spot_img
spot_img

PRASHANT KISHOR HOSPITALIZED : ಜೈಲಿನಿಂದ ಬಿಡುಗಡೆಯಾದ ಪ್ರಶಾಂತ್ ಕಿಶೋರ್ಗೆ ಅನಾರೋಗ್ಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Patna News:

ಸೋಮವಾರ ಸಂಜೆ ಬೇಯೂರ್ ಜೈಲಿನಿಂದ ಬಿಡುಗಡೆಯಾದ PRASHANT KISHORಅನಾರೋಗ್ಯಕ್ಕೊಳಗಾಗಿದ್ದರು. ಶೇಖಪುರ್​ನ ತಮ್ಮ ನಿವಾಸದಲ್ಲಿದ್ದ ಕಿಶೋರ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಪಾಟ್ನಾದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್​ಸಿ) ಪರೀಕ್ಷಾರ್ಥಿಗಳನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ PRASHANT KISHORಅವರ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಮಂಗಳವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜಕೀಯ ತಂತ್ರಜ್ಞ ಕಿಶೋರ್ ಜನವರಿ 2ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಇದರಿಂದ ಅವರಿಗೆ ನಿರ್ಜಲೀಕರಣ, ಜಠರದುರಿತ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿದೆ” ಎಂದು ವೈದ್ಯರು ತಿಳಿಸಿದ್ದಾರೆ. ಮೇದಾಂತ ಆಸ್ಪತ್ರೆಯ ವೈದ್ಯರ ತಂಡವು ಅವರ ಸಂಪೂರ್ಣ ಆರೋಗ್ಯ ಮೌಲ್ಯಮಾಪನ ನಡೆಸುತ್ತಿದೆ.ದೀರ್ಘಕಾಲದ ಉಪವಾಸದಿಂದಾಗಿ ಕಿಶೋರ್ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ಆಂಬ್ಯುಲೆನ್ಸ್ ಜೊತೆಗಿದ್ದ ವೈದ್ಯರು ಹೇಳಿದ್ದಾರೆ.

“ಅವರು ಹಲವಾರು ದಿನಗಳಿಂದ ಆಹಾರವನ್ನು ಸೇವಿಸಿಲ್ಲ.70 ನೇ ಬಿಪಿಎಸ್​ಸಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕಿಶೋರ್ ಪಾಟ್ನಾದ ಗಾಂಧಿ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಆದರೆ ಸೋಮವಾರ ಮುಂಜಾನೆ ಪೊಲೀಸರು ಅವರನ್ನು ಬಂಧಿಸಿದ್ದರು.ಆದರೆ ಜಾಮೀನಿನ ಷರತ್ತುಗಳನ್ನು ಒಪ್ಪಲು ನಿರಾಕರಿಸಿದ ಕಿಶೋರ್ ನ್ಯಾಯಾಂಗ ಬಂಧನಕ್ಕೊಳಗಾಗಿದ್ದರು. ಭವಿಷ್ಯದಲ್ಲಿ ಇಂಥ ಪ್ರತಿಭಟನೆಗಳಲ್ಲಿ ಭಾಗವಹಿಸದಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು.

ಆದರೆ ಸತ್ಯಾಗ್ರಹದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ತಾವು ಈ ಷರತ್ತು ಒಪ್ಪಲ್ಲ ಎಂದಿದ್ದರು.ಬಂಧನದ ನಂತರ, ಕಿಶೋರ್ ಅವರನ್ನು ಪಾಟ್ನಾ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನಂತರ ನ್ಯಾಯಾಲಯ ಅವರಿಗೆ 25,000 ರೂ.ಗಳ ಬಾಂಡ್ ಮೇಲೆ ಷರತ್ತುಬದ್ಧ ಜಾಮೀನು ನೀಡಿತ್ತು.ಬಿಹಾರವು ಮಹಾತ್ಮ ಗಾಂಧಿ ಸತ್ಯಾಗ್ರಹ ಮಾಡಿದ ಸ್ಥಳವಾಗಿದೆ ಮತ್ತು ಇಲ್ಲಿ ಅದೇ ರೀತಿ ಸತ್ಯಾಗ್ರಹ ಮಾಡುವುದು ಅಪರಾಧವಾಗಿದ್ದರೆ, ನಾನು ಅಂಥ ಅಪರಾಧ ಮಾಡಲು ಸಿದ್ಧನಿದ್ದೇನೆ” ಎಂದು ಕಿಶೋರ್ ಘೋಷಿಸಿದರು.”ನಾನು ಮತ್ತೆ ಆ ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ ಎಂಬ ಷರತ್ತಿನ ಮೇಲೆ ನನಗೆ ಜಾಮೀನು ನೀಡಲಾಯಿತು.

ಆದರೆ ಮೂಲಭೂತ ಹಕ್ಕು ಮತ್ತು ನ್ಯಾಯಕ್ಕಾಗಿ ಈ ಪ್ರತಿಭಟನೆ ನಡೆಯುತ್ತಿದೆ. ಮಹಿಳೆಯರು ಮತ್ತು ಯುವಕರ ಮೇಲೆ ಲಾಠಿ ಪ್ರಹಾರದಂತಹ ಅನ್ಯಾಯಗಳ ವಿರುದ್ಧ ಧ್ವನಿ ಎತ್ತುವುದು ಬಿಹಾರದಲ್ಲಿ ಅಪರಾಧವಾಗಿದ್ದರೆ, ನಾನು ಜೈಲಿಗೆ ಹೋಗಲು ಸಿದ್ಧನಿದ್ದೇನೆ.ಷರತ್ತುಬದ್ಧ ಜಾಮೀನು ನಿರಾಕರಿಸಿದ ನಂತರ, ಕಿಶೋರ್ ಅವರನ್ನು ಪಾಟ್ನಾ ಪೊಲೀಸರು 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಿದರು. ಆದರೆ ನಂತರ ನ್ಯಾಯಾಲಯ ಅವರಿಗೆ ಬೇಷರತ್ತಾದ ಜಾಮೀನು ನೀಡಿತ್ತು. ಹೀಗಾಗಿ ಸೋಮವಾರ ರಾತ್ರಿ ಅವರನ್ನು ಬೇಯೂರ್ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು.PRASHANT KISHOR ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನು ಓದಿರಿ : CATTLE FAIR : ಹಾವೇರಿ: ಹುಕ್ಕೇರಿಮಠದ ಜಾನುವಾರು ಜಾತ್ರೆಗೆ ಚಾಲನೆ,

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...