ಭಾರತ, ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ನ್ಯೂಯಾರ್ಕ್: ಭಾರತ, ಅಮೆರಿಕದಲ್ಲಿ ಇನ್ನೂ ಎರಡು ರಾಯಭಾರ ಕಚೇರಿ ತೆರೆಯಲು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಘೋಷಿಸಿದ್ದಾರೆ.
ಇದನ್ನೂ ಓದಿ : ಮಿಸ್ ಯೂನಿವರ್ಸ್ ಇಂಡಿಯಾ : 19 ವರ್ಷದ ಯುವತಿ ಈ ಚೆಂದುಳ್ಳಿ ಚೆಲುವೆ ಯಾರು?
ಇಂದು ನ್ಯೂಯಾರ್ಕ್ ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಳೆದ ವರ್ಷ, ಸಿಯಾಟಲ್‌ನಲ್ಲಿ ನಮ್ಮ ಸರ್ಕಾರ ಹೊಸ ಕಾನ್ಸುಲೇಟ್ ತೆರೆಯಲಿದೆ ಎಂದು ನಾನು ಘೋಷಿಸಿದ್ದೆ. ಅದರಂತೆ ಈಗ ಅದನ್ನು ಪ್ರಾರಂಭಿಸಲಾಗಿದೆ ಎಂದರು.
ಇದನ್ನೂ ಓದಿ : ತಿರುಪತಿ ತಿರುಮಲ ದೇವಸ್ಥಾನ ಶುದ್ದೀಕರಣ, ಶಾಂತಿ ಹೋಮ!
ನಾವು ಇನ್ನೂ ಎರಡು ಹೊಸ ರಾಯಭಾರ ಕಚೇರಿಗಳನ್ನು ತೆರೆಯುವ ಬಗ್ಗೆ ಸಲಹೆಗಳನ್ನು ಸಹ ಕೋರಿದ್ದೇವೆ. ನಿಮ್ಮ ಸಲಹೆಯ ನಂತರ ಭಾರತ, ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದರು.