spot_img
spot_img

PSI ಪರಶುರಾಮ್‌ ಸಾವು ಪ್ರಕರಣ: ಸರ್ಕಾರ ತನಿಖೆಗೆ ವಹಿಸಿದ ಮರುದಿನವೇ ಯಾದಗಿರಿಗೆ ಸಿಐಡಿ ತಂಡ ಎಂಟ್ರಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

PSI ಪರಶುರಾಮ್‌ ಸಾವು ಪ್ರರಕರಣ ಸಂಬಂಧ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು (Channa Reddy Patel) ಮತ್ತು ಅವರ ಪುತ್ರ ಪಂಪಣ್ಣಗೌಡ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬೆನ್ನಲ್ಲೇ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಶನಿವಾರ (ಆ.3) ಆದೇಶ ಹೊರಡಿಸಿತ್ತು. ಸರ್ಕಾರ ಆದೇಶಿಸಿದ ಮರುದಿನವೇ ಡಿವೈಎಸ್‌ಪಿ (DYSP) ಪುನೀತ ನೇತೃತ್ವದ ಸಿಐಡಿ ತನಿಖಾ ತಂಡ ಯಾದಗಿರಿಗೆ (Yadagiri) ಭೇಟಿ ಕೊಟ್ಟಿದೆ.

ಯಾದಗಿರಿ ನಗರ ಪೊಲೀಸ್‌ ಠಾಣೆಗೆ (Yadagiri City Police Station) ಭೇಟಿ ನೀಡಿದ್ದ ಸಿಐಡಿ ತಂಡ ಈಗಾಗಲೇ ಡಿವೈಎಸ್ಪಿ ಕಚೇರಿಯಲ್ಲಿ ಕೇಸ್‌ಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡಿದೆ. ಇಂದೇ ಪೊಲೀಸರಿಂದ ಕೇಸ್ ಫೈಲ್ ಪಡೆದು, ತನಿಖೆ ಚುರುಕುಗೊಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ವಯನಾಡಿನ ದುರಂತಕ್ಕೆ ಮಿಡಿದ ಅಲ್ಲು ಅರ್ಜುನ್- ಸಂತ್ರಸ್ತರಿಗೆ 25 ಲಕ್ಷ ದೇಣಿಗೆ ನೀಡಿದ ನಟ

ಇನ್ನೂ ಪರಶುರಾಮ್‌ ನಿಗೂಢ ಸಾವು ಪ್ರಕರಣದಲ್ಲಿ ಶಾಸಕ ಚೆನ್ನಾರೆಡ್ಡಿ ಹಾಗು ಪುತ್ರ ಪಂಪನಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕೇಸ್‌ ದಾಖಲಾಗುತ್ತಿದ್ದಂತೆ ಬಂಧನದ ಭೀತಿಗೆ ಒಳಗಾಗಿರುವ ಶಾಸಕ ಹಾಗೂ ಪುತ್ರ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಚೆನ್ನಾರೆಡ್ಡಿ ಹಾಗು ಪುತ್ರ ಪಂಪನಗೌಡ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಯಾರ ಸಂಪರ್ಕದಲ್ಲಿಯೂ ಇಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

PSI ಪರಶುರಾಮ್ ತಂದೆ ಹೇಳಿದ್ದೇನು?

ಮಗನ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಶುರಾಮ್ ತಂದೆ ಜನಕಮುನಿ, ಶುಕ್ರವಾರ ಮಧ್ಯಾಹ್ನ ಇಬ್ಬರೂ ಸೇರಿ ಮನೆಯಲ್ಲಿ ಅಡುಗೆ ಮಾಡಿದ್ದೆವು. ಚಿತ್ರಾನ್ನ ಮಾಡಿ ಊಟ ಮಾಡಿಕೊಂಡಿದ್ದೆವು. ಆನಂತರ ಅವನು ಹೋಗಿ ಅವನ ಕೋಣೆಯಲ್ಲಿ ಮಲಗಿದ್ದ. ರಾತ್ರಿ 8 ಗಂಟೆ ಹೊತ್ತಿಗೆ ಎಬ್ಬಿಸಲು ಹೋದಾಗ ಅವನು ಎದ್ದೇಳಲಿಲ್ಲ. ಬೆಡ್ ಬಳಿ ಸ್ವಲ್ಪ ರಕ್ತ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಸೇರಿಸಿದ್ರು ಅವನು ಬದುಕಲಿಲ್ಲ. ನಮ್ಮದು ತೀರಾ ಬಡತನದ ಕುಟುಂಬ. ಬಡತನದಲ್ಲೇ ಕಷ್ಟಪಟ್ಟು ಓದಿ ನೌಕರಿ ಪಡೆದಿದ್ದ. ಏನೇ ನೋವಾದರೂ ಅವನ ಹೆಂಡತಿ, ತಾಯಿ ಜೊತೆ ಹಂಚಿಕೊಳ್ತಿದ್ದ. ಶುಕ್ರವಾರ ಬೆಳಗ್ಗೆ ಯಾಕೋ ಬೇಜಾರಾಗಿದ್ದ. ಅವನ ಸಾವಿನಿಂದ ನಮಗೆಲ್ಲ ತುಂಬಾ ಆಘಾತವಾಗಿದೆ. ನನ್ನ ಮಗನ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು. ನನ್ನ ಸೊಸೆಗೆ ಬದುಕಲು ದಾರಿ ಮಾಡಿಕೊಡಬೇಕು ಅಂತ ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...