spot_img
spot_img

RCB VS GG FREE STREAMING:ಪಂದ್ಯ ಉಚಿತವಾಗಿ ವೀಕ್ಷಣೆಗೆ ಹೀಗೆ ಮಾಡಿ!

spot_img
spot_img

Share post:

wpl 2025 rcb was jig news:

ಇಂದಿನಿಂದ ಮಹಿಳಾ ಪ್ರೀಮಿಯರ್​ ಲೀಗ್​ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಗುಜರಾತ್​ ಜೈಂಟ್ಸ್​ ತಂಡ ಮುಖಾಮುಖಿ ಆಗಲಿವೆ.

ಉಭಯ ತಂಡಗಳ ನಡುವಿನ ಈ ಪಂದ್ಯವು ಸಂಜೆ 7 ಗಂಟೆಗೆ ವಡೋದರಾ ಮೈದಾನದಲ್ಲಿ ಪ್ರಾರಂಭವಾಗಲಿದೆ. ಆಸ್ಟ್ರೇಲಿಯಾದ ಸ್ಟಾರ್ ಆಟಗಾರ್ತಿ ಆಶ್ಲಿ ಗಾರ್ಡ್ನರ್​ ನಾಯಕತ್ವದಲ್ಲಿ ಗುಜರಾತ್ ಜೈಂಟ್ಸ್ ಕಣಕ್ಕೆ ಇಳಿಯಲಿದೆ. ಒಟ್ಟು ಐದು ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ದೆಹಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ WPL ಪ್ರಶಸ್ತಿಗಾಗಿ ಸ್ಪರ್ಧಿಸಲಿವೆ. ಮಹಿಳಾ ಪ್ರೀಮಿಯರ್​ ಲೀಗ್​ (WPL)ನ 3ನೇ ಆವೃತ್ತಿ ಇಂದಿನಿಂದ ಪ್ರಾರಂಭವಾಗಲಿದೆ.

ಕಳೆದ ಸೀಸನ್​ನಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದ್ದ ಸ್ಮೃತಿ ಮಂಧಾನ ನೇತೃತ್ವದ RCB ಉದ್ಘಾಟನೆ ಪಂದ್ಯದಲ್ಲಿಂದು ಗುಜರಾತ್​ ಜೈಂಟ್ಸ್​ ತಂಡವನ್ನು ಎದುರಿಸಲಿದೆ.ಪ್ರತಿ ತಂಡವು ಇತರ ತಂಡಗಳ ವಿರುದ್ಧ ಎರಡು ಪಂದ್ಯಗಳನ್ನು ಆಡಲಿವೆ. ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ನೇರವಾಗಿ ಫೈನಲ್‌ಗೆ ಎಂಟ್ರಿ ಕೊಡಲಿದೆ. ಎರಡನೇ ಮತ್ತು ಮೂರನೇ ಸ್ಥಾನ ಪಡೆದ ತಂಡಗಳ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಗೆದ್ದ ತಂಡ ಫೈನಲ್‌ಗೆ ತಲುಪಲಿದೆ.

WPL at 4 Grounds: ವಡೋದರಾದ ಕೋಟಂಬಿ ಕ್ರೀಡಾಂಗಣ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ, ಲಕ್ನೋದ ಏಕಾನಾ ಕ್ರೀಡಾಂಗಣ ಮತ್ತು ಮುಂಬೈನ ಬ್ರಬೋರ್ನ್ ಕ್ರೀಡಾಂಗಣಗಳು WPL ಪಂದ್ಯಗಳಿಗೆ ಆತಿಥ್ಯ ವಹಿಸಿಕೊಳ್ಳಲಿವೆ. ಈ ಬಾರಿ ಒಟ್ಟು ನಾಲ್ಕು ಸ್ಥಳಗಳಲ್ಲಿ ಫೈನಲ್ ಪಂದ್ಯ ಸೇರಿದಂತೆ ಒಟ್ಟು 22 ಪಂದ್ಯಗಳು ನಡೆಯಲಿವೆ.

Head to Head:WPLನಲ್ಲಿ ಆರ್​​ಸಿಬಿ ಮತ್ತು ಗುಜರಾತ್​ ಜೈಂಟ್ಸ್​ ಒಟ್ಟು 4 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಎರಡೂ ತಂಡಗಳು ತಲಾ 2 ಬಾರಿ ಗೆಲುವು ಸಾಧಿಸಿವೆ. ​

Where to watch the match free: ಜಿಯೋ ಸಿನಿಮಾಸ್‌ನಲ್ಲಿ ಈ ಪಂದ್ಯಾವಳಿಗಳನ್ನು ಉಚಿತವಾಗಿ ವೀಕ್ಷಿಸಬಹುದು.ಮಹಿಳಾ ಪ್ರೀಮಿಯರ್​ ಲೀಗ್​ 3ನೇ ಆವೃತ್ತಿಯ ಪಂದ್ಯಗಳ ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಒಟಿಟಿಯಲ್ಲಿ, ಈ ಪಂದ್ಯಗಳನ್ನು ಜಿಯೋ ಸಿನಿಮಾಸ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ.

Possible Teams- RCB:ಸ್ಮೃತಿ ಮಂಧಾನ (ನಾಯಕಿ), ಡೇನಿಯಲ್ ವ್ಯಾಟ್-ಹಾಡ್ಜ್, ಎಲ್ಲಿಸ್ ಪೆರ್ರಿ, ರಾಘ್ವಿ ಬಿಸ್ಟ್, ಸಬ್ಬಿನೇನಿ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ರಿಚಾ ಘೋಷ್ (ವಿಕೆಟ್ ಕೀಪರ್​), ಕನಿಕಾ ಅಹುಜಾ, ಕಿಮ್ ಗಾರ್ತ್, ರೇಣುಕಾ ಠಾಕೂರ್ ಸಿಂಗ್, ಪ್ರೇಮಾ ರಾವತ್, ಸೋಫ್ ಪಟಲೈನ್, ಏಕ್ತಾ ಬಿಷ್ಟ್, ಜಾಗರವಿ ಪವಾರ, ಆಶಾ ಸೋಭಾನ, ಜೋಶಿತ ವಿ ಜೆ.

Gujarat Giants:ಲಾರಾ ವೊಲ್ವಾರ್ಡ್ಟ್, ಬೆತ್ ಮೂನಿ (ವಿಕೆಟ್​ ಕೀಪರ್​), ದಯಾಂಡ್ರಾ ಡಾಟಿನ್, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್(ನಾಯಕಿ), ಸಿಮ್ರಾನ್ ಶೇಖ್, ದಯಾಲನ್ ಹೇಮಲತಾ, ಸಯಾಲಿ ಸತ್ಘರೆ, ಮೇಘನಾ ಸಿಂಗ್, ಪ್ರಿಯಾ ಮಿಶ್ರಾ, ತನುಜಾ ಕನ್ವರ್, ಮನ್ನತ್ ಪ್ರಕಾಶ್, ಕಾಶ್ವೀ ಪ್ರಕಾಶ್, ಮನ್ನತ್ ಕಶ್ಯಪ್, ಶಾಕ್ ನಾಮ್ ಕಶ್ಯಪ್ ಫುಲ್ಮಾಲಿ, ಫೋಬೆ ಲಿಚ್ಫೀಲ್ಡ್, ಡೇನಿಯಲ್ ಗಿಬ್ಸನ್.

 

ಇದನ್ನು ಓದಿರಿ :Here’s the list of players who have captained Royal Challengers Bengaluru

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...