ಬೆಂಗಳೂರು: ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಕುರಿ ಮಾಂಸದ ಹೆಸರಲ್ಲಿ ನಾಯಿ ಮಾಂಸ ಸಾಗಾಟ ಆರೋಪ: ಹಿಂದುಪರ ಕಾರ್ಯಕರ್ತರು ಆಕ್ರೋಶ
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಹೆಸರು ಬದಲಾವಣೆಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾದ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ ಎಂದರು.
ಜಿಲ್ಲೆಯ ಜನರ ಬೇಡಿಕೆಗಳನ್ನ ಆಧರಿಸಿ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ಮಾನಕರಣ ಮಾಡಿ ಹೆಸರು ಬದಲಾವಣೆ ಮಾಡಲಾಗಿದೆ. ಸದ್ಯ ರಾಮನಗರ ಜಿಲ್ಲೆ ಹೆಸರು ಮಾತ್ರ ಬದಲಾಗುತ್ತದೆ, ರಾಮನಗರ ಬೆಂಗಳೂರಿನ ಭಾಗವಾಗಿದೆ. ಕಂದಾಯ ಇಲಾಖೆಯಿಂದ ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ಹೇಳಿದರು.