spot_img
spot_img

Puri Jagannath Temple : ಹೊಸ ವರ್ಷದಿಂದ ಪುರಿ ಜಗನ್ನಾಥ ದೇಗುಲದಲ್ಲಿ ‘ನೂತನ ದರ್ಶನ ವ್ಯವಸ್ಥೆ’

spot_img
spot_img

Share post:

Bhubaneswar News:

ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ ಸರ್ಕಾರ ಭಾನುವಾರ ತಿಳಿಸಿದೆ.ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ಪುರಿ ಜಗನ್ನಾಥನ ದೇಗುಲದಲ್ಲಿ ನೂತನ ವರ್ಷದಿಂದ ಹೊಸ ದರ್ಶನ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಒಡಿಶಾ ಸರ್ಕಾರ ತಿಳಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಒಡಿಶಾ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್, ‘ಈ ಹೊಸ ವ್ಯವಸ್ಥೆಯು ಜನವರಿ 1ರಿಂದ ಪ್ರಾರಂಭವಾಗಲಿದ್ದು, ಈಗಾಗಲೇ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ಹೊಸ ವ್ಯವಸ್ಥೆಗಳ ಪ್ರಕಾರ, ಭಕ್ತರು ಈಗಿರುವ ದ್ವಾರ (ಸತಪಹಚ) ಮೂಲಕ ಜಗನ್ನಾಥ ದೇವಾಲಯವನ್ನು ಪ್ರವೇಶಿಸುತ್ತಾರೆ ಮತ್ತು ನಿರ್ಗಮನವನ್ನು ಎರಡು ವಿಭಿನ್ನ ದ್ವಾರಗಳ (ಘಂಟಿ ಮತ್ತು ಗರಡ) ಮೂಲಕ ಮಾಡಲಾಗುವುದು.

ಡಿಸೆಂಬರ್ 30ರಿಂದ 31ರವರೆಗೂ ಎರಡು ದಿನಗಳ ಕಾಲ ಪ್ರಾಯೋಗಿಕವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಈ ವ್ಯವಸ್ಥೆಯು ಉತ್ತಮ ಸೌಲಭ್ಯಗಳಿಂದ ಕೂಡಿದೆ. ಮಹಿಳೆಯರು, ಮಕ್ಕಳು ಮತ್ತು ವಿಕಲಚೇತನರಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. ದೇವರ ದರ್ಶನ ಪಡೆದ ಬಳಿಕ ದೇವಸ್ಥಾನದ ಪ್ರತ್ಯೇಕ ಬಾಗಿಲುಗಳ ಮಾರ್ಗವಾಗಿ ಭಕ್ತರು ಹೊರಗೆ ಬರಲಿದ್ದಾರೆ ಎಂದು ಹರಿಚಂದನ್ ತಿಳಿಸಿದ್ದಾರೆ.

ಇದೇ ವೇಳೆ ಸಚಿವ ಹರಿಚಂದನ್ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಆಡಳಿತ ಮಂಡಳಿಯ (ಎಸ್‌ಜೆಟಿಎ) ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಧಿ ಜತೆಯಲ್ಲಿದ್ದರು.ಇದಕ್ಕಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಡಿಸೆಂಬರ್ 27 ಅಥವಾ 28 ರೊಳಗೆ ಅಗತ್ಯ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...