spot_img
spot_img

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷಾ : ವಿಶೇಷ ರೈಲು ಸೇವೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹುಬ್ಬಳ್ಳಿ: ಆರ್​ಆರ್​​​ಬಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯಿಂದ ಕಾಯ್ದಿರಿಸದ ವಿಶೇಷ ರೈಲುಗಳ ಸೇವೆ ಒದಗಿಸಲಾಗುತ್ತಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್​ಆರ್​​​ಬಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ಮತ್ತು ಕರ್ನೂಲ್ ಸಿಟಿ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ಕಾಯ್ದಿರಿಸದ ರೈಲು ಸೇವೆ ಒದಗಿಸಲು ರೈಲ್ವೆ ಮಂಡಳಿ ಸೂಚಿಸಿದೆ.

ರೈಲು ಸಂಖ್ಯೆ 07315 ಎಸ್ಎಸ್ಎಸ್ ಹುಬ್ಬಳ್ಳಿ-ಕರ್ನೂಲ್ ಸಿಟಿ ಕಾಯ್ದಿರಿಸದ ವಿಶೇಷ ಎಕ್ಸ್​​ಪ್ರೆಸ್ ರೈಲು ನವೆಂಬರ್ 24, 25, 26 ಮತ್ತು 27ರಂದು ರಾತ್ರಿ 8:15 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಗ್ಗೆ 6:00 ಗಂಟೆಗೆ ಕರ್ನೂಲ್ ಸಿಟಿ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 07316 ಕರ್ನೂಲ್ ಸಿಟಿ-ಎಸ್ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ಎಕ್ಸ್​ಪ್ರೆಸ್ ರೈಲು ನವೆಂಬರ್ 25, 26, 27 ಮತ್ತು 28ರಂದು ಬೆಳಗ್ಗೆ 07:30 ಗಂಟೆಗೆ ಕರ್ನೂಲ್ ಸಿಟಿ ನಿಲ್ದಾಣದಿಂದ ಹೊರಟು, ಅದೇ ದಿನ ಸಂಜೆ 4:15 ಗಂಟೆಗೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲುಗಳು ಗದಗ, ಕೊಪ್ಪಳ, ಹೊಸಪೇಟೆ, ತೋರಣಗಲ್ಲು, ಬಳ್ಳಾರಿ, ಗುಂತಕಲ್ ಮತ್ತು ಡೋನ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ರೈಲು ಸಾಮಾನ್ಯ ದ್ವಿತೀಯ ದರ್ಜೆ (8) ಮತ್ತು ವಿಕಲಾಂಗರ ಬೋಗಿಗಳೊಂದಿಗೆ ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್ (2) ಸೇರಿದಂತೆ 10 ಬೋಗಿಗಳನ್ನು ಹೊಂದಿರಲಿದೆ.

ಪ್ರಯಾಣಿಕರು ಅಧಿಕೃತ ಭಾರತೀಯ ರೈಲ್ವೆ ವೆಬ್​ಸೈಟ್​ಗೆ (www.enquiry.indianrail.gov.in) ಭೇಟಿ ನೀಡುವ ಮೂಲಕ, NTES ಅಪ್ಲಿಕೇಶನ್ ಬಳಸಿ ಅಥವಾ 139ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ಪರಿಶೀಲಿಸಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...