spot_img
spot_img

2025ರ ಜ.22ಕ್ಕೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನಾಚರಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗೊಂಡು ಮುಂದಿನ ಜನವರಿ 22 ಕ್ಕೆ ಬರೊಬ್ಬರಿ ಒಂದು ವರ್ಷವಾಗುತ್ತದೆ. ಐನೂರು ವರ್ಷಗಳ ಕಾಯುವಿಕೆ ಕೊನೆಗೊಂಡು ಶ್ರೀರಾಮ ಜನ್ಮಭೂಮಿಯಲ್ಲಿಯೇ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ ಅಂದಿಗೆ ಒಂದು ವರ್ಷ ಪೂರ್ಣಗೊಳ್ಳುತ್ತದೆ.

ಈ ಭಾರಿ ವರ್ಷಾಚರಣೆ ಅದ್ಧೂರಿಯಾಗಿ ನಡೆಯಲಿದೆ ಎಂಬ ಭರವಸೆಯಲ್ಲಿ ರಾಮಭಕ್ತರು ಖುಷಿಯಲ್ಲಿ ಇದ್ದರು. ಆದ್ರೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಜನವರಿ 22 ರಂದು ವರ್ಷಾಚರಣೆ ಮಾಡುವುದಿಲ್ಲ. ಅದರ ಬದಲು ಬೇರೆ ದಿನಾಂಕದಂದು ವರ್ಷಾಚರಣೆಯ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಹೇಳಿದೆ.

ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನೀಡಿರುವ ಮಾಹಿತಿ ಪ್ರಕಾರ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ವರ್ಷಾಚರಣೆಯನ್ನು ಜನವರಿ 11 ರಂದೇ ಆಚರಿಸಲು ನಿರ್ಧಾರ ಮಾಡಿದೆ. ರಾಮಜನ್ಮಭೂಮಿಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿದ್ದು 22 ಜನವರಿ 2024ರಂದು.

ಪ್ರಧಾನಿ ನರೇಂದ್ರ ಮೋದಿಯವರಿಂದ ಪೂಜಾ ವಿಧಿ ವಿಧಾನಗಳು ನಡೆದಿದ್ದವು. ಇಡೀ ದೇಶವೇ ಅದನ್ನು ಅಪ್ಪಟ ಹಬ್ಬಂದಂತೆ ಸಡಗರಿಂದ ಸಂಭ್ರಮಿಸಿತ್ತು. ಪ್ರತಿವರ್ಷವೂ ಈ ದಿನವನ್ನು ದೀಪಾವಳಿಯ ಹಾಗೆಯೇ ಆಚರಿಸಲು ಸಿದ್ಧತೆ ನಡೆಸಿತ್ತು. ಆದ್ರೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಜನವರಿ 22 ಅಲ್ಲ, ಜನವರಿ 11 ರಂದು ವರ್ಷಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದಕ್ಕೆ ಕಾರಣವನ್ನು ತೆರೆದಿಟ್ಟಿರುವ ಅಯೋಧ್ಯಾ ರಾಮ ಮಂದಿರದ ಟ್ರಸ್ಟ್​ನವರು. ಹಿಂದೂ ಪಂಚಾಗದ ಪ್ರಕಾರವೇ ವರ್ಷಾಚರಣೆಯನ್ನು ಮಾಡಲಾಗುತ್ತದೆ. ಹೀಗಾಗಿ ದಿನಾಂಕ ಜನವರಿ 22ಕ್ಕಿಂತ ಮುಂಚೆಯೇ ಬಂದಿದೆ. ಪೌಶ್​ ಶುಕ್ಷ ದ್ವಾದಶಿಯಂದೇ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿತ್ತು. ಇದನ್ನು ಕೂರ್ಮ ದ್ವಾದಶಿ ಅಂತಲೂ ಕರೆಯುತ್ತಾರೆ.

2025ರಲ್ಲಿ ಇದು ಜನವರಿ 11 ರಂದು ಬಂದಿರುವ ಕಾರಣ ಜನವರಿ 11ರಂದೇ ವರ್ಷಾಚರಣೆ ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ ಎಂದು ಹೇಳಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...