spot_img
spot_img

545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿ ಬಿಡುಗಡೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
545 ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು.
ಇದರಲ್ಲಿ 545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.
ಜೂನ್. ೦೬ , ೨೦೨೦ ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಆಯ್ಕೆ ಪಟ್ಟಿಯು ಮಾನ್ಯ ಉಚ್ಚ ನ್ಯಾಯಾಲಯವು ಪಿಟಿಷನ್ 20:16343/202400 ನೀಡುವ ತೀರ್ಪಿಗೊಳಪಟ್ಟಿರುತ್ತದೆ ಎಂದು ವೃಂದ ಬದಲಾವಣೆ, ಮೀಸಲಾತಿ ಪ್ರವರ್ಗ ಬದಲಾವಣೆ, ಅರ್ಹತಾ ಪಟ್ಟಿಯಲ್ಲಿನ ಸ್ಥಾನ ಮತ್ತು ಘಟಕಗಳ ಬದಲಾವಣೆ ಆಗುವ ಸಾಧ್ಯತೆಗೊಳಪಟ್ಟಿರುತ್ತದೆ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.
ಈ ಆಯ್ಕೆ ಪಟ್ಟಿಯು ನಿಯಮಗಳನುಸಾರ ರಚಿಸಲಾಗಿರುವ ವೈದ್ಯಕೀಯ ಮಂಡಳಿಯು ನಡೆಸುವ ವೈದ್ಯಕೀಯ ಪರೀಕ್ಷೆಯ ಫಲಿತಾಂಶಗಳಿಗೆ ಒಳಪಟ್ಟಿರುತ್ತದೆ.
ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು ಇದ್ದ ಕಾರಣದಿಂದ ಸದರಿಯವರಿಗೆ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ, ಯಾವುದೇ ರೀತಿಯ ಕಾನೂನಾತ್ಮಕ ಹಕ್ಕು ಇರುವುದಿಲ್ಲ.
ಈ ಆಯ್ಕೆ ಪಟ್ಟಿಯು ಮುಂದಿನ ಯಾವುದೇ ಮಾನ್ಯ ಕರ್ನಾಟಕ ನ್ಯಾಯ ಮಂಡಳಿ / ಮಾನ್ಯ ಉಚ್ಚ ನ್ಯಾಯಾಲಯ / ಮಾನ್ಯ ಭಾರತದ ಸರ್ವೋಚ್ಛ ನ್ಯಾಯಾಲಯದ ಅಂತಿಮ ತೀರ್ಮಾನಗಳಿಗೆ ಒಳಪಟ್ಟಿರುತ್ತದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ

ಧಾರವಾಡ: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಮಂದಿ ಆರೋಪಿಗಳಿಗೆ ಧಾರವಾಡ ಹೈಕೋರ್ಟ್ ಪೀಠ...

ಬಂಗಾರ ಬಣ್ಣದ ನಾಗರಹಾವು ನೋಡಿದ್ದೀರಾ?

ಅಮರಾವತಿ (ಆಂಧ್ರಪ್ರದೇಶ): ಹಾವುಗಳು ಸಹಜವಾಗಿ ಕಪ್ಪು, ಕಂದು ಬಣ್ಣದಲ್ಲಿ ಬರುತ್ತವೆ. ಮಾನವನ ಆವಾಸ್ಥ ಸ್ಥಾನದಿಂದ ದೂರದಲ್ಲಿ ಬದುಕುವ ಅವು ಆಗಾಗ್ಗೆ ಜನರ ಮಧ್ಯೆ ಗೋಚರಿಸುವುದುಂಟು....

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ

ಮೈಸೂರು: ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಆಗಿಲ್ಲ. ಭ್ರಷ್ಟಾಚಾರ ಆಗಿದ್ದರೆ ನಾನು ರಾಜಕೀಯ ಬಿಡುತ್ತೇನೆ. ಪ್ರಧಾನಿ ಮೋದಿ ಸುಳ್ಳು ಆರೋಪ ಮಾಡಿದ್ದಾರೆ....

ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕು

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು ಮುಖ್ಯವಾಗಿ ದಕ್ಷಿಣ ಒಳನಾಡಿನಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ (ನ.14)ಕ್ಕೆ ಅನ್ವಯವಾಗುವಂತೆ ಅಲ್ಲಿನ...