದ ಎದುರಿನ ಅಂಬೇಡ್ಕರ್​ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. “ಅಂಬೇಡ್ಕರ್​ ಅವರು ತಮ್ಮ ಸಂಪೂರ್ಣ ಜೀವನವನ್ನು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗಾಗಿ ಮುಡಿಪಿಟ್ಟವರು. ಅವರ ಚಿಂತನೆ ಮತ್ತು ಸಂವಿಧಾನಕ್ಕೆ ನೀಡಿರುವ ಕೊಡುಗೆಗಳನ್ನು ರಕ್ಷಿಸುವ ಕೆಲಸವಾಗಬೇಕು” ಎಂದು ಖರ್ಗೆ ತಿಳಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...