ನವದೆಹಲಿ: ದೇಶದ 15 ರಾಜ್ಯಗಳಿಗೆ 1,000 ಕೋಟಿ ರೂಪಾಯಿ ವಿಪತ್ತು ಪರಿಹಾರ ನಿಧಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ರಾಜ್ಯಗಳ ವಿಪತ್ತು ಪರಿಹಾರ ನಿಧಿ ಮತ್ತು ನೈಸರ್ಗಿಕ ವಿಪತ್ತು ನಿಭಾಯಿಸುವ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮಂಗಳವಾರ, 15 ರಾಜ್ಯಗಳಿಗೆ 1,000 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ 139 ಕೋಟಿ ರೂ, ಮಹಾರಾಷ್ಟ್ರಕ್ಕೆ 100 ಕೋಟಿ ರೂ, ಕರ್ನಾಟಕ ಮತ್ತು ಕೇರಳಕ್ಕೆ ತಲಾ 72 ಕೋಟಿ ರೂ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ತಲಾ 50 ಕೋಟಿ ರೂ, ಈಶಾನ್ಯ ರಾಜ್ಯದ 8 ಜಿಲ್ಲೆಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರಾಕ್ಕೆ 378 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷಿ, ಹಣಕಾಸು ಸಚಿವರು ಹಾಗು ನೀತಿ ಆಯೋಗದ ಉಪಾಧ್ಯಕ್ಷರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ಈ ನಿರ್ಧಾರ ಕೈಗೊಂಡಿತು.
ಈ ಸಮಿತಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿ ಪ್ರದೇಶದಲ್ಲಿ ನಾಗರಿಕ ರಕ್ಷಣಾ ಸ್ವಯಂ ಸೇವಕರ ಸಾಮರ್ಥ್ಯ ವೃದ್ಧಿ ಮತ್ತು ತರಬೇತಿ ಯೋಜನೆಗೆ 115.67 ಕೋಟಿ ರೂ ಬಿಡುಗಡೆಗೊಳಿಸಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now