spot_img
spot_img

RAJU JAMES BOND : ಫೆ.14ರಂದು ‘ರಾಜು ಜೇಮ್ಸ್ ಬಾಂಡ್’ ನಿಮ್ಮ ಮುಂದೆ

spot_img
spot_img

Share post:

Mysore News:

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸತ್ಯ ಪಿಕ್ಚರ್ಸ್ ಮೂಲಕ ರಾಜ್ಯಾದ್ಯಂತ 200ಕ್ಕೂ ಅಧಿಕ ಟಾಕೀಸ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಹುಬ್ಬಳ್ಳಿಯ ಮೃದುಲಾ ಸಿನಿಮಾದ ನಾಯಕಿ. ಲಂಡನ್​ನಲ್ಲಿ ನೆಲೆಸಿರುವ ಕರ್ನಾಟಕದ ಮಂಜುನಾಥ್​ ವಿಶ್ವಕರ್ಮ ಹಾಗೂ ಕಿರಣ್​ ಬರ್ತೂರ್​ ಸಿನಿಮಾ ನಿರ್ಮಿಸಿದ್ದಾರೆ” ಎಂದು ಹೇಳಿದರು.

‘ಫಸ್ಟ್​​​​​​​​ ರ್‍ಯಾಂಕ್​​ ರಾಜು’ ಖ್ಯಾತಿಯ ನಟ ಗುರುನಂದನ್​​​ ಅಭಿನಯದ ‘RAJU JAMES BOND’​​​​ ಸಿನಿಮಾ ಫೆ.14ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಕುರಿತು ಚಿತ್ರದ ನಿರ್ದೇಶಕ ದೀಪಕ್ ಮಧುವನಹಳ್ಳಿ ಮಾಹಿತಿ ನೀಡಿದ್ದಾರೆ. RAJU JAMES BOND ನಟ ಗುರುನಂದನ್​ ಮಾತನಾಡಿ, ಈ ಹಿಂದೆ ನಾನು ಮಾಡಿದ ಚಿತ್ರಗಳಿಗಿಂತಲೂ ಈ ಚಿತ್ರದ ಪಾತ್ರ ವಿಭಿನ್ನವಾಗಿದೆ.

ಸಂಡೂರು ಹಾಗೂ ವಿದೇಶದಲ್ಲಿಯೂ ಚಿತ್ರೀಕರಿಸಲಾಗಿದೆ. RAJU JAMES BOND ಈಗಾಗಲೇ ಚಿತ್ರದ ಟ್ರೇಲರ್​​, ಗೀತೆಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರವಿಶಂಕರ್​​, ಸಾಧು ಕೋಕಿಲ, ಅಚ್ಯುತ್‌ ಕುಮಾರ್​​, ಚಿಕ್ಕಣ್ಣ, ಜೈಜಗದೀಶ್​, ತಬಲಾ ನಾಣಿ, ಮಂಜುನಾಥ್​ ಹೆಗಡೆ, ವಿಜಯ್​​​ ಚೆಂಡೂರ್​ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎಂದರು.

RAJU JAMES BOND ನಿರ್ಮಾಪಕ ಕಿರಣ್​ ಬರ್ತೂರ್​ ಮಾತನಾಡಿ, ಹಳ್ಳಿಯ ಹುಡುಗ ರಾಜು, ಓದಿ ವಿದ್ಯಾವಂತನಾಗಿ ಬ್ಯಾಂಕ್​ ಮ್ಯಾನೇಜರ್​ ಆಗಬೇಕೆಂದು ಹೊರಡುತ್ತಾನೆ. ಹಾಗಂತ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುವುದು ಆತ ಅಂದುಕೊಂಡಷ್ಟು ಸುಲಭವಾಗಿರಲ್ಲ.

ಆತನ ಮುಂದೆ ಹಲವಾರು ಸಂದಿಗ್ಧ ಪರಿಸ್ಥಿತಿಗಳು ಎದುರಾಗುತ್ತವೆ. ಆತ ಅದನ್ನೆಲ್ಲ ನಿಭಾಯಿಸಿ ಹೇಗೆ ಹಳ್ಳಿ ಜನರ ಪಾಲಿಗೆ ಜೇಮ್ಸ್ ಬಾಂಡ್ ಆಗುತ್ತಾನೆ ಎನ್ನುವುದು ಚಿತ್ರದ ಒನ್‌ಲೈನ್ ಸ್ಟೋರಿ ಎಂದರು. ನಾಯಕಿ ಮೃದುಲಾ ಮಾತನಾಡಿ, “ನಾನು ಮೂಲತಃ ಹುಬ್ಬಳ್ಳಿಯ ಹುಡುಗಿ. ಇದು ನನ್ನ ಮೊದಲ ಸಿನಿಮಾ. ಟೀಚರ್ ಪಾತ್ರ. ಚಿತ್ರದಲ್ಲಿ ನಾಯಕನಿಗೆ ಬದುಕಿನ ಪಾಠ ಹೇಳಿಕೊಟ್ಟಿದ್ದೇನೆ” ಎಂದು ತಿಳಿಸಿದರು.

ಇದನ್ನು ಓದಿರಿ : within 6 Months Climate Finance Should Be Ready ?

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...