Bangalore News:
ಘಟನಾ ಸ್ಥಳಕ್ಕೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೆ ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಹಿಳೆಯ ಮೇಲೆ RAPE ಎಸಗಿರುವುದು ತಿಳಿದು ಬಂದಿದೆ.
ಪತಿಯೊಂದಿಗೆ ವಾಸವಿದ್ದ ಮಹಿಳೆ ನಗರದ ಖಾಸಗಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮನೆಗೆಲಸ ಮಾಡಿಕೊಂಡಿದ್ದರು.ಮಹಿಳೆಯೊಬ್ಬರ ಮೇಲೆ RAPEಗೈದು ಬಳಿಕ ಹತ್ಯೆಗೈದಿರುವ ಘಟನೆ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಸ್ಥಿತಿಯಲ್ಲಿ 28 ವರ್ಷದ ಮಹಿಳೆಯ ಶವ ಕಲ್ಕೆರೆ ಲೇಕ್ ಬಳಿಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ಇತ್ತೀಚೆಗಷ್ಟೇ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು RAPE ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿರುವ ಆರೋಪ ಕೇಳಿ ಬಂದಿತ್ತು. ಜನವರಿ 19ರಂದು ರಾತ್ರಿ 11:30ರ ಸುಮಾರಿಗೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್‌ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 37 ವರ್ಷದ ಮಹಿಳೆಯೊಬ್ಬರು ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇದ್ದನು ಓದಿರಿ :BUSINESSMAN HOUSE ROBBERY CASE:ಕೇರಳದಲ್ಲಿ ಆರೋಪಿ ಸೆರೆ.