ಬೆಂಗಳೂರು: ಅಕ್ಟೋಬರ್ 27ರಂದು ನಡೆದ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯ ಅಂಕಗಳ ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆದಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬುಧವಾರ ಪ್ರಕಟಿಸಲಾಗಿದೆ.
”ಫಲಿತಾಂಶದ ಜೊತೆಗೆ ಅಂತಿಮ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ. ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದರೆ ನವೆಂಬರ್ 28ರಂದು ಸಂಜೆ 4 ಗಂಟೆಯ ಒಳಗೆ ವೆಬ್ಸೈಟ್ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಸಲ್ಲಿಸಬಹುದು” ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿ.ಎಸ್.ಸಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ಗಳಿಗೆ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ನವೆಂಬರ್ 28ರ ವರೆಗೆ ದಿನಾಂಕ ವಿಸ್ತರಿಸಲಾಗಿದೆ.
ನವೆಂಬರ್ 29 ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.