spot_img
spot_img

ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಮೂಲಕ ಮಂಗಳೂರು ವಿಮಾನ್ ನಿಲ್ದಾಣದಲ್ಲಿ ದಾಖಲೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮಂಗಳೂರು: ​​ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಒಂದು ದಿನದಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.

ಭಾನುವಾರ (ನವೆಂಬರ್ 9) ವಿಮಾನ ನಿಲ್ದಾಣ 7,637 ಪ್ರಯಾಣಿಕರನ್ನು ನಿರ್ವಹಿಸಿದೆ. ಈ ಪೈಕಿ 7,498 ವಯಸ್ಕರು ಮತ್ತು 139 ಶಿಶುಗಳಿದ್ದರು. ಈ ಹಿಂದೆ ಡಿಸೆಂಬರ್ 31, 2023ರಂದು 7,548 ಪ್ರಯಾಣಿಕರು ಇಲ್ಲಿಂದ ಪ್ರಯಾಣಿಸಿದ್ದರು.

ಮಂಗಳೂರು ವಿಮಾನ ನಿಲ್ದಾಣ 25 ನವೆಂಬರ್ 2023ರಂದು 7,452 ಪ್ರಯಾಣಿಕರನ್ನು, ಆಗಸ್ಟ್ 15, 2024 ರಂದು 7,406 ಪ್ರಯಾಣಿಕರನ್ನು, ನವೆಂಬರ್ 19, 2023ರಂದು 7,399 ಪ್ರಯಾಣಿಕರು ಮತ್ತು 10 ಡಿಸೆಂಬರ್ 2023ರಂದು 7,350 ಪ್ರಯಾಣಿಕರನ್ನು ನಿರ್ವಹಿಸಿತ್ತು. ಇವು ಒಂದೇ ದಿನದಲ್ಲಿ 7,000ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದ ದಾಖಲೆಯಾಗಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಈ ಮೊದಲು ಏರ್​​ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನಿರ್ವಹಿಸುತ್ತಿತ್ತು.

2020 ಅಕ್ಟೋಬರ್ 31ರ ಬಳಿಕ ಅದಾನಿ ಗ್ರೂಪ್​​ ನಿರ್ವಹಿಸುತ್ತಿದೆ. ವಿಮಾನ ನಿಲ್ದಾಣದಲ್ಲಿ ಸದ್ಯ ಇಂಡಿಗೋ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್​ಪ್ರೆಸ್ ಕಾರ್ಯನಿರ್ವಹಿಸುತ್ತಿದೆ.

5 ದೇಶೀಯ ಮತ್ತು 8 ಅಂತಾರಾಷ್ಟ್ರೀಯ ವಿಮಾನಗಳು ಮಂಗಳೂರಿನಿಂದ ಹಾರಾಟ ನಡೆಸುತ್ತಿವೆ. ಬೆಂಗಳೂರು, ಹೈದರಾಬಾದ್, ಚೆನ್ನೈ, ನವದೆಹಲಿ, ಮುಂಬೈಗೆ ಇಲ್ಲಿಂದ ವಿಮಾನ ಸೇವೆ ಲಭ್ಯ. ಹಾಗೆಯೇ ದುಬೈ, ಅಬು ಧಾಬಿ, ದಮಾಮ್, ದೋಹ, ಮಸ್ಕತ್, ಕುವೈತ್, ಜೆಡ್ಡಾ ಮತ್ತು ಬಹರೈನ್​ಗೆ ವಿಮಾನ ಸೇವೆ ಇದೆ.

“ದೇಶೀಯವಾಗಿ ಮುಂಬೈ, ಬೆಂಗಳೂರು ಮತ್ತು ಅಂತಾರಾಷ್ಟ್ರೀಯ ಸೇವೆಯಲ್ಲಿ ದುಬೈ ಮತ್ತು ಅಬು ಧಾಬಿಗೆ ಇಲ್ಲಿಂದ ಹೆಚ್ಚಿನ ಜನ ಪ್ರಯಾಣಿಸುತ್ತಿದ್ದಾರೆ” ಎಂದು ಮಂಗಳೂರು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

“ವಿಮಾನ ನಿಲ್ದಾಣ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಲಾಂಜ್​ನ ವ್ಯವಸ್ಥೆ ಅತ್ಯುತ್ತಮವಾಗಿದೆ. ಹೀಗಾಗಿ, ಹೆಚ್ಚಿನವರು ಇಲ್ಲಿಂದಲೇ ಪ್ರಯಾಣಿಸಲು ಇಚ್ಚಿಸುತ್ತಿದ್ದಾರೆ” ಎಂದು ಪ್ರಯಾಣಿಕ ಸುಹಾನ್ ಆಳ್ವ ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...