spot_img
spot_img

ಮೊದಲ ಬಾರಿ ವಯನಾಡುಗೆ ಪ್ರಿಯಾಂಕಾ ಗಾಂಧಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಲೋಕಸಭೆಯಲ್ಲಿ ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್​ ನಾಯಕಿ ತಮ್ಮ ಕ್ಷೇತ್ರ ವಯನಾಡುಗೆ ಆಗಮಿಸುತ್ತಿದ್ದಾರೆ.
ಮೊದಲ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನ ಮೂಲಕ ಸಂಸತ್​ ಪ್ರವೇಶಿಸಿರುವ ಅವರನ್ನು ಭರ್ಜರಿಯಾಗಿ ಸ್ವಾಗತಿಸಲು ಸಿದ್ಧತೆ ಕೂಡ ನಡೆಸಲಾಗಿದೆ. ವಯನಾಡುಗೆ ಆಗಮಿಸಲಿರುವ ಪ್ರಿಯಾಂಕಾ ಗಾಂದಿಗೆ ಸಹೋದರ ರಾಹುಲ್​ ಗಾಂಧಿ ಕೂಡ ಜೊತೆಯಾಗಲಿದ್ದು, ಸಾರ್ವಜನಿಕ ಸಭೆಯಲ್ಲಿ ಇಬ್ಬರು ಭಾಗಿಯಾಗಲಿದ್ದಾರೆ.
ಶನಿವಾರ ಕೋಝಿಕ್ಕೊಡ್​ ಜಿಲ್ಲೆಯ ತಿರುವಬಡಿ ವಿಧಾನಸಭಾ ಕ್ಷೇತ್ರದ ಮುಕ್ಕಮ್​ನಲ್ಲಿ ಸಭೆ ನಡೆಸಲಿದ್ದಾರೆ. ಬಳಿಕ ಅವರು ಎರನಾಡಿನ ನಿಲಂಬೂರಿನ ಕರುಳೈ ಮತ್ತು ಎರನಾಡಿನ ಎಡವನ್ನಾದಲ್ಲಿ ಮಧ್ಯಾಹ್ನ 2.15ರಿಂದ 4.30ರ ವರೆಗೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ನ. 23ರಂದು ಪ್ರಕಟವಾದ ಫಲಿತಾಂಶದಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದ ಅವರಿಗೆ ಬುಧವಾರ ಪಕ್ಷದ ನಾಯಕರು ಗೆಲುವಿನ ಪ್ರಮಾಣ ಪತ್ರವನ್ನು ನೀಡಿದ್ದರು. ಮರುದಿನ ಗುರುವಾರ ಲೋಕಸಭೆಯಲ್ಲಿ ಕಾಂಗ್ರೆಸ್​ ನಾಯಕರ ಹರ್ಷೋದ್ಘಾರದ ನಡುವೆ ಸಂವಿಧಾನದ ಪ್ರತಿ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಪ್ರಮಾಣವಚನ ಸ್ವೀಕರಿಸಿದ್ದರು.
2019ರಿಂದಲೂ ರಾಜಕೀಯದಲ್ಲಿ ಸಕ್ರಿಯವಾಗಿರುವ ಪ್ರಿಯಾಂಕಾ, ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ರಾಜಕೀಯ ಜೀವನ ಆರಂಭವಾದ 5 ವರ್ಷಗಳ ಬಳಿಕ ಅವರು ಜನಪ್ರತಿನಿಧಿಯಾಗಿ ತಮ್ಮ ಪ್ರಯಾಣ ಶುರು ಮಾಡಿದ್ದಾರೆ.
ಅವರ ಈ ಗೆಲುವು ಕೇರಳದಲ್ಲಿ ಕಾಂಗ್ರೆಸ್‌ನ ಅಸ್ತಿತ್ವವನ್ನು ಗಟ್ಟಿಗೊಳಿಸುವಲ್ಲಿ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪಕ್ಷಕ್ಕೆ ಪುನರ್​ ಶಕ್ತಿ ರೂಪಿಸುವಲ್ಲಿ ಪ್ರಮುಖವಾಗಲಿದೆ ಎನ್ನಲಾಗಿದೆ.
ರಾಹುಲ್​ ಗಾಂಧಿ ಅವರಿಂದ ತೆರವಾದ ಸ್ಥಾನಕ್ಕೆ ಸ್ಪರ್ಧಿಸಿದ ಅವರು, ಸಹೋದರನಿಗಿಂತ ಅಧಿಕ ಮತಗಳಿಂದ ಗೆಲುವನ್ನು ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...