ಬೆಂಗಳೂರು: ಭಾರಿ ಮಳೆಯಿಂದ ಜನರ ಪರಿಸ್ಥಿತಿ ಹದಗೆಡುತ್ತಿದ್ದು, ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಯಿಂದಾಗಿ ಹಲವೆಡೆ ಅವಾಂತರವೇ ಸೃಷ್ಠಿಯಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಗದೀಶ್ ಅವರು ಆದೇಶಿಸಿದ್ದಾರೆ.
ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ.
ಬೆಂಗಳೂರಿನ ಎಲ್ಲ ತಾಲೂಕಿನ ಅಂಗನಾವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದ್ದು, ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ, ಐ. ಟಿ. ಐ ಗಳಿಗೆ ರಜೆ ಇರಲ್ಲ ಇನ್ನು ರಜೆ ನೀಡಲಾಗಿರುವ ಶಾಲೆಗಳಿಗೆ ಕಲಿಕಾ ಸಮಯಾ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಿದ್ದಾರೆ.
ಈಗಾಗಲೇ ಬೆಂಗಳೂರಿನಲ್ಲಿ ಮಳೆ ಭಾರಿ ಅವಾಂತರಗಳನ್ನೇ ಸೃಷ್ಟಿಸಿದೆ. ರಸ್ತೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಜನರ ಜೀವನ ಅಸ್ತವ್ಯಸ್ತ ಮಾಡಿದೆ. ನಿರಂತರ ಮಳೆಯಿಂದ ಸಿಲಿಕಾನ್ ಸಿಟಿ ಜನರಿಗೆ ಸಂಕಷ್ಟಕ್ಕೆ ಗುರಿ ಮಾಡಿದೆ.
ಈ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ಇದರ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.