ಬೆಂಗಳೂರು: ಹಣಕಾಸು ವರ್ಷದ ಎರಡನೇ ತ್ತೈಮಾಸಿಕ ಅವಧಿ ಮುಗಿದ ಹಿನ್ನಲೇ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನಿರೀಕ್ಷಿತ ಗುರಿ ಸಾಧನೆ ಆಗದಿರುವ ಬಗ್ಗೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಪಿಸಿಎಲ್‌ನ ಶಕ್ತಿ ಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ನೀಡಲಾದ ವಾರ್ಷಿಕ ರಾಜಸ್ವ ಸಂಗ್ರಹ ಗುರಿ 26 ಸಾವಿರ ಕೋಟಿ ರೂ. ಆಗಿದ್ದು, ಈ ಪೈಕಿ 13 ಸಾವಿರ ಕೋಟಿ ರೂ. ಸಂಗ್ರಹವಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ಪೈಕಿ 13 ಸಾವಿರ ಕೋಟಿ ರೂ. ಸಂಗ್ರಹವಾಗಿರುವ ಮಾಹಿತಿಯನ್ನು ನೀಡಿದ್ದಾರೆ.
ತಿಕ್ರಿಯಿಸಿದ ಸಿಎಂ, ಇದುವರೆಗೆ ಶೇ.50ರಷ್ಟು ಮಾತ್ರ ಗುರಿ ಸಾಧನೆಯಾಗಿದೆ. ನಿಗದಿತ ಅವಧಿಯಲ್ಲಿ ಶೇ.100ರಷ್ಟು ಗುರಿ ಸಾಧನೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ಮಧ್ಯೆ ಆಸ್ತಿ ನೋಂದಣಿಗೆ ಸೆ. 30ರಿಂದ ಇ-ಖಾತಾ’ ಸಲ್ಲಿಕೆ ಕಡ್ಡಾಯಗೊಳಿಸಲಾಗಿದೆ.ಮುಂಬರುವ ದಿನಗಳಲ್ಲಿ ಆಸ್ತಿ ನೋಂದಣಿ ಮತ್ತು ಆ ಮೂಲಕ ಆದಾಯ ಸಂಗ್ರಹದಲ್ಲಿ ಪರಿಣಾಮ ಬೀರುವ ಸಾಧ್ಯತೆಯೂ ಇದೆ.
ಸಾರಿಗೆ ಇಲಾಖೆಗೆ 13 ಸಾವಿರ ಕೋಟಿ ರೂ. ಆದಾಯ ಸಂಗ್ರಹ ಗುರಿ ನೀಡಲಾಗಿದ್ದು, ಈ ಪೈಕಿ ಶೇ. 89ರಷ್ಟು ಗುರಿ ಸಾಧಿಸಲಾಗಿದೆ.
ಒಳ ಮೀಸಲಾತಿ ಜಾರಿಗೊಳಿಸಲು ಸೋಮ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರಕಾರ ತೀರ್ಮಾನಿಸಿದೆ. ಮಂಗಳವಾರ ಸುದ್ದಿಗಾರರ ಜತೆ ಮಾಡಿನಾಡಿದ ಅವರು, ಒಳ ಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು ಎಂದು ಹೇಳಿದರು.
ಈ ನಿಟ್ಟಿನಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now