spot_img
spot_img

RAM GOPAL VARMA : ಪೊಲೀಸರ ಎದುರು ಹಾಜರಾಗಲಿರುವ ರಾಮ್ ಗೋಪಾಲ್ ವರ್ಮಾ

spot_img
spot_img

Share post:

Ongole (Andhra Pradesh) News:

ಕಳೆದ ಚುನಾವಣೆಗೂ ಮುನ್ನ ರಾಜಕೀಯ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಿರ್ದೇಶಕ RAM GOPAL VARMA ಇಂದು ಓಂಗೋಲ್ ಗ್ರಾಮೀಣ ಪೊಲೀಸರ ಎದುರು ಹಾಜರಾಗಲಿದ್ದಾರೆ. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನಿರ್ದೇಶಕ RAM GOPAL VARMA ಇಂದು ಓಂಗೋಲ್ ಗ್ರಾಮೀಣ ಪೊಲೀಸರೆದುರು ವಿಚಾರಣೆಗೆ ಹಾಜರಾಗಲಿದ್ದಾರೆ.

Allegation of derogatory remarks against political leaders:

ಚುನಾವಣಾ ಪ್ರಚಾರದ ಸಮಯದಲ್ಲಿ, ವರ್ಮಾ ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು (ವೈಎಸ್ಆರ್‌ಸಿಪಿ) ಬೆಂಬಲಿಸಿ ರಾಜಕೀಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾಗ ಈ ಪೋಸ್ಟ್‌ಗಳನ್ನು ಮಾಡಲಾಗಿದೆ ಎಂಬ ಆರೋಪ ಇದೆ. ಮಡ್ಡಿಪಾಡು ಮಂಡಲದ ಟಿಡಿಪಿ ಪ್ರಧಾನ ಕಾರ್ಯದರ್ಶಿ ಎಂ.ರಾಮಲಿಂಗಂ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

RAM GOPAL VARMA ಅವರು ಆಗಿನ ವಿರೋಧ ಪಕ್ಷದ ನಾಯಕ ಮತ್ತು ಹಾಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಸಚಿವ ನಾರಾ ಲೋಕೇಶ್ ಅವರನ್ನು ಗುರಿಯಾಗಿಸಿಕೊಂಡು ಸೋಷಿಯಲ್​ ಮೀಡಿಯಾ ಪೋಸ್ಟ್‌ಗಳನ್ನು ಶೇರ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Legal fight:

ಈ ಹಿಂದೆ, ಜಿಲ್ಲಾ ಪೊಲೀಸರು ವರ್ಮಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅದಾಗ್ಯೂ, ನಿರ್ದೇಶಕರು ತಾವು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಮುಂದಿನ ದಿನಾಂಕದಲ್ಲಿ ಹಾಜರಾಗುವುದಾಗಿ ವಾಟ್ಸ್​ಆ್ಯಪ್​ ಮೂಲಕ ಪ್ರತಿಕ್ರಿಯಿಸಿದ್ದರು.

ಇದರ ಹೊರತಾಗಿಯೂ, ಅವರು ಹಾಜರಾಗಲು ವಿಫಲರಾದರು.ಪೊಲೀಸರು ಅವರನ್ನು ಬಂಧಿಸುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ವರ್ಮಾ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಈ ಸಮಯದಲ್ಲಿ, ಅವರು ನ್ಯಾಯಾಲಯದಲ್ಲಿ ಕ್ವ್ಯಾಶ್​ ಪಿಟಿಶನ್​​ ಸಲ್ಲಿಸಿದ್ದರು.

ತಮ್ಮ ವಿರುದ್ಧದ ಎಫ್‌ಐಆರ್ ಅನ್ಯಾಯ, ರಾಜಕೀಯ ಪ್ರೇರಿತವಾಗಿದೆ ಎಂದು ವಾದಿಸಿದ್ದರು. ಇನ್ನೂ, ರಾಮ್​​ ಗೋಪಾಲ್​ ವರ್ಮಾ ದೂರದರ್ಶನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡರು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದರು. ನ್ಯಾಯಾಲಯವು ಅಂತಿಮವಾಗಿ ಅವರಿಗೆ ಜಾಮೀನು ನೀಡಿತು. ಆದರೆ, ಪೊಲೀಸ್ ತನಿಖೆಗೆ ಸಹಕರಿಸುವಂತೆ ಸೂಚಿಸಿತ್ತು.

Alleged financial dealings with YSRCP:

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ವರ್ಮಾ ಅವರ ‘ವ್ಯೂಹಮ್’ ಚಿತ್ರಕ್ಕಾಗಿ ಹಣ ಹಂಚಿಕೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಇದೀಗ ವರ್ಮಾ ಒಂಗೋಲ್ ಗ್ರಾಮೀಣ ಪೊಲೀಸರ ಮುಂದೆ ಹಾಜರಾಗಲು ಸಿದ್ಧರಾಗಿರುವುದರಿಂದ, ತನಿಖೆಯಿಂದ ಯಾವ ಹೊಸ ವಿವರಗಳು ಹೊರಬರಬಹುದು ಎಂಬ ಬಗ್ಗೆ ತೀವ್ರ ಕುತೂಹಲ ಇದೆ.

ಇದನ್ನು ಓದಿರಿ : Indian Nationals Received Over 72 Per Cent Of All H1B Visas Issued From Oct 2022-Sept 2023: Govt

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...