ಅಸಿಸ್ಟಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಶನ್(IRCTC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ.
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಗರಿಷ್ಠ ತಿಂಗಳ ವೇತನ 2 ಲಕ್ಷ ರೂ. ಇರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
IRCTC ಹೊರಡಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಅರ್ಹತೆ, ವಯೋಮಿತಿ, ವೇತನ ಸೇರಿದಂತೆ ಎಲ್ಲಾ ಮಾಹಿತಿ ನೀಡಲಿದೆ. ಸದ್ಯ ನೇಮಕಾತಿ ವಯೋಮಿತಿ ಗರಿಷ್ಠ 55 ವರ್ಷ. ಇದೇ ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಲಿಖಿತ ಪರೀಕ್ಷೆ ಇಲ್ಲದಿರುವ ಕಾರಣ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಇಲಾಖೆ ಆಯ್ಕೆ ಮಾಡಲಿದೆ.
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಮಾಸಿಕ 15,600 ರೂ.ನಿಂದ ಗರಿಷ್ಠ 39,100 ರೂ.ವರೆಗೆ ನಿಗದಿಪಡಿಸಲಾಗಿದೆ. ಇನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 70 ಸಾವಿರ ರೂ.ನಿಂದ 2 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನಾಂವಾಗಿದೆ. ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರ, ವಿದ್ಯಾರ್ಹತೆ ದಾಖಲೆ ಸೇರಿದಂತೆ ಇತರ ದಾಖಲೆಗಳ ಪತ್ರಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಅಥವಾ IRCTC ಇ-ಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ಬಳಿಕ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇ-ಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಂದರ್ಶನದ ಮೂಲಕ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.