ನವದೆಹಲಿ: ಏತನ್ಮಧ್ಯೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿಯವರ ಭಾಷಣ “ಅತ್ಯುತ್ತಮ” ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಚೊಚ್ಚಲ ಭಾಷಣವನ್ನು ಶ್ಲಾಘಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ತಮ್ಮ ಭಾಷಣಕ್ಕಿಂತ ಅವರ ಭಾಷಣ ಉತ್ತಮವಾಗಿದೆ ಎಂದು ಶುಕ್ರವಾರ ಹೇಳಿದ್ದಾರೆ.
ಏತನ್ಮಧ್ಯೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿಯವರ ಭಾಷಣ “ಅತ್ಯುತ್ತಮ” ಎಂದು ಹೇಳಿದ್ದಾರೆ.
“ಅದ್ಭುತ ಭಾಷಣ. ನನ್ನ ಚೊಚ್ಚಲ ಭಾಷಣಕ್ಕಿಂತ ಉತ್ತಮವಾಗಿದೆ. ಅದನ್ನು ಹಾಗೆ ಇಡೋಣ” ಎಂದು ರಾಹುಲ್ ಗಾಂಧಿ ಹೇಳಿದರು.
“ನನಗೆ ತುಂಬಾ ಸಂತೋಷವಾಗಿದೆ, ಅವರು ದೇಶಾದ್ಯಂತ ತಮ್ಮ ಅನುಭವದ ಬಗ್ಗೆ ಬಹಳ ಸ್ಪಷ್ಟವಾಗಿ ಮಾತನಾಡಿದ್ದಾರೆ … ಅವರು ಜನರ ಕಷ್ಟಗಳ ಬಗ್ಗೆ ಮಾತನಾಡಿದ್ದಾರೆ … ಲೋಕಸಭೆಯು ಸರಿಯಾಗಿ ಕಾರ್ಯನಿರ್ವಹಿಸಬೇಕು ಮತ್ತು ಸದನದಲ್ಲಿ ಚರ್ಚೆಗಳು ನಡೆಯಬೇಕು. ವಿವಿಧ ರಾಜ್ಯಗಳ ಜನರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಪ್ರಧಾನಿ ಮೋದಿ ಗಮನಹರಿಸಬೇಕು. ನನಗೆ ತುಂಬಾ ಹೆಮ್ಮೆ ಇದೆ ಎಂದು ರಾಬರ್ಟ್ ವಾದ್ರಾ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿಯವರ ಪತಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರು ವಯನಾಡ್ ಸಂಸದೆಯ ಭಾಷಣದಿಂದ ನನಗೆ ತುಂಬಾ ಸಂತೋಷವಾಗಿದೆ. ಕಾಂಗ್ರೆಸ್ ಮತ್ತಷ್ಟು ಪ್ರಬಲವಾಗಿತ್ತದೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲ, ಪ್ರಿಯಾಂಕಾ ಅವರು ಎಲ್ಲ ಸಂಗತಿಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
“ಅತ್ಯುತ್ತಮ ಭಾಷಣ. ತುಂಬಾ ಚೆನ್ನಾಗಿದೆ. ಅವರು ಎಲ್ಲಾ ಸಂಗತಿಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ – ಸಂವಿಧಾನವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಮತ್ತು ಮೋದಿ ಸರ್ಕಾರ ಈ ದೇಶದ ಮಹಿಳೆಯರು ಮತ್ತು ಜನರನ್ನು ರಕ್ಷಿಸುತ್ತಿಲ್ಲ ಎಂಬುದನ್ನು ಹೇಳಿದ್ದಾರೆ. ಅವರ ಭಾಷಣದಿಂದ ನಮಗೆ ತುಂಬಾ ಸಂತೋಷವಾಗಿದೆ” ಎಂದು ಖರ್ಗೆ ತಿಳಿಸಿದರು.