spot_img
spot_img

ರಾಹುಲ್ ಗಾಂಧಿ ಪೌರತ್ವ ವಿವಾದ : ಕೋರ್ಟ್​ ಸೂಚನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಲಖನೌ (ಉತ್ತರಪ್ರದೇಶ): ರಾಹುಲ್​ ಗಾಂಧಿ ಭಾರತ ಸೇರಿದಂತೆ ಬ್ರಿಟನ್​ ಪೌರತ್ವ ಹೊಂದಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಪಿಐಎಲ್​​ ಸಲ್ಲಿಸಿದ್ದು, ಈ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಉತ್ತರಪ್ರದೇಶ ಕೋರ್ಟ್​ ಸೂಚಿಸಿದೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರು ಬ್ರಿಟನ್​ ಪೌರತ್ವ ಹೊಂದಿದ್ದಾರೆ. ಚುನಾವಣಾ ಅಫಿಡವಿಟ್​ನಲ್ಲಿ ಅದನ್ನು ನಮೂದಿಸದೇ ಇರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸೂಚಿಸಿದೆ.

ಕರ್ನಾಟಕದ ಬಿಜೆಪಿ ಕಾರ್ಯಕರ್ತ ಎಸ್ ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಆರ್ ಮಸೂಡಿ ಮತ್ತು ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠ ಈ ಆದೇಶ ನೀಡಿದೆ.

ರಾಹುಲ್​ ಗಾಂಧಿ ಅವರ ದ್ವಿಪೌರತ್ವ ಪ್ರಶ್ನಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ ಮತ್ತು ಪಾಸ್‌ಪೋರ್ಟ್ ಕಾಯ್ದೆ ಅಡಿ ಅವರ ನಾಗರಿಕತ್ವದ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಹಿಂದಿನ ವಿಚಾರಣೆಯ ವೇಳೆ ನ್ಯಾಯಾಲಯವು ಅರ್ಜಿದಾರರ ಕೋರಿಕೆಯನ್ನು ಸ್ವೀಕರಿಸಲಾಗಿದೆಯೇ ಎಂದು ಕೇಂದ್ರಕ್ಕೆ ಪೀಠ ಕೇಳಿತ್ತು. ಈ ಬಗ್ಗೆ ಮಂಗಳವಾರದ ವಿಚಾರಣೆಯಲ್ಲಿ ಕೇಂದ್ರದ ಪರವಾಗಿ ಮಾಹಿತಿ ನೀಡಿದ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಸ್‌ಬಿ ಪಾಂಡೆ ಅವರು ಮನವಿ ಅಂಗೀಕರಿಸಲಾಗಿದ್ದು, ತನಿಖೆ ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದರು.

ಶಿಶಿರ್​ ಅವರು ಸಲ್ಲಿಸಿರುವ ಪಿಐಎಲ್‌ನಲ್ಲಿ, ವಿಪಕ್ಷ ನಾಯಕರು ಬ್ರಿಟಿಷ್ ಸರ್ಕಾರದ ದಾಖಲೆ, ಕೆಲವು ಇಮೇಲ್‌ಗಳನ್ನು ಹೊಂದಿದ್ದಾರೆ. ಇದು ಅವರು ಬ್ರಿಟಿಷ್ ಪ್ರಜೆ ಎಂದು ಸಾಬೀತುಪಡಿಸುತ್ತದೆ. ಇದರಿಂದಾಗಿ ಅವರು ಭಾರತದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಿದ್ದಾರೆ. ಲೋಕಸಭಾ ಸದಸ್ಯ ಹುದ್ದೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದ್ದಾರೆ.

ರಾಹುಲ್​ ದ್ವಿಪೌರತ್ವದ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಎರಡು ಬಾರಿ ದೂರು ಸಲ್ಲಿಸಲಾಗಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪಿಐಎಲ್​ ಸಲ್ಲಿಸಲಾಗಿದೆ ಎಂದು ಎಂದು ಅರ್ಜಿದಾರರು ಹೇಳಿದ್ದಾರೆ.

ಇದಕ್ಕೆ ಪೀಠವು, ಗೃಹ ಸಚಿವಾಲಯವು ಏನೆಲ್ಲಾ ಕ್ರಮಗಳನ್ನು ಕೈಗೊಂಡಿದೆ. ತನಿಖೆಯ ಹಂತದ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಲು ಸೂಚಿಸಿತು. ಅರ್ಜಿಯ ವಿಚಾರಣೆಯನ್ನು ಡಿಸೆಂಬರ್​ 19ಕ್ಕೆ ಮುಂದೂಡಿ, ಅಂದು ಪೂರ್ಣ ಮಾಹಿತಿಯನ್ನು ತನ್ನ ಮುಂದಿಡಲು ಆದೇಶಿಸಿತು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

‘ಪೂಜಾ ಸ್ಥಳ ಕಾಯ್ದೆ’ಯಡಿ ಹೊಸ ದಾವೆ : ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಪೂಜಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕತೆ ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್​ನಲ್ಲಿ ನಡೆಯಿತು. ಯಾವುದೇ ಮಸೀದಿಯ ಕೆಳಗೆ ದೇವಾಲಯವಿದೆಯೇ ಎಂಬುದನ್ನು ಪತ್ತೆ...

ಶಾಲೆಗಳ 2024-25 ನೇ ಸಾಲಿನ ‘ಶೈಕ್ಷಣಿಕ’ ಪ್ರವಾಸ ರದ್ದು

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ 2024-25 ನೇ ಸಾಲಿನ ಶೈಕ್ಷಣಿಕ ಪ್ರವಾಸ ಕುರಿತು ವಾಟ್ಸಾಪ್ನಲ್ಲಿ ಹರಿದಾಡುತ್ತಿದೆ ಎನ್ನಲಾದ ಸಂದೇಶದ ಕುರಿತು ಸೃಷ್ಟಿಕರಣವನ್ನು ನೀಡಲಾಗಿದೆ. ಈ...

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...