ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
545 ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು.
ಇದರಲ್ಲಿ 545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.
ಜೂನ್. ೦೬ , ೨೦೨೦ ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಆಯ್ಕೆ ಪಟ್ಟಿಯು ಮಾನ್ಯ ಉಚ್ಚ ನ್ಯಾಯಾಲಯವು ಪಿಟಿಷನ್ 20:16343/202400 ನೀಡುವ ತೀರ್ಪಿಗೊಳಪಟ್ಟಿರುತ್ತದೆ ಎಂದು ವೃಂದ ಬದಲಾವಣೆ, ಮೀಸಲಾತಿ ಪ್ರವರ್ಗ ಬದಲಾವಣೆ, ಅರ್ಹತಾ ಪಟ್ಟಿಯಲ್ಲಿನ ಸ್ಥಾನ ಮತ್ತು ಘಟಕಗಳ ಬದಲಾವಣೆ ಆಗುವ ಸಾಧ್ಯತೆಗೊಳಪಟ್ಟಿರುತ್ತದೆ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.
ಈ ಆಯ್ಕೆ ಪಟ್ಟಿಯು ನಿಯಮಗಳನುಸಾರ ರಚಿಸಲಾಗಿರುವ ವೈದ್ಯಕೀಯ ಮಂಡಳಿಯು ನಡೆಸುವ ವೈದ್ಯಕೀಯ ಪರೀಕ್ಷೆಯ ಫಲಿತಾಂಶಗಳಿಗೆ ಒಳಪಟ್ಟಿರುತ್ತದೆ.
ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು ಇದ್ದ ಕಾರಣದಿಂದ ಸದರಿಯವರಿಗೆ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ, ಯಾವುದೇ ರೀತಿಯ ಕಾನೂನಾತ್ಮಕ ಹಕ್ಕು ಇರುವುದಿಲ್ಲ.
ಈ ಆಯ್ಕೆ ಪಟ್ಟಿಯು ಮುಂದಿನ ಯಾವುದೇ ಮಾನ್ಯ ಕರ್ನಾಟಕ ನ್ಯಾಯ ಮಂಡಳಿ / ಮಾನ್ಯ ಉಚ್ಚ ನ್ಯಾಯಾಲಯ / ಮಾನ್ಯ ಭಾರತದ ಸರ್ವೋಚ್ಛ ನ್ಯಾಯಾಲಯದ ಅಂತಿಮ ತೀರ್ಮಾನಗಳಿಗೆ ಒಳಪಟ್ಟಿರುತ್ತದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now